ಜನರ ಕೊಳ್ಳುವ ಶಕ್ತಿ ಹೆಚ್ಚಾದರೆ ಆರ್ಥಿಕತೆ, ಜಿಡಿಪಿ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ

Date:

ಜನರ ಕೊಳ್ಳುವ ಶಕ್ತಿ ಹೆಚ್ಚಾದರೆ ಆರ್ಥಿಕತೆ ಮತ್ತು ಜಿಡಿಪಿ ಬೆಳವಣಿಗೆ ಆಗುತ್ತದೆ. ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಲ್ಲಿ ನಾವು ಗ್ಯಾರಂಟಿ ಯೋಜನೆಗಳನ್ನು ನಾಡಿನ ಜನತೆಗೆ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಾಸನದಲ್ಲಿ ಮಂಗಳವಾರ ಹಿಂದುಳಿದ ವರ್ಗಗಳ ಒಕ್ಕೂಟದ ವಿದ್ಯಾರ್ಥಿ ನಿಲಯ ಮತ್ತು ಸಮುದಾಯ ಭವನದ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಸಂಘಟನೆ ಬಲಿಷ್ಠವಾಗಿದ್ದರೆ ಮಾತ್ರ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ. ಸರ್ವರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಈ ಆಶಯಕ್ಕೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ’ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ಸಾಮಾಜಿಕ, ಆರ್ಥಿಕ ಅಸಮಾನತೆ ತೊಡೆದು ಹಾಕಿದಾಗ ಮಾತ್ರ ವರ್ಗರಹಿತ, ಜಾತಿ ರಹಿತ ಸಮಾಜ ನಿರ್ಮಾಣ ಸಾಧ್ಯ. ಕಾಂಗ್ರೆಸ್ ಸರ್ಕಾರ ಸಮಾಜದ ಅಸಮಾನತೆ ಅಳಿಸಿ ಎಲ್ಲ ವರ್ಗದವರೂ ಮುಖ್ಯವಾಹಿನಿಗೆ ಬರುವ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ನಾನು ಮುಖ್ಯಮಂತ್ರಿಯಾಗಿ ದಲಿತರು, ಹಿಂದುಳಿದ ವರ್ಗದವರು ಮತ್ತು ಎಲ್ಲ ಜಾತಿಯ ಬಡವರಿಗೂ ಶಕ್ತಿ ತುಂಬುವ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ನೀಡಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

‘ಒಂದು ಕೋಟಿವರೆಗಿನ ಕಾಮಗಾರಿಗಳಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕೊಡುವ ಕಾರ್ಯಕ್ರಮವನ್ನು ಬಜೆಟ್‌ನಲ್ಲಿ ಘೋಷಿಸಿದ್ದೇವೆ. ಜತೆಗೆ ಐದು ಗ್ಯಾರಂಟಿ ಯೋಜನೆಗಳು ಮಹಿಳೆಯರು ಮತ್ತು ಅಶಕ್ತರಿಗೆ ಆರ್ಥಿಕ ಶಕ್ತಿ ತುಂಬುತ್ತಿದೆ. ಇದರಿಂದ ರಾಜ್ಯದ ಆರ್ಥಿಕತೆಯೂ ಬೆಳವಣಿಗೆಯಾಗುತ್ತಿದೆ’ ಎಂದರು.

ಹಾಸನದ ಹಿಂದುಳಿದ ವರ್ಗಗಳ ಸಮುದಾಯ ಭವನಕ್ಕೆ ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ, ಶಾಸಕರಾದ ಶಿವಲಿಂಗೇಗೌಡ, ಸ್ವರೂಪ್ ಪ್ರಕಾಶ್, ಮಾಜಿ ಸಚಿವರಾದ ಬಿ.ಶಿವರಾಂ, ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಪುಟ್ಟಸ್ವಾಮಿ ಶೆಟ್ಟರು, ಉಪಾಧ್ಯಕ್ಷರಾದ ಲಕ್ಷ್ಮಣ್ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದ ಕಾಂಗ್ರೆಸ್ ಪ್ರಣಾಳಿಕೆ: ಮೆಹಬೂಬಾ ಮುಫ್ತಿ

"ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಜನಪರವಾಗಿದ್ದು, ಇದು ಕೋಮು...

ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ...

ಬೀದರ್‌ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಪಕ್ಷ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ...

ಮಾದಿಗರ ಸ್ವಾಭಿಮಾನಕ್ಕೆ ಮಂದಕೃಷ್ಣರಿಂದ ಧಕ್ಕೆ; ಬಿಜೆಪಿ ಸೋಲಿಸಲು ಸಮುದಾಯ ಕರೆ

ಮಾದಿಗ ಸಮುದಾಯಕ್ಕೆ ನಾಯಕರಾದವರು ನ್ಯಾಯಬದ್ಧವಾಗಿ, ಸಂವಿಧಾನ ಬದ್ಧವಾಗಿ, ಸೈದ್ಧಾಂತಿಕ ಸ್ಪಷ್ಟತೆಯಿಂದ ಇರಬೇಕು:...