ಮರಳಿ ವಿಶ್ವದ ನಂ.1 ಶ್ರೀಮಂತ ಪಟ್ಟಕ್ಕೇರಿದ ಎಲಾನ್ ಮಸ್ಕ್; ಮತ್ತೆ ಕುಸಿತ ಕಂಡ ಅಂಬಾನಿ, ಅದಾನಿ

Date:

ಟೆಸ್ಲಾ, ಸ್ಪೇಸ್ ಎಕ್ಸ್ ಸಿಇಒ ಹಾಗೂ ಟ್ವಟರ್ ಮುಖ್ಯಸ್ಥ ಎಲಾನ್ ಮಸ್ಕ್ ವಿಶ್ವದ ನಂ.1 ಶ್ರೀಮಂತನ ಪಟ್ಟವನ್ನು ಮರಳಿ ಪಡೆದಿದ್ದಾರೆ. ಗುರುವಾರ ಬಿಡುಗಡೆಯಾದ ಬ್ಲೂಮ್ ಬರ್ಗ್ ಬಿಲಿಯನರ್ಸ್ ಸೂಚ್ಯಂಕದ ಪ್ರಕಾರ ಮಸ್ಕ್ ಫ್ರೆಂಚ್ ಉದ್ಯಮಿ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನ ಗಿಟ್ಟಿಸಿದ್ದಾರೆ.

ಮಸ್ಕ್ ನಿವ್ವಳ ಸಂಪತ್ತಿನಲ್ಲಿ ಸುಮಾರು 2 ಮಿಲಿಯನ್ ಏರಿಕೆಯಾಗಿದ್ದು, 192 ಬಿಲಿಯನ್ ಡಾಲರ್ ಗೆ ತಲುಪಿದೆ. ಈ ಮೊದಲು ಮೊದಲ ಸ್ಥಾನದಲ್ಲಿದ್ದ ಅರ್ನಾಲ್ಟ್ ಅವರ ನಿವ್ವಳ ಸಂಪತ್ತಿನಲ್ಲಿ 5.25 ಬಿಲಿಯನ್ ಡಾಲರ್ ಇಳಿಕೆಯಾಗಿದೆ. ಇದರಿಂದ ಅವರ ನಿವ್ವಳ ಸಂಪತ್ತು 187 ಬಿಲಿಯನ್ ಡಾಲರ್ ಗೆ ಕುಸಿತ ಕಂಡಿದೆ. 74 ವರ್ಷದ ಈ ಫ್ರೆಂಚ್ ಉದ್ಯಮಿಯಾಗಿರುವ ಅರ್ನಾಲ್ಟ್ ಅವರು ತಮ್ಮ ಒಡೆತನದ ಎಲ್‌ವಿಎಂಎಚ್ ಷೇರುಗಳು ಪ್ಯಾರಿಸ್ ಟ್ರೇಡಿಂಗ್‌ನಲ್ಲಿ ಶೇ. 2.6ರಷ್ಟು ಕುಸಿತ ಕಂಡಿವೆ.

ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಇವರ ನಿವ್ವಳ ಸಂಪತ್ತು 144 ಬಿಲಿಯನ್ ಡಾಲರ್ ನಷ್ಟಿದೆ. ಹಲವು ವರ್ಷಗಳಿಂದ ವಿಶ್ವದ ನಂ.1 ಶ್ರೀಮಂತ ಪಟ್ಟವನ್ನು ಮಸ್ಕ್ ಕಾಯ್ದುಕೊಂಡು ಬಂದಿದ್ದರು. ಆದರೆ, 2022ರ ಡಿಸೆಂಬರ್‌ನಲ್ಲಿ ಇವರ ಆದಾಯದಲ್ಲಿ 138 ಬಿಲಿಯನ್ ಡಾಲರ್ ಇಳಿಕೆಯಾಗಿತ್ತು. ಇದರಿಂದ ಮಸ್ಕ್ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎನ್ನುವ ಸ್ಥಾನವನ್ನು ಸಹ ಕಳೆದುಕೊಳ್ಳಬೇಕಾಯಿತು. ನಂತರ ಈ ವರ್ಷದ ಫೆಬ್ರವರಿ ಅಂತ್ಯದಲ್ಲಿ ಮಸ್ಕ್ ಮತ್ತೆ ನಂ.1 ಪಟ್ಟವನ್ನು ಮರಳಿ ಪಡೆದಿದ್ದರು. ನಂತರ ಆ ಸ್ಥಾನ ಕೈಜಾರಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಸರ್ಕಾರಿ ಉದ್ಯೋಗ ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ವಂಚನೆ

