ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ | ಈಜಿಪ್ಟ್‌ನಲ್ಲಿ ಇಬ್ಬರು ಇಸ್ರೇಲಿ ಪ್ರವಾಸಿಗರ ಗುಂಡಿಟ್ಟು ಹತ್ಯೆ

Date:

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಉಂಟಾಗಿರುವ ಸಂಘರ್ಷದ ಮಧ್ಯೆಯೇ ಈಜಿಪ್ಟ್‌ನಲ್ಲಿ ಇಬ್ಬರು ಇಸ್ರೇಲಿ ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಮೆಡಿಟರೇನಿಯನ್ ನಗರದ ಅಲೆಕ್ಸಾಂಡ್ರಿಯಾದಲ್ಲಿ ಭಾನುವಾರ ಪ್ರವಾಸಿಗರ ಮೇಲೆ ಈಜಿಪ್ಟ್ ಪೊಲೀಸ್ ಸಿಬ್ಬಂದಿಯೋರ್ವ ಗುಂಡು ಹಾರಿಸಿದ ಪರಿಣಾಮ ಇಬ್ಬರು ಇಸ್ರೇಲಿ ಪ್ರಜೆಗಳು ಮೃತಪಟ್ಟಿದ್ದು, ಓರ್ವ ಈಜಿಪ್ಟ್‌ ಪ್ರಜೆ ಗಾಯಗೊಂಡಿರುವುದಾಗಿ ಈಜಿಪ್ಟ್‌ನ ಸ್ಥಳೀಯ ಮಾಧ್ಯಮವೊಂದರ ವರದಿಯನ್ನು ಉಲ್ಲೇಖಿಸಿ ‘ಅಲ್-ಜಝೀರಾ’ ವರದಿ ಮಾಡಿದೆ.

ಮಾಹಿತಿ ಪ್ರಕಾರ, ಅಲೆಕ್ಸಾಂಡ್ರಿಯಾ ನಗರದದ ಪಾಂಪೆಯ ಪಿಲ್ಲರ್ ಸೈಟ್‌ನಲ್ಲಿ ನೆರೆದಿದ್ದ ಜನರ ಮೇಲೆ ಪೊಲೀಸ್ ಅಧಿಕಾರಿಯೋರ್ವ ಗುಂಡು ಹಾರಿಸಿದ್ದು, ಇಬ್ಬರು ಇಸ್ರೇಲಿ ಪ್ರಜೆ ಮೃತಪಟ್ಟರೆ, ಓರ್ವ ಈಜಿಪ್ಟ್‌ ಪ್ರಜೆ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ಥಳದಲ್ಲೇ ಪ್ರವಾಸಿಗರ ಮೃತದೇಹಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ.

ಗುಂಡಿನ ದಾಳಿಯಲ್ಲಿ ಈಜಿಪ್ಟ್ ಪ್ರಜೆಯೂ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡಿರುವ ವಯೋವೃದ್ಧರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇಸ್ರೇಲ್ ಪ್ರವಾಸಿಗರನ್ನು ಗುಂಡಿಕ್ಕಿ ಕೊಂದ ಪೊಲೀಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ ಬಳಿಕ, ಇಸ್ರೇಲ್ ಪಡೆಗಳು ಗಾಝಾದ ಮೇಲೆ ಬಾಂಬ್ ದಾಳಿ ನಡೆಸುತ್ತಿರುವ ಸುದ್ದಿಗಳ ಬೆನ್ನಲ್ಲೇ ಪೊಲೀಸ್ ಅಧಿಕಾರಿ ಈ ರೀತಿಯಾಗಿ ನಡೆದುಕೊಂಡಿದ್ದಾರೆ ಎಂದು ಈಜಿಪ್ಟ್‌ನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಧೀರಜ್ ಕಾಂಗ್ರೆಸ್‌ ಸೇರುವ ಸಾಧ್ಯತೆ!

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಸಿದ್ದರಾಮಯ್ಯ...

ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ನಜ್ಮಾ ನಝೀರ್

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದಕ್ಕೆ...

ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ | ದೇವೇಗೌಡರ ಆಶೀರ್ವಾದ ಆನೆ ಬಲ ತಂದಿದೆ: ಬಿ ವೈ ವಿಜಯೇಂದ್ರ

ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ...

ಯುದ್ಧದಲ್ಲಿ ಹೋರಾಡಲು ಭಾರತೀಯ ಕಾರ್ಮಿಕರಿಗೆ ರಷ್ಯಾ ಒತ್ತಾಯ; ಪ್ರಧಾನಿ ಮೋದಿ ಮೌನವೇಕೆ?

ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಜಾಹೀರಾತು ವಿಡಿಯೋದಲ್ಲಿ ವಿದ್ಯಾರ್ಥಿಯೊಬ್ಬಳು, ‘ಯುದ್ಧ ಪೀಡಿತ...