‘ಚಲಾಯಿಸಿ ನಿಮ್ಮ ಹಕ್ಕನ್ನು, ಬದಲಾಯಿಸಿ ದೇಶದ ದಿಕ್ಕನ್ನು’ ಯುವ ಮತದಾರರಿಗಾಗಿ ಕಾಂಗ್ರೆಸ್‌ ಅಭಿಯಾನ

Date:

  • ಯುವ ಸಮೂಹವನ್ನು ಸೆಳೆಯಲು ಆರಂಭವಾದ ಪೆಹಲಾ ಓಟ್ ಅಭಿಯಾನ
  • ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಮತ ಹಾಕುವ ಯುವ ಸಮೂಹ

ಕರ್ನಾಟಕದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ. ಇದೀಗ ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಯುವ ಮತದಾರರನ್ನು ಸೆಳೆಯಲು ಕಾಂಗ್ರೆಸ್‌ ರಾಜ್ಯಾದ್ಯಂತ ‘ಪೆಹಲಾ ಓಟ್‌’ (ಮೊದಲ ಮತ) ಅಭಿಯಾನವನ್ನು ಆರಂಭಿಸಿದೆ.

ಈ ಪೆಹಲಾ ಓಟ್ ಅಭಿಯಾನದ ಜವಾಬ್ದಾರಿಯನ್ನು ರಾಷ್ಟ್ರೀಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹಾಗೂ ಎಐಸಿಸಿ ಸದಸ್ಯ ಎಂ.ಎಸ್.‌ರಕ್ಷಾ ರಾಮಯ್ಯ ಅವರು ಹೊತ್ತಿದ್ದಾರೆ. ಆ. 10ರಂದು ಈ ಅಭಿಯಾನದ ಪ್ರಚಾರ ವಾಹನಗಳಿಗೆ ಬೆಂಗಳೂರಿನ ಸಹಕಾರ ನಗರದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಚಾಲನೆ ನೀಡಿದರು.

“ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ಈ ಅಭಿಯಾನ ಆರಂಭಿಸಲಾಗಿದೆ. ಯುವ ಸಮೂಹ ದೇಶದ ಶಕ್ತಿಯಾಗಿದೆ. ಈ ಮೊದಲ ಮತ ಅಭಿಯಾನ ಯುವ ಜನಾಂಗದ ಆಂದೋಲನವಾಗಿದೆ” ಎಂದು ಎಂ.ಎಸ್.ರಕ್ಷಾ ರಾಮಯ್ಯ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚಲಾಯಿಸಿ

“ಈ ಮೊದಲ ಮತ ಅಭಿಯಾನದಲ್ಲಿ ಸಂವಾದ, ತಂತ್ರಜ್ಞಾನ ಆಧಾರಿತ ಪ್ರಚಾರ, ಕ್ಯೂ ಆರ್ ‌ಕೋಡ್‌ ಮೂಲಕ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಸರಕು ಸಾಗಾಣೆ ವಾಹನಗಳಲ್ಲಿ ಎಲ್.ಇ.ಡಿ ವ್ಯವಸ್ಥೆ, ಶಾಲಾ ಕಾಲೇಜುಗಳು, ಟ್ಯೂಷನ್‌ ತಾಣಗಳು, ಬಸ್‌ ನಿಲ್ದಾಣಗಳು, ಮಾಲ್‌ಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ” ಎಂದರು.

“ಯುವ ಮತದಾನ ಅಭಿಯಾನವನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಯೋಜಿಸಲಾಗಿತ್ತು. ಆಗ ಅಭಿಯಾನಕ್ಕೆ ಅಭೂತಪೂರ್ವ ಸ್ಪಂದನೆ ದೊರೆತಿತ್ತು. ಈ ಅಭಿಯಾನದಿಂದ ಕಾಂಗ್ರೆಸ್‌ ಶೇ. 42ರಷ್ಟು ಯುವ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಿಜೆಪಿಯನ್ನು ಹಿಂದಿಕ್ಕಿ ಬಹುಮತದೊಂದಿಗೆ ಮುನ್ನಡೆ ಸಾಧಿಸಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ₹6.20 ಲಕ್ಷ ದಂಡ ಸಂಗ್ರಹ

“ಈ ಗೆಲುವಿನ ಬಳಿಕ ಮೊದಲ ಮತ ಅಭಿಯಾನ ಆರಂಭ ಮಾಡಲಾಗಿದೆ. ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸುವ ಯುವ ಸಮೂಹವನ್ನು ಸೆಳೆಯುವ ಸವಾಲು ಇದೆ. ಈ ಅಭಿಯಾನಕ್ಕೆ ಉತ್ತಮ ಬೆಂಬಲ ಸಿಗುವ ಭರವಸೆ ಇದೆ. ಈ ಪೆಹಲಾ ಓಟ್ ಅಭಿಯಾನದ ವಾಹನಗಳು ರಾಜ್ಯಾದ್ಯಂತ ಸಂಚರಿಸಲಿವೆ. ಈ ಮತದಾನದ ಬಗ್ಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅರಿವು ಮೂಡಿಸಲಿದ್ದಾರೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಮರು, ಕಾಂಗ್ರೆಸ್ ಬಗ್ಗೆ ದ್ವೇಷ ಭಾಷಣ: ಮೋದಿ ವಿರುದ್ಧ ಕಠಿಣ ಕ್ರಮಕ್ಕೆ ಸಿಪಿಐಎಂ ಆಗ್ರಹ

ಮುಸ್ಲಿಮರು ಮತ್ತು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮಾಡಿದ ದ್ವೇಷ...

ಮೋದಿ ಟೀಕೆ | ‘ಕಾಂಗ್ರೆಸ್‌ ಪ್ರಣಾಳಿಕೆ ಕುರಿತು ಚರ್ಚಿಸೋಣ ಬನ್ನಿ’; ಮೋದಿ ಭೇಟಿಗೆ ಸಮಯ ಕೇಳಿದ ಖರ್ಗೆ

ಕಾಂಗ್ರೆಸ್‌ ಒಳನುಸುಳುಕೋರರಿಗೆ ದೇಶದ ಸಂಪತ್ತನ್ನು ಹಂಚಬಹುದು ಎಂದು ಪ್ರಧಾನಿ ಮೋದಿ ಹೇಳಿಕೆ...

ಈ ದಿನ ಸಮೀಕ್ಷೆ | ಕಳೆದ ಹತ್ತು ವರ್ಷಗಳ ಮೋದಿ ಆಡಳಿತದಲ್ಲಿ ನಿಜವಾಗಿಯೂ ಅಭಿವೃದ್ಧಿ ಕೆಲಸಗಳು ನಡೆದಿವೆಯೇ?

ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ...

‘ಸಂವಿಧಾನವನ್ನು ಬಲವಂತವಾಗಿ ಹೇರಲಾಗಿದೆ’; ಗೋವಾ ಕಾಂಗ್ರೆಸ್‌ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ

1961ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ಗೋವಾವನ್ನು ವಿಮೋಚನೆಗೊಳಿಸಿದ ನಂತರ, ರಾಜ್ಯದ ಮೇಲೆ ಭಾರತೀಯ...