ಸುದೀರ್ಘ ವಿಚಾರಣೆಯ ಬಳಿಕ ಮಧ್ಯರಾತ್ರಿ ತಮಿಳುನಾಡು ಇಂಧನ ಸಚಿವರ ಬಂಧನ

Date:

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಿಳುನಾಡಿನ ಇಂಧನ ಸಚಿವ ಸೆಂಥಿಲ್​ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ಮಧ್ಯರಾತ್ರಿ 2 ಗಂಟೆಯ ವೇಳೆಗೆ ಬಂಧಿಸಿದ್ದಾರೆ.

ಚೆನ್ನೈನಲ್ಲಿರುವ ಸಚಿವರ ನಿವಾಸದಲ್ಲಿ ಸುದೀರ್ಘ 18 ಗಂಟೆಗಳ ವಿಚಾರಣೆಯ ಬಳಿಕ ಇ.ಡಿ. ಅಧಿಕಾರಿಗಳು ಸೆಂಥಿಲ್‌ರನ್ನು ಬಂಧಿಸಿದೆ. ಈ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ಕುಸಿದು ಬಿದ್ದ ಸಚಿವರನ್ನು ವೈದ್ಯಕೀಯ ತಪಾಸಣೆಗೆಂದು ಚೆನ್ನೈನಲ್ಲಿರುವ ಓಮಂದೂರಾರ್‌ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸೆಂಥಿಲ್ ಅವರು ಅಳುತ್ತಿರುವ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ, ವೈರಲ್ ಆಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಸಚಿವರು ಸದ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ಬಾಲಾಜಿ ರಕ್ತದೊತ್ತಡ ಮತ್ತು ಇಸಿಜಿಯಲ್ಲಿನ ವ್ಯತ್ಯಾಸಕ್ಕಾಗಿ (ಎಲೆಕ್ಟ್ರೋಕಾರ್ಡಿಯೋಗ್ರಾಮ್) ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವರಿಗೆ ಯಾವುದೇ ಬಾಹ್ಯ ಗಾಯಗಳಾಗಿಲ್ಲ ಎಂದು ಓಮಂದೂರಾರ್‌ ಆಸ್ಪತ್ರೆಯ ನೋಡಲ್ ಅಧಿಕಾರಿ ವಿ. ಆನಂದ ಕುಮಾರ್ ಹೇಳಿದ್ದಾರೆ.

ಬುಧವಾರ ಮಧ್ಯಾಹ್ನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಸೆಂಥಿಲ್ ಅವರನ್ನು ಜಾರಿ ನಿರ್ದೇಶನಾಲಯ ತಮ್ಮ ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

2011ರಿಂದ 2016ರ ಅವಧಿಯಲ್ಲಿ ಎಐಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ವೇಳೆ, ಇಲಾಖೆಯ ನೇಮಕಾತಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಸಂಬಂಧ 2021ರ ಮಾರ್ಚ್​ನಲ್ಲಿ ಚೆನ್ನೈ ಪೊಲೀಸರು ಸೆಂಥಿಲ್​ ವಿರುದ್ಧ ಎಫ್​ಐಆರ್​ ದಾಖಲಿಸಿಕೊಂಡಿದ್ದರು. 2014-15ರ ಅವಧಿಯಲ್ಲಿ ನಡೆದಿದ್ದ ನೇಮಕಾತಿ ಹಗರಣ ಸಂಬಂಧ ಪೊಲೀಸರು ಸಚಿವ ಸೆಂಥಿಲ್​ ಮತ್ತು ಇತರೆ ಅಧಿಕಾರಿಗಳು ಸೇರಿದಂತೆ ಒಟ್ಟು 46 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು. ಕಳೆದ ತಿಂಗಳಷ್ಟೇ ಸುಪ್ರೀಂಕೋರ್ಟ್​, ಜಾರಿ ನಿರ್ದೇಶನಾಲಯಕ್ಕೆ ವಿಚಾರಣೆ ನಡೆಸಲು ಅನುಮತಿ ನೀಡಿತ್ತು.

