ಆದಿವಾಸಿ ಬುಡಕಟ್ಟುಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರತ್ಯೇಕ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಕಾಡು/ ಕಾಡಂಚಿನ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟುಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕೊಡಗು, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ದಕ್ಶಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಹಾಗೂ ಬುಡಕಟ್ಟು ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ರಾಜ್ಯದ, ಕಾಡು, ಕಾಡಂಚಿನ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟುಗಳ ಒಕ್ಕೂಟದ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಮಾತನಾಡಿದರು.

ರಾಜ್ಯದಲ್ಲಿ 51 ಆದಿವಾಸಿ ಜನಾಂಗಗಳಿದ್ದು, ಸೋಲಿಗ , ಜೇನುಕುರುಬ ಸೇರಿದಂತೆ 12 ಬುಡಕಟ್ಟು ಜನಾಂಗಗಳು ಸೌಲಭ್ಯ ವಂಚಿತವಾಗಿವೆ. ಅವರಲ್ಲಿ ಹಲವರಿಗೆ ಯೋಜನೆಗಳ ಸೌಲಭ್ಯ ಪಡೆಯಲು ಅಗತ್ಯವಿರುವ ದಾಖಲೆಗಳು ಕೂಡ ಇಲ್ಲದ ಪರಿಸ್ಥಿತಿ ಇದೆ. ಶಿಬಿರಗಳನ್ನು ಆಯೋಜಿಸಿ ಆಧಾರ್ ಮುಂತಾದ ದಾಖಲೆಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ನಿಯೋಗವು ಮನವಿ ಮಾಡಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಬಾಂಗ್ಲಾ ವಿರುದ್ಧ ಇಂಗ್ಲೆಂಡ್‌ಗೆ ಭಾರೀ ಗೆಲುವು

ಎಎನ್ಎಮ್, ನರ್ಸಿಂಗ್, ಮುಂತಾದ ಶಿಕ್ಷಣ ಪಡೆದಿರುವ ಬುಡಕಟ್ಟು ಜನಾಂಗಗಳ ಮೊದಲ ಪೀಳಿಗೆಗೆ ಆರೋಗ್ಯ ಇಲಾಖೆಯಲ್ಲಿ ಕೆಲಸ ನೀಡುವ ಬಗ್ಗೆ ಹಾಗೂ ಪ್ರಸ್ತುತ ಅರಣ್ಯ ಇಲಾಖೆಯ ಅರಣ್ಯ ಹುದ್ದೆಗಳಿಗೆ ಅರಣ್ಯವಾಸಿಗಳಿಗೆ ನೀಡಲು ಮರುಆದೇಶ ಹೊರಡಿಸುವ ಬಗ್ಗೆ ಮನವಿ ಮಾಡಲಾಯಿತು.

ರಾಜ್ಯದಲ್ಲಿನ 115 ಆಶ್ರಮ ಶಾಲೆಗಳಲ್ಲಿ ಖಾಯಂ ಶಿಕ್ಷಕರಿಲ್ಲ. ಆದಿವಾಸಿ ಸಮುದಾಯಕ್ಕೆ ಸೇರಿದ ಬಿಎಡ್ ಶಿಕ್ಷಣ ಪಡೆದಿರುವವರನ್ನೇ ಈ ಶಾಲೆಗಳಿಗೆ ನೇಮಕ ಮಾಡುವಂತೆ ಮುಖ್ಯಮಂತ್ರಿಗಳನ್ನು ಕೋರಲಾಯಿತು.

ಆದಿವಾಸಿ ಬುಡಕಟ್ಟುಗಳ ಒಕ್ಕೂಟದ ಡಾ. ರತ್ನಮ್ಮ ಮತ್ತು ತಂಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಹಾಗೂ ಬುಡಕಟ್ಟು ಜನಾಂಗಗಳ ಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ: ಕರ್ನಾಟಕ ಮುಸ್ಲಿಂ ಯುನಿಟಿ

ಹುಬ್ಬಳ್ಳಿ ಯ ವಿದ್ಯಾರ್ಥಿನಿ ನೇಹಾ ಕೊಲೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ...

ಕೇಂದ್ರದ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಯಾಕೆ? ಸಿದ್ದರಾಮಯ್ಯ

"ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ....

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ...