ಧಾರವಾಡ | ಚೆನ್ನಮ್ಮ ಜಯಂತಿ ಆಚರಿಸದ ಶಿಕ್ಷಣ ಇಲಾಖೆ; ಚೆನ್ನಮ್ಮ‌ ಸೇವಾ ಸಮಿತಿ ಆಕ್ರೋಶ

Date:

ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಆಚರಣೆ ಮಾಡದೆ ಕುಂದಗೋಳ‌ ತಾಲೂಕು ಶಿಕ್ಷಣ ಇಲಾಖೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ‌ ಮಾಡಿದೆ. ಈ ಕೂಡಲೇ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ʼವೀರರಾಣಿ ಕಿತ್ತೂರು ಚೆನ್ನಮ್ಮ ಸೇವಾ ಸಮಿತಿʼ ಆಗ್ರಹಿಸಿದೆ.

ತಹಸೀಲ್ದಾರ ನಿರ್ದೇಶನವನ್ನು ಪಾಲಿಸದ ಅಧಿಕಾರಿಗಳ ಮೇಲೆ ಈ ಕೂಡಲೆ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ತಹಸೀಲ್ದಾರರಿಗೆ ಅಕ್ಟೋಬರ್ 25, ಬುಧವಾರದಂದು ವಿನಂತಿಸಿಕೊಂಡಿತು. ಈ ಕುರಿತು ಕೈಕೊಳ್ಳುವ ಕ್ರಮದ ಬಗ್ಗೆ ಸ್ಪಷ್ಟನೆ ನೀಡಬೇಕು, ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಮುಂದಿನ ಹೋರಾಟದ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ.

ಈದಿನ.ಕಾಮ್ ಜೊತೆ ಮಾತನಾಡಿದ ತಾಲೂಕು ರೈತ ಸಂಘದ ಅಧ್ಯಕ್ಷ ಗುರುಪಾದಪ್ಪ ಬಂಕದ, ಕುಂದಗೋಳ ತಾಲೂಕು ಕ್ಷೇತ್ರ ಶಿಕ್ಷಣ ಇಲಾಖೆಯಲ್ಲಿ, ಸ್ವಾತಂತ್ರ್ಯ ಹೋರಾಟಕ್ಕೆ ಭದ್ರ ಬುನಾದಿ ಹಾಕಿದ್ದ ವೀರರಾಣಿ ಕಿತ್ತೂರ ಚೆನ್ನಮ್ಮನ ಸ್ಮರಣಾರ್ಥ ಕಾರ್ಯಕ್ರಮವನ್ನು ಶಿಕ್ಷಣ ಕ್ಷೇತ್ರದಿಂದ ಆಚರಿಸದೇ ಇರುವುದು ದುರಂತದ ಸಂಗತಿ. ಈ ಮೂಲಕ ಚೆನ್ನಮ್ಮನ ಜಯಂತಿಯ ದಿನದಂದು ಸರ್ಕಾರಿ ಕಚೇರಿಗಳಿಗೆ ಬೀಗ ಜಡಿದು ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿರುವುದನ್ನು ನಾವು ಸಹಿಸುವುದಿಲ್ಲ. ಇಲಾಖೆಯ ಬಿಇಓ ಅವರ ನಡೆ ಉದ್ದೇಶಪೂರ್ವಕವಾಗಿದೆ ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...