ಟೆಸ್ಲಾ ಸಂಸ್ಥೆಯ ಯಶಸ್ಸಿನಿಂದಲೇ ಎಲಾನ್ ಮಸ್ಕ್ ಸಂಪತ್ತಿನಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ. ಟೆಸ್ಲಾ ಕಂಫನಿಯಲ್ಲೇ ಮಸ್ಕ್ ಅವರ ಶೇ. 71ರಷ್ಟು ಸಂಪತ್ತಿದೆ. ನಿರಂತರವಾಗಿ ವಿಶ್ವದ ನಂ.1 ಶ್ರೀಮಂತನ ಪಟ್ಟ ಕಾಯ್ದುಕೊಂಡು ಬಂದಿದ್ದ ಮಸ್ಕ್‌ಗೆ ಟ್ವಿಟ್ಟರ್ ಖರೀದಿ ಬಳಿಕ ಇದನ್ನು ಉಳಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. 44 ಬಿಲಿಯನ್ ಡಾಲರ್ ವೆಚ್ಚ ಮಾಡಿ ಟ್ವಿಟ್ಟರ್ ಖರೀದಿಸಿರುವ ಜೊತೆಗೆ ಟೆಸ್ಲಾ ಷೇರುಗಳ ಬೆಲೆಯಲ್ಲಿ ಇಳಿಕೆಯಾಗಿರುವುದು ಕೂಡ ನಂಬರ್‌ ಒನ್‌ ಸ್ಥಾನ ಕಳೆದುಕೊಳ್ಳಲು ಕಾರಣ ಎಂದು ಹೇಳಲಾಗಿತ್ತು.

ಭಾರತೀಯ ಉದ್ಯಮಿ ಗೌತಮ್ ಅದಾನಿ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮತ್ತೆ ಒಂದು ಸ್ಥಾನ ಕುಸಿದಿದ್ದಾರೆ. 18ನೇ ಸ್ಥಾನದಲ್ಲಿದ್ದ ಅದಾನಿ 19ನೇ ಸ್ಥಾನಕ್ಕೆ ಇಳಿದಿದ್ದಾರೆ. ಮೇ31ರಂದು ಅದಾನಿ ಸಂಪತ್ತಿನಲ್ಲಿ 310 ಬಿಲಿಯನ್ ಡಾಲರ್ ಕುಸಿತ ಕಂಡುಬಂದಿದೆ. ಪರಿಣಾಮ ಅವರ ನಿವ್ವಳ ಸಂಪತ್ತು 61.3 ಶತಕೋಟಿ ಡಾಲರ್ ಗೆ ಇಳಿಕೆಯಾಗಿದೆ. ಇನ್ನೊಬ್ಬ ಪ್ರತಿಷ್ಠಿತ ಉದ್ಯಮಿ ಮುಖೇಶ್ ಅಂಬಾನಿ ಸಂಪತ್ತಿನಲ್ಲಿ ಕೂಡ 1.73 ಶತಕೋಟಿ ಡಾಲರ್ ಇಳಿಕೆಯಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಟ್‌ಕಾಯಿನ್ ಹಗರಣ| ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ಕುಂದ್ರಾಗೆ ಸೇರಿದ ಬರೋಬ್ಬರಿ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ನಟಿ ಶಿಲ್ಪಾ ಶೆಟ್ಟಿ...

ತೆಲಂಗಾಣ | ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಶಾಲೆ ಮೇಲೆ ದಾಳಿ

ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಾಂಶುಪಾಲರು ಪ್ರಶ್ನಿಸಿದ ನಂತರ ಗುಪೊಂದು ಶಾಲೆಯ...

ಪ್ರಧಾನಿ ಮೋದಿಯವರ ಹಲವು ಹೇಳಿಕೆಗಳು ನೀತಿ ಸಂಹಿತೆ ಉಲ್ಲಂಘಿಸುತ್ತವೆ: ಸೀತಾರಾಮ್ ಯೆಚೂರಿ

"ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ...

EVMನಲ್ಲಿ ಬಿಜೆಪಿಗೆ ಹೆಚ್ಚು ಮತ: ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

ವಿದ್ಯುನ್ಮಾನ ಮತಯಂತ್ರದಲ್ಲಿ ಅಣಕು ಮತದಾನ ನಡೆಸುವ ಸಂದರ್ಭದಲ್ಲಿ ಬಿಜೆಪಿಗೆ ಹೆಚ್ಚು ಮತ...