ಶ್ವಾನಗಳ ಬಗ್ಗೆ ಬಿಜೆಪಿಗೇಕೆ ಇಷ್ಟು ವ್ಯಾಮೋಹ: ಬಿಸ್ಕೆಟ್ ವಿವಾದದ ಬಗ್ಗೆ ರಾಹುಲ್ ಮಾತು

Date:

ಜಾರ್ಖಂಡ್‌ನಲ್ಲಿ ನಡೆದ ಭಾರತ್ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಶ್ವಾನಗಳು ಸೇವಿಸದ ಬಿಸ್ಕೆಟ್‌ಅನ್ನು ಕಾರ್ಯಕರ್ತರಿಗೆ ನೀಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿಗೆ ಶ್ವಾನಗಳ ಬಗ್ಗೆ ಇಷ್ಟೇಕೆ ವ್ಯಾಮೋಹ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನಾನು ಶ್ವಾನ ಹಾಗೂ ಅದರ ಮಾಲೀಕನನ್ನು ಕರೆದೆ. ಆ ಸಂದರ್ಭದಲ್ಲೇ ಶ್ವಾನ ನಿತ್ರಾಣಗೊಂಡು ನಡುಗುತ್ತಿತ್ತು. ನಾನು ಅದಕ್ಕೆ ಆಹಾರ ನೀಡಲು ಪ್ರಯತ್ನಿಸಿದೆ. ಆದರೆ ಅದು ತಿನ್ನದೆ ಭಯಗೊಂಡಿತ್ತು. ನಂತರ ನಾನು ಬಿಸ್ಕೆಟ್‌ಗಳನ್ನು ಶ್ವಾನದ ಮಾಲೀಕನಿಗೆ ನೀಡಿದೆ. ಅನಂತರದಲ್ಲಿ ಮಾಲೀಕನ ಕೈಯಿಂದ ಶ್ವಾನ ಬಿಸ್ಕೆಟ್‌ಅನ್ನು ಸೇವಿಸಿತು. ಇದೇಕೆ ವಿವಾದವಾಗಿದೆ ಎಂದು ನನಗೆ ಅರ್ಥವಾಗುತ್ತಿಲ್ಲ” ಎಂದು ಹೇಳಿದರು.

ಈ ವಿಷಯವನ್ನು ವಿವಾದ ಉಂಟು ಮಾಡಿದ ಬಿಜೆಪಿ ಬಗ್ಗೆ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, “ಕಾಂಗ್ರೆಸಿನ ಕಾರ್ಯಕರ್ತ ಅಲ್ಲಿ ಎಲ್ಲಿದ್ದರು? ಬಿಜೆಪಿಯವರ ಶ್ವಾನಗಳ ವ್ಯಾಮೋಹದ ಬಗ್ಗೆ ನನಗೆ ಅರ್ಥವಾಗುತ್ತಿಲ್ಲ. ಬಿಜೆಪಿಗೆ ಶ್ವಾನಗಳಿಂದ ಏನು ಸಮಸ್ಯೆಯುಂಟಾಗಿದೆ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

ಶ್ವಾನಗಳು ತಿನ್ನದ ಬಿಸ್ಕೆಟ್‌ ಅನ್ನು ರಾಹುಲ್‌ ಗಾಂಧಿ ಕಾರ್ಯಕರ್ತರಿಗೆ ತಿನ್ನಿಸಿದ್ದಾರೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆರೋಪಿಸಿದ್ದರು. ಸ್ವತಃ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, “ರಾಹುಲ್ ಗಾಂಧಿ ಹಾಗೂ ಅವರ ಕುಟುಂಬ ನನ್ನನ್ನು ಬಿಸ್ಕೆಟ್ ತಿನ್ನುವಂತೆ ಮಾಡಲು ಆಗಲಿಲ್ಲ. ನಾನು ಬಿಸ್ಕೆಟ್ ತಿನ್ನುವುದನ್ನು ತಿರಸ್ಕರಿಸಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದೆ” ಎಂದಿದ್ದರು.

ಬಿಜೆಪಿ ಸೇರ್ಪಡೆಗೂ ಮುನ್ನ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ 1990ರ ದಶಕದಿಂದ 2015ರವರೆಗೆ ಕಾಂಗ್ರೆಸ್‌ನಲ್ಲಿ ಇದ್ದರು. 2015ರಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಶುರು: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಲಿದ್ದು, ಕಾಂಗ್ರೆಸ್ ಅಧ್ಯಕ್ಷ...

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ...

ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಸಂಚು: ಎಎಪಿ ಗಂಭೀರ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು...