ದಿವ್ಯಾಂಗರಿಗೆ ರಾಜಕೀಯ ಪ್ರಾಶಸ್ತ್ಯ, ಗೌರವ ಹೆಚ್ಚಳಕ್ಕೆ ಮಾರ್ಗಸೂಚಿ ಹೊರಡಿಸಿದ ಚುನಾವಣಾ ಆಯೋಗ

Date:

ವಿಶೇಷ ಚೇತನ ಸಮುದಾಯವು ರಾಜಕೀಯವಾಗಿ ಒಳಗೊಳ್ಳುವಿಕೆ ಮತ್ತು ಅವರ ಗೌರವ ಹೆಚ್ಚಿಸಲು ಕೇಂದ್ರ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳು ಮತ್ತು ಅವರ ಪ್ರತಿನಿಧಿಗಳಿಗೆ ಮಾರ್ಗದರ್ಶಿ ಸೂತ್ರಗಳನ್ನು ನೀಡಿದೆ.
ಯಾವುದೇ ರಾಜಕೀಯ ಪಕ್ಷಗಳ ಸದಸ್ಯರು ಅಥವಾ ಅವರ ಅಭ್ಯರ್ಥಿಗಳು ಭಾಷಣ, ಪ್ರಚಾರದಲ್ಲಿ ದಿವ್ಯಾಂಗರಿಗೆ ಧಕ್ಕೆ ತರುವಂತಹ ಭಾಷೆ ಬಳಸುವಂತಿಲ್ಲ. ಉದಾಹರಣೆಗೆ ಮೂಕ(ಗುಂಗಾ), ರಿಟಾರ್ಡೆಡ್ (ಪಾಗಲ್, ಸಿರ್ಫಿರಾ), ಕುರುಡು (ಅಂಧ, ಕನಾ), ಕಿವುಡ (ಬೆಹ್ರಾ), ಕುಂಟ (ಲಂಗ್ಡಾ, ಲೂಲಾ, ಅಪಹಿಜ್) ಮುಂತಾದ ಪದಗಳ ಬಳಕೆ ಮಾಡುವಂತಿಲ್ಲ.
ರಾಜಕೀಯ ಪಕ್ಷಗಳು ಮತ್ತು ಅವರ ಪ್ರತಿನಿಧಿಗಳು ತಮ್ಮ ಬರಹಗಳು, ಲೇಖನಗಳು ಸೇರಿದಂತೆ ಪ್ರಚಾರದ ಸಂದರ್ಭಗಳಲ್ಲಿ ಅಥವಾ ರಾಜಕೀಯ ಪ್ರಚಾರದಲ್ಲಿ ಯಾವುದೇ ಸಾರ್ವಜನಿಕ ಹೇಳಿಕೆ, ಭಾಷಣದ ಸಮಯದಲ್ಲಿ ದಿವ್ಯಾಂಗರ ಅಂಗವೈಕಲ್ಯ ಅಥವಾ ಅಂಗವಿಕಲತೆಯನ್ನು ಆಡಿಕೊಳ್ಳುವ, ಅವಹೇಳನಕಾರಿ, ಅವಮಾನಕರ ಪದಗಳನ್ನು ಬಳಸಬಾರದು.
ರಾಜಕೀಯ ಪಕ್ಷಗಳು ಮತ್ತು ಪಕ್ಷದ ಪ್ರತಿನಿಧಿಗಳು ದಿವ್ಯಾಂಗರ ಅಂಗವಿಕಲತೆ,  ಭಾಷೆ, ಪರಿಭಾಷೆ, ಸಂದರ್ಭ, ಅಪಹಾಸ್ಯ, ಅವಹೇಳನಕಾರಿ ಉಲ್ಲೇಖಗಳು ಮತ್ತು ಅವರನ್ನು ಅವಮಾನಿಸುವ ಯಾವುದೇ ರೀತಿಯ ಬಳಕೆಯು 2016 ರ ದಿವ್ಯಾಂಗರ ಹಕ್ಕುಗಳ ಕಾಯಿದೆಯ ಸೆಕ್ಷನ್ 92ರಡಿ ನಿಬಂಧನೆಗಳಿಗೆ ಒಳಪಡುತ್ತಾರೆ.
ರಾಜಕೀಯ ಪಕ್ಷಗಳು ದಿವ್ಯಾಂಗರ ಕುರಿತು ತಮ್ಮ ಪಕ್ಷಗಳ ಮಟ್ಟದಲ್ಲಿ ಪರಿಶೀಲಿಸಿ ಅಂಗೀಕರಿಸಲ್ಪಟ್ಟ ನಂತರ ಭಾಷಣ ಅಥವಾ ವಿಷಯವನ್ನು ಪ್ರಚುರಪಡಿಸುವುದು ಉತ್ತಮ.
ಎಲ್ಲ ರಾಜಕೀಯ ಪಕ್ಷಗಳು ರಾಜಕೀಯ ಪ್ರಕ್ರಿಯೆಯ ಎಲ್ಲ ಹಂತಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ದಿವ್ಯಾಂಗರ ಕುರಿತು ತರಬೇತಿ ಮಾಡ್ಯೂಲ್‍ಅನ್ನು ಒದಗಿಸಬಹುದು. ಮತ್ತು ಸಮರ್ಥ ಭಾಷೆಯ ಬಳಕೆಗೆ ಸಂಬಂಧಿಸಿದಂತೆ ದಿವ್ಯಾಂಗ ವ್ಯಕ್ತಿಗಳಿಂದ ದೂರುಗಳನ್ನು ಕೇಳಲು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು.
