ವಿಜಯನಗರ | ಹಂಪಿ‌ ವಿರೂಪಾಕ್ಷ ದೇವಸ್ಥಾನದಲ್ಲಿ ತುಂಡುಡುಗೆ ನಿಷೇಧ; ಭಕ್ತಿ ಭಾವ ಮೂಡಿಸಲು ಈ ಕ್ರಮ ಎಂದ ಜಿಲ್ಲಾಧಿಕಾರಿ!

Date:

ವಿಜಯನಗರ ಜಿಲ್ಲೆಯ ಹಂಪಿ‌ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದ್ದು, ವಿರೂಪಾಕ್ಷನ ದರ್ಶನ‌ ಪಡೆಯಲು ಸಾಂಪ್ರದಾಯಿಕ ಉಡುಗೆ ಕಡ್ಡಾಯಗೊಳಿಸಿದ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಆದೇಶ ಹೊರಡಿಸಿದ್ದಾರೆ.

ಬರ್ಮುಡ, ಜೀನ್ಸ್‌ ಚಡ್ಡಿ ಧರಿಸಿ ಬಂದರೆ ದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ. ಪಂಚೆ ತೊಟ್ಟು ಸಾಂಪ್ರದಾಯಿಕ ಉಡುಗೆಯಲ್ಲಿ ಬಂದರೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ದೇವಸ್ಥಾನದ ಆವರಣದ ಒಳಗೆ ತುಂಡುಡಿಗೆ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿರೂಪಾಕ್ಷ ದೇವಸ್ಥಾನದ ಆವರಣದ ಒಳಗೆ ತುಂಡುಡುಗೆಗೆಯ ಬದಲು, ಪಂಚೆ, ದೋತಿ, ಸೀರೆ ಇಂತಹ ಸಾಂಪ್ರದಾಯಿಕ ಉಡುಗೆಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ. ಈ ಆದೇಶದ ಬೆನ್ನಲ್ಲೇ ಖುದ್ದು ಜಿಲ್ಲಾಡಳಿತ ಮತ್ತು ಜಿಲ್ಲಾಧಿಕಾರಿಗಳೇ ದೇವಸ್ಥಾನದ ಒಳಗೆ ತುಂಡುಡುಗೆ ಧರಿಸಿ ಪ್ರವೇಶಿಸುತ್ತಿದ್ದವರಿಗೆ ಲುಂಗಿ, ಪಂಚೆಯನ್ನು ತೊಡಿಸಿದ್ದಾರೆ. ವಸ್ತ್ರಸಂಹಿತೆ ಜಾರಿಗೆ ಭಕ್ತರು ಸಹಕರಿಸುವಂತೆ ಇದೇ ವೇಳೆ ಜಿಲ್ಲಾಡಳಿತ ಆಗಮಿಸುವವರಲ್ಲಿ ಮನವಿ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರವಾಸಿ ತಾಣವೂ ಆದ ಹಂಪಿಗೆ ಸಾವಿರಾರು ಮಂದಿ ವಿದೇಶಿಯರು ಸಹ ಬರುತ್ತಾರೆ. ಅವರು ಹೆಚ್ಚಾಗಿ ತುಂಡು ಉಡುಗೆಯಲ್ಲಿ ಬರುತ್ತಿದ್ದು, ಇದರಿಂದ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ ಎಂಬ ದೂರು ಕೇಳಿ ಬಂದಿತ್ತು. ಹೀಗಾಗಿ ವಸ್ತ್ರಸಂಹಿತೆ ಜಾರಿಗೆ ತರಲಾಗಿದೆ. ಮಹಿಳೆಯರು ಸಹ ತುಂಡುಡುಗೆಯಲ್ಲಿ ಬಂದರೆ ಮೈಮೇಲೆ ಶಲ್ಯ ತೊಡಬೇಕಾಗಿದೆ. ಕೊಡುವ ವಸ್ತ್ರಕ್ಕೆ ಸದ್ಯ ಶುಲ್ಕ ಪಡೆಯುತ್ತಿಲ್ಲ. ದೇವರ ದರ್ಶನ ಮಾಡಿದ ಬಳಿಕ ವಸ್ತ್ರವನ್ನು ವಾಪಸ್‌ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ” ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬಿಜೆಪಿ ಶಾಸಕ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ

“ಪ್ರವಾಸಕ್ಕೆ ಬರುವವರು ದೇವಸ್ಥಾನಕ್ಕೆ ಭೇಟಿ ನೀಡುವಾಗ, ಭಕ್ತಿ ಭಾವನೆ ಉದ್ದೀಪನೆಯ ಉಡುಪು ಧರಿಸಿ ದೇವರ ದರ್ಶನ ಪಡೆಯಬೇಕು. ಈ ಸದುದ್ದೇಶದಿಂದ ಜಿಲ್ಲಾಡಳಿತವು ಈ ವಿಶೇಷ ಕ್ರಮ ವಹಿಸಿದೆ” ಎಂದು ಜಿಲ್ಲಾಧಿಕಾರಿ ವಸ್ತ್ರ ಸಂಹಿತೆ ಜಾರಿಗೊಳಿಸಿರುವುದಕ್ಕೆ ಸಮರ್ಥನೆ ನೀಡಿದ್ದಾರೆ. ಹಂಪಿ‌ ವಿರೂಪಾಕ್ಷ ದೇವಸ್ಥಾನವು ಮುಜರಾಯಿ ಇಲಾಖೆಯ ವ್ಯಾಪ್ತಿಗೂ ಒಳಪಟ್ಟಿದೆ.

ಪ್ರವಾಸಿಗರಿಗೆ ಲುಂಗಿ, ಪಂಚೆ ಉಚಿತ ವಿತರಣೆ ಮಾಡುತ್ತಿದ್ದ ವೇಳೆ ಶಾಸಕ ಗವಿಯಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಭಾರೀ ಗಾಳಿ ಮಳೆ; ಸಿಡಿಲ ಹೊಡೆತಕ್ಕೆ 25 ಮೇಕೆಗಳು ಬಲಿ

ದಾವಣಗೆರೆ ಜಿಲ್ಲೆಯ ಹಲವೆಡೆ ಗುರುವಾರ ಸಂಜೆ ಭಾರೀ ಗಾಳಿಯೊಂದಿಗೆ ಗುಡುಗು ಸಿಡಿಲಿನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾದಿಗ ಮೀಸಲಾತಿ ಹೋರಾಟ ಸಮಿತಿ ಬಿಜೆಪಿಗೆ ಬೆಂಬಲ

ಮಾದಿಗ ಜನಾಂಗಕ್ಕೆ ಅಗತ್ಯವಾಗಿ ಬೇಕಾಗಿರುವ ಒಳಮೀಸಲಾತಿಯನ್ನು ಕೇವಲ ನರೇಂದ್ರ ಮೋದಿ ನೇತೃತ್ವದ...

ನೇಹಾ ಕೊಲೆ ಪ್ರಕರಣ | ಎನ್‌ಕೌಂಟರ್‌ ಜಾರಿಯಾಗಬೇಕು: ಸಚಿವ ಸಂತೋಷ್‌ ಲಾಡ್

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದ್ದು, ಇಂತಹ ಪ್ರಕರಣದ ಆರೋಪಿಗೆ...

ಬೆಳಗಾವಿ | ಮಮದಾಪೂರ ಗ್ರಾಮದ ಹೊರವಲಯದಲ್ಲಿ ಮಹಿಳೆಯ ಹತ್ಯೆ

ಸುಮಾರು 25 ರಿಂದ 30 ವರ್ಷದ ಮಹಿಳೆಯ ಕುತ್ತಿಗೆ ಕೊಯ್ದು ನಂತರ...