ಆಸ್ಪತ್ರೆಗೆ ಮುಖ್ಯಮಂತ್ರಿ ಸ್ಟಾಲಿನ್‌ ಭೇಟಿ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌,  ಸಚಿವರಾದ ಉದಯನಿಧಿ ಸ್ಟಾಲಿನ್‌, ಎಸ್‌. ರಘುಪತಿ ಆಸ್ಪತ್ರೆಗೆ ಭೇಟಿ ನೀಡಿ ಸೆಂಥಿಲ್ ಬಾಲಾಜಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಆಸ್ಪತ್ರೆಯಲ್ಲಿ ಸೆಂಥಿಲ್ ಬಾಲಾಜಿ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ, ತಮಿಳುನಾಡು ಮಾನವ ಸಂಪನ್ಮೂಲ ಮತ್ತು ಸಿಇ ಸಚಿವ ಸೇಕರ್ ಬಾಬು, ಸೆಂಥಿಲ್ ಪ್ರಜ್ಞಾಹೀನರಾಗಿದ್ದಾರೆ. ಹಲವಾರು ಬಾರಿ ಅವರ ಹೆಸರನ್ನು ಕರೆದರೂ ನನಗೆ ಪ್ರತಿಕ್ರಿಯಿಸಲಿಲ್ಲ. ಅವರ ಕಾಲಿನಲ್ಲಿ ಊತವಿದೆ. ಸಚಿವ ಬಾಲಾಜಿಗೆ ಚಿತ್ರಹಿಂಸೆ ನೀಡಿದ ‘ಲಕ್ಷಣಗಳು’ ಇವೆʼ ಎಂದು ಸೇಕರ್ ಬಾಬು ಆರೋಪಿಸಿದ್ದಾರೆ.

ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಲು ವೈದ್ಯರ ಸಲಹೆ

ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ವಿದ್ಯುತ್ ಮತ್ತು ಅಬಕಾರಿ ಸಚಿವ ವಿ ಸೆಂಥಿಲ್ ಬಾಲಾಜಿ ಅವರಿಗೆ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಲು ಸಲಹೆ ನೀಡಲಾಗಿದ್ದು, ವೈದ್ಯರು ಅವರ ಹೃದಯದಲ್ಲಿ ಮೂರು ಬ್ಲಾಕ್ ಗಳನ್ನು ಗಮನಿಸಿದ್ದಾರೆ.

“ರಾಜ್ಯ ಸಚಿವ ಸೆಂಥಿಲ್ ಬಾಲಾಜಿ ಅವರು ಇಂದು ಕೊರೊನರಿ ಆಂಜಿಯೋಗ್ರಾಮ್‌ಗೆ ಒಳಗಾಗಿದ್ದಾರೆ,  ಬೈಪಾಸ್ ಶಸ್ತ್ರಚಿಕಿತ್ಸೆಯನ್ನು ಆದಷ್ಟು ಬೇಗ ನಡೆಸಲು ಸೂಚಿಸಲಾಗುತ್ತದೆ” ಎಂದು ತಮಿಳುನಾಡು ಸರಕಾರಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಚೆನ್ನೈ ತನ್ನ ವೈದ್ಯಕೀಯ ಆರೋಗ್ಯ ಬುಲೆಟಿನ್‌ನಲ್ಲಿ ತಿಳಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1800 ಕೋಟಿ ರೂ. ಪಾವತಿಸಿ ಎಂದು ಐಟಿ ಇಲಾಖೆಯಿಂದ ಕಾಂಗ್ರೆಸ್‌ಗೆ ಡಿಮ್ಯಾಂಡ್ ನೋಟಿಸ್

ಲೋಕಸಭಾ ಚುನಾವಣೇ ಕೆಲವೇ ದಿನಗಳು ಇರುವ ಮುನ್ನವೇ ಆದಾಯ ತೆರಿಗೆ ಇಲಾಖೆಯು...

ಲೋಕಸಭಾ ಚುನಾವಣೆ | ರಾಜ್ಯದಲ್ಲಿ ಒಡೆದ ಮನೆಯಾದ ಬಿಜೆಪಿ; ಕಾಂಗ್ರೆಸ್‌ಗೆ ಅಚ್ಚರಿಯ ಲಾಭ?

ಕಳೆದ ವರ್ಷ ಮೇನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹೀನಾಯವಾಗಿ...

ತೆಲಂಗಾಣ | ಬಿಆರ್‌ಎಸ್ ಟಿಕೆಟ್ ಸಿಕ್ಕರೂ ಸ್ಪರ್ಧಿಸದ ಹಾಲಿ ಸಂಸದೆ, ಕಾಂಗ್ರೆಸ್‌ನತ್ತ ಕಡಿಯಂ ಕಾವ್ಯ

ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಬೆನ್ನಲ್ಲೆ ತೆಲಂಗಾಣದ ವಿಪಕ್ಷ ಭಾರತೀಯ...