ಪಕ್ಷ ಮತ್ತು ಸಾರ್ವಜನಿಕರ ವರ್ತನೆಯ ತಡೆಗೋಡೆಯನ್ನು ತೊಡೆದುಹಾಕಲು ಮತ್ತು ಸಮಾನ ಅವಕಾಶಗಳನ್ನು ಒದಗಿಸಲು ರಾಜಕೀಯ ಪಕ್ಷಗಳು ಸದಸ್ಯರು ಮತ್ತು ಪಕ್ಷದ ಕಾರ್ಯಕರ್ತರಂತಹ ಹಂತಗಳಲ್ಲಿ ಹೆಚ್ಚಿನ ದಿವ್ಯಾಂಗರನ್ನು ಸೇರಿಸಿಕೊಳ್ಳ ಬಹುದಾಗಿದೆ.
ಮತದಾನ ಕೇಂದ್ರಗಳಲ್ಲಿ ವಿಶೇಷ ಸ್ಥಾನಮಾನ
ನೆಲ ಮಹಡಿಯಲ್ಲಿ ಮತದಾನ ಕೇಂದ್ರದ ಸ್ಥಾಪನೆ, ಇವಿಎಂನ ಬ್ಯಾಲೆಟ್ ಯೂನಿಟ್‍ನಲ್ಲಿ ಬ್ರೈಲ್ ಚಿಹ್ನೆಗಳು, ಸರಿಯಾದ ಗ್ರೇಡಿಯಂಟ್‍ನೊಂದಿಗೆ ರ‍್ಯಾಂಪ್ ನಿರ್ಮಾಣ, ದಿವ್ಯಾಂಗರಿಗಾಗಿ ಪ್ರತ್ಯೇಕ ಸರತಿ ಸಾಲುಗಳು (ಆದ್ಯತಾ ಪ್ರವೇಶ), ವೀಲ್‍ಚೇರ್‌ಗಳು, ಅವಶ್ಯಕತೆ ಇರುವ ದಿವ್ಯಾಂಗರ ಸಹಾಯಕ್ಕಾಗಿ ಜೊತೆಯಲ್ಲಿ ಒಡನಾಡಿಗೆ ಅನುಮತಿ ನೀಡುವುದು.
ಆಯೋಗವು ಮನೆಯಲ್ಲೇ ಮತದಾನದ ಸೌಲಭ್ಯವನ್ನು ಪರಿಚಯಿಸಿದೆ. ಶೇ.40ರಷ್ಟು ಅಂಗವೈಕಲ್ಯ ಹೊಂದಿರುವ ವಿಶೇಷಚೇತನ ಮತದಾರರು ಈ ಸೌಲಭ್ಯವನ್ನು ಪಡೆಯಲು ಆಯ್ಕೆ ಮಾಡಬಹುದು.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...

ತಮಿಳುನಾಡು | 238 ಬಾರಿ ಚುನಾವಣೆಯಲ್ಲಿ ಸೋತರೂ ದಣಿಯದ ಪದ್ಮರಾಜನ್;‌ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ

ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೆ ಯಾರಿಗಾದರೂ ನಿರಾಶೆ ಉಂಟಾಗಬಹುದು. ಆದರೆ ಟೈರ್ ರಿಪೇರಿ...

ತೆರಿಗೆ ಮರು ಮೌಲ್ಯಮಾಪನ ವಿರುದ್ಧದ ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತೆರಿಗೆ ಅಧಿಕಾರಿಗಳು ತಮ್ಮ ವಿರುದ್ಧ ನಾಲ್ಕು ವರ್ಷಗಳ ಅವಧಿಯ ತೆರಿಗೆ ಮರುಮೌಲ್ಯಮಾಪನ...

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ | ಶೋಭಾ ಗೋಬ್ಯಾಕ್ ಅಭಿಯಾನ ರಾಜೀವ್ ಗೌಡರಿಗೆ ವರವಾಗಲಿದೆಯೆ?

ಹಲವು ರಾಜಕೀಯ ಇತಿಹಾಸ ಹೊಂದಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣಾ...