ಅಕ್ರಮ ಹಣ ವರ್ಗಾವಣೆ | ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ನಿವಾಸದ ಮೇಲೆ ಇ.ಡಿ ದಾಳಿ

Date:

  • ಸೆಂಥಿಲ್ ಬಾಲಾಜಿ ಅವರ ಚೆನ್ನೈ, ಕರೂರು ನಿವಾಸಗಳ ಮೇಲೆ ಇ.ಡಿ ದಾಳಿ
  • ಮೇ 26ರಂದು ಸೆಂಥಿಲ್ ಆಪ್ತರ ನಿವಾಸಗಳ ಮೇಲೆ ದಾಳಿ ಮಾಡಿದ್ದ ಐಟಿ

ತಮಿಳುನಾಡು ವಿದ್ಯುತ್ ಇಲಾಖೆ ಸಚಿವ ವಿ. ಸೆಂಥಿಲ್ ಬಾಲಾಜಿ ಮತ್ತು ಇತರರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಮಂಗಳವಾರ (ಜೂನ್ 13) ದಾಳಿ ನಡೆಸಿದ್ದಾರೆ.

ಸೆಂಥಿಲ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ ಇ.ಡಿ ಈ ದಾಳಿ ನಡೆಸಿದ್ದು ಶೋಧ ಆರಂಭಿಸಿದೆ.

ಸೆಂಥಿಲ್ ಅವರ ಚೆನ್ನೈ ಹಾಗೂ ಕರೂರು ನಗರಗಳಲ್ಲಿರುವ ನಿವಾಸಗಳು ಮತ್ತು ಅವರಿಗೆ ಸಂಬಂಧಿಸಿದ ಇತರ ಸ್ಥಳಗಳ ಮೇಲೆ ಇ.ಡಿ ದಾಳಿ ನಡೆಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸೆಂಥಿಲ್‌ ಬಾಲಾಜಿ ಅವರು ಹಿಂದಿನ ಎಐಎಡಿಎಂಕೆ ಸರ್ಕಾರದಲ್ಲಿ ಸಚಿವರಾಗಿದ್ದಾಗ ನಡೆದ ಉದ್ಯೋಗ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗುತ್ತಿದೆ.

‘ಉದ್ಯೋಗಕ್ಕಾಗಿ ಹಣ’ ಹಗರಣಕ್ಕೆ ಸಂಬಂಧಿಸಿ ಸೆಂಥಿಲ್ ಅವರ ವಿರುದ್ಧದ ಪ್ರಕರಣಗಳ ತನಿಖೆಗೆ ಪೊಲೀಸ್ ಮತ್ತು ಇ.ಡಿ.ಗೆ ಸುಪ್ರೀಂ ಕೋರ್ಟ್ ಕಳೆದ ತಿಂಗಳು ಅನುಮತಿ ನೀಡಿತ್ತು.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆಯು (ಐಟಿ) ತಮಿಳುನಾಡಿನಲ್ಲಿ ಮೇ 26 ರಂದು ಸೆಂಥಿಲ್ ಬಾಲಾಜಿ ಅವರ ಆಪ್ತರ ಮನೆಗಳ ಮೇಲೆ ದಾಳಿ ನಡೆಸಿತ್ತು.

ಈ ಸುದ್ದಿ ಓದಿದ್ದೀರಾ? ಗೋಡ್ಸೆ ಭಾರತದ ಸುಪುತ್ರ ಎನ್ನಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು: ಭೂಪೇಶ್ ಬಘೇಲ್ ಟೀಕೆ

ಈ ವೇಳೆ ಆದಾಯ ತೆರಿಗೆ ಇಲಾಖೆಯು ವಿದ್ಯುತ್ ಸಚಿವ ಸೆಂಥಿಲ್ ಅವರ ಜೊತೆಗೆ ಸಂಪರ್ಕ ಹೊಂದಿದ ನಾನಾ ಸರ್ಕಾರಿ ಗುತ್ತಿಗೆದಾರರ ನಿವಾಸಗಳು ಹಾಗೂ ಕಚೇರಿಗಳು ಸೇರಿ ರಾಜ್ಯದ 40 ಸ್ಥಳಗಳಲ್ಲಿ ದಾಳಿ ಮಾಡಿತ್ತು.

ಕರೂರಿನಲ್ಲಿರುವ ಸೆಂಥಿಲ್ ಬಾಲಾಜಿ ಅವರ ಸಹೋದರನ ನಿವಾಸದ ಮೇಲೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ತಮ್ಮ ನಿವಾಸದ ಮೇಲಿನ ಐಟಿ ದಾಳಿ ವದಂತಿಯನ್ನು ಸೆಂಥಿಲ್‌ ಅವರು ತಳ್ಳಿ ಹಾಕಿದ್ದರು. ತಮ್ಮ ಆಪ್ತರಿಗೆ ಅಧಿಕಾರಿಗಳಿಗೆ ಸಹಕರಿಸುವಂತೆ ಮನವಿ ಮಾಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...

ತಡವಾಗಿ ತಲುಪಿದ ವಿಮಾನ; ಒಲಿಂಪಿಕ್ ಅರ್ಹತಾ ಪಂದ್ಯದಿಂದ ಹೊರಗುಳಿದ ಕುಸ್ತಿಪಟು ದೀಪಕ್ ಪೂನಿಯಾ ಮತ್ತು ಸುಜೀತ್ ಕಲ್ಕಲ್‌

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಡೆ ಕ್ಷಣದಲ್ಲಿ ಪದಕ ಕಳೆದುಕೊಂಡ ಕುಪ್ತಿಪಟು ದೀಪಕ್ ಪೂನಿಯಾ...

ಡಿಡಿ ನ್ಯೂಸ್ ಲೋಗೊ ಬಣ್ಣ ಕೇಸರೀಕರಣ: ವ್ಯಾಪಕ ಆಕ್ರೋಶ

ಕೇಂದ್ರ ಸರ್ಕಾರ ಅಧೀನದ ವಿದ್ಯುನ್ಮಾನ ಮಾಧ್ಯಮ ಸಂಸ್ಥೆ ಡಿಡಿ ನ್ಯೂಸ್‌ ಲೋಗೊ...

ನೇಹಾ ಕೊಲೆ ಪ್ರಕರಣ | ಹುಬ್ಬಳ್ಳಿ, ಬೆಳಗಾವಿಯಲ್ಲಿ ಚುನಾವಣೆ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಯತ್ನ

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ...