ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಎಫ್‌ಐಆರ್

Date:

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ ಹುಟ್ಟಿಹಾಕಲು ಯತ್ನ ಮಾಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಆರ್.‌ಕನ್ನಡ ಸಂಪಾದಕ ನಿರಂಜನ್ ಅವರ ವಿರುದ್ಧ ಎಸ್. ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕೆಪಿಸಿಸಿಯ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿ ರವೀಂದ್ರ ಎಂ ಡಿ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಾರ್ಚ್ 27ರಂದು ಸಂಜೆ ಸಂಜೆ 7:15 ಗಂಟೆಗೆ ಆರ್ ಕನ್ನಡ ಸುದ್ದಿ ವಾಹಿನಿಯಲ್ಲಿ ಎಂಜಿ ರಸ್ತೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಚರಿಸುವಾಗ ವಾಹನಗಳ ಸಂಚಾರ ತಡೆದು ಆ್ಯಂಬುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಮಾಡಿದ ವಿಡಿಯೋ ತುಣುಕನ್ನು ಪ್ರಸಾರ ಮಾಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ಜೆಎನ್‌ಯುವಿನಲ್ಲಿ ಎಬಿವಿಪಿ ಕ್ಲೀನ್‌ಸ್ವೀಪ್ ಎಂದು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್!

ಆದರೆ ನಿಜವಾಗಿ ಸಿಎಂ ಸಿದ್ಧರಾಮಯ್ಯ ಅವರು ಈ ಸಂದರ್ಭದಲ್ಲಿ ಮೈಸೂರಿನಲ್ಲಿದ್ದು, ಬೆಂಗಳೂರಿನ ಕಡೆಗೆ ಪ್ರಯಾಣ ಮಾಡಿಲ್ಲ. ಈ ವಿಡಿಯೋವನ್ನು ಪರಿಶೀಲನೆ ನಡೆಸದೆ ಚುನಾವಣೆಯ ಸಂದರ್ಭದಲ್ಲಿ ಸಾರ್ವಜನಿಕರನ್ನು ಪ್ರಚೋದಿಸುವ ನಿಟ್ಟಿನಲ್ಲಿಯೇ ತಪ್ಪು ಮಾಹಿತಿ ಪ್ರಸಾರ ಮಾಡಲಾಗಿದೆ ಎಂದು  ದೂರು ನೀಡಿದೆ.

ಈ ದೂರಿನ ಆಧಾರದಲ್ಲಿ ತಪ್ಪು ಮಾಹಿತಿ ಪ್ರಸಾರ ಮಾಡಿರುವ ಆರ್ ಕನ್ನಡ (ರಿಪಬ್ಲಿಕ್) ವಾಹಿನಿಯ ಮಾಲೀಕ ಅರ್ನಬ್ ಗೋ ಸ್ವಾಮಿ ಮತ್ತು ಸಂಪಾದಕ ನಿರಂಜನ್ ವಿರುದ್ಧ ಎಸ್. ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಅರಚಾಡುವ ಗೋಸ್ವಾಮಿ ಕನ್ನಡಕ್ಕೂ ಬಂದುಬಿಟ್ಟನಾ,,,ಈ ರಾಜ್ಯದ ನೆಮ್ಮದಿಯನ್ನು ದೇವರೇ ಕಾಪಾಡಬೇಕು

  2. ಅರ್ಣಬ, ಬಾಯಿ ಚಪಲ , ಇವನು ಸುಳ್ಳು ಮಾಹಿತಿ ಕೊಡುವುದರಲ್ಲಿ ನಿಪುಣ, ಇಂಥವನ್ನು ನಮ್ಮ ಸುದ್ದಿವಾಹಿನಿಯಲ್ಲಿ ಇರಲೇಬರಧು. ಇವನನ್ನು ಬಂಧಿಸಿ ಕಾರಾಗೃಹಕ್ಕೆ ಹಾಕಬೇಕು. ಆಗ ಎಲ್ಲಾ ಸುಳ್ಳು ಸುದ್ದಿ ಮಾಡುವವರಿಗೆ ಬುದ್ಧಿ ಬರುತೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾರಿಗೂ ಬೇಡವಾದ ಶೋಭಾ ಕರಂದ್ಲಾಜೆ ತಿರಸ್ಕರಿಸಿ, ರಾಜೀವ್ ಗೌಡ ಗೆಲ್ಲಿಸಿ: ಡಿ ಕೆ ಶಿವಕುಮಾರ್‌

"ಉಡುಪಿ-ಚಿಕ್ಕಮಗಳೂರಿನ ಜನರು ತಿರಸ್ಕರಿಸಿದ ಬಿಜೆಪಿಯ ಶೋಭಾ ಕರಂದ್ಲಾಜೆಯನ್ನು ಬೆಂಗಳೂರು ಉತ್ತರದ ಜನರು...

ಕಾಂಗ್ರೆಸ್‌ ಕೊಟ್ಟ ಜಾಹೀರಾತು ಚೊಂಬಿನಲ್ಲಿ ಹಿಂದೂಗಳ ರಕ್ತ ತುಂಬಿದೆ: ಆರ್‌ ಅಶೋಕ್‌ ಕಿಡಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲವಾಗಿದ್ದು, ಕಾಂಗ್ರೆಸ್...

ಈ ದಿನ ಸಮೀಕ್ಷೆ | ಮೋದಿ ಸರ್ಕಾರದ ಅವಧಿಯಲ್ಲಿ ಬಡವರ-ಶ್ರೀಮಂತರ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ!

ಈ ದಿನ.ಕಾಮ್‌ ನಡೆಸಿದ ಸಮೀಕ್ಷೆಯಲ್ಲಿ ಶೇ.41.83ರಷ್ಟು ಮತದಾರರು ಬಡವರು ಮತ್ತು ಶ್ರೀಮಂತರ...

ಕಾಂಗ್ರೆಸ್‌ನ 1.25 ಲಕ್ಷ ಬೇಕೋ ಅಥವಾ ಬಿಜೆಪಿಯ ಖಾಲಿ ಚೊಂಬು ಬೇಕೋ ಯೋಚಿಸಿ: ಸಿಎಂ ಸಿದ್ದರಾಮಯ್ಯ

ಖಾಲಿ ಚೊಂಬಿಗೆ ಮತ ಹಾಕಿ ಹಾಳು ಮಾಡಿಕೊಳ್ತೀರೋ, ನಿಮ್ಮ ಬದುಕಿಗೆ ಸ್ಪಂದಿಸಿ...