ದೇಶದಾದ್ಯಂತ 4 ಗಂಟೆಗಳ ಕಾಲ ರೈತರಿಂದ ‘ರೈಲು ತಡೆ’

Date:

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಸ್‌ಪಿ) ಕಾನೂನು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ರೈತರು ದೇಶದಾದ್ಯಂತ ಇಂದು ರೈಲು ತಡೆ ಪ್ರಾರಂಭಿಸಿದ್ದು, ಪಂಜಾಬ್‌ನ 22 ಜಿಲ್ಲೆಗಳ ರೈಲು ನಿಲ್ದಾಣಗಳಲ್ಲಿ ಪ್ರಯಾಣ ವ್ಯತ್ಯಯವಾಗಿದೆ.

ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ದೇಶದಾದ್ಯಂತ ಈ ರೈಲು ತಡೆ ಕರೆಯನ್ನು ನೀಡಿದ್ದು, ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ರೈಲು ತಡೆ ನಡೆಸಲಾಗುತ್ತಿದೆ. ಪ್ರಮುಖವಾಗಿ ರೈತರು ಫಿರೋಜಾಬಾದ್, ಅಮೃತಸರ, ರೂಪನಗರ ಸೇರಿದಂತೆ ಪಂಜಾಬ್‌ನ ಹಲವು ಪ್ರದೇಶದಲ್ಲಿ ರೈಲು ತಡೆ ನಡೆಸಲಿದ್ದಾರೆ ಎಂದು ಕೆಎಂಎಂ ಮುಖಂಡ ಸರ್ವನ್ ಸಿಂಗ್ ಪಂಡೆರ್ ಹೇಳಿದ್ದಾರೆ.

ಭಾರ್ತಿ ಕಿಸಾನ್ ಯೂನಿಯನ್ (ಏಕ್ತಾ ಉಗ್ರಾಣ) , ಭಾರ್ತಿ ಕಿಸಾನ್ ಯೂನಿಯನ್ ಮತ್ತು ಕ್ರಾಂತಿಕಾರಿ ಕಿಸಾನ್ ಯೂನಿಯನ್ ಸಂಯುಕ್ತ ಕಿಸಾನ್ ಮೋರ್ಚಾದ ಭಾಗವಾಗಿದ್ದು ಈ ಸಂಘಟನೆಗಳು ರೈಲು ತಡೆ ನಡೆಸುತ್ತಿದೆ. ಇನ್ನು ಎಸ್‌ಕೆಎಂ ಕಿಸಾನ್ ಮಹಾಪಂಚಾಯತ್ ಅನ್ನು ದೆಹಲಿಯಲ್ಲಿ ನಡೆಸುವ ಘೋಷಣೆ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಿಸಾನ್ ಮಹಾಪಂಚಾಯತ್‌ನಲ್ಲಿ 400ಕ್ಕೂ ಅಧಿಕ ರೈತ ಸಂಘಟನೆಗಳು ಭಾಗಿಯಾಗಲಿದೆ” ಎಂದು ಎಸ್‌ಕೆಎಂ ತಿಳಿಸಿದೆ. ಇನ್ನು ಪಂಜಾಬ್‌ನಿಂದ ದೆಹಲಿಯತ್ತ ಸಾಗುತ್ತಿರುವ ರೈತರುಗಳು ಶಂಭು ಮತ್ತು ಖಾನೌರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಫೆಬ್ರವರಿ 13ರಂದು ಈ ರೈತರನ್ನು ಪಂಜಾಬ್-ಹರಿಯಾಣ ಗಡಿಯಲ್ಲಿ ತಡೆಯಲಾಗಿದ್ದು, ರೈತರ ಮೇಲೆ ಅಶ್ರುವಾಯು ಪ್ರಯೋಗಿಸಲಾಗಿದೆ. ರೈತರು ಪಡಿತರ ತುಂಬಿದ ಟ್ರಾಲಿಯೊಂದಿಗೆ ತಮ್ಮ ಮೆರವಣಿಗೆ ಪ್ರಾರಂಭಿಸಿದ್ದು, “ಈ ರೇಷನ್ ತಿಂಗಳುಗಟ್ಟಲೆ ಉಳಿಯುತ್ತದೆ, ನಾವು ನಮ್ಮ ಬೇಡಿಕೆ ಈಡೇರಿಸುವವರೆಗೂ ಹಿಂತಿರುಗುವುದಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

ಈ ನಡುವೆ ಪೊಲೀಸರು ರೈತರ ವಾಹನಗಳು ದೆಹಲಿಗೆ ಪ್ರವೇಶಿಸದಂತೆ ರಸ್ತೆಗಳಲ್ಲಿ ಮೊಳೆಗಳು ಮತ್ತು ಕಾಂಕ್ರೀಟ್ ಬ್ಲಾಕ್‌ಗಳನ್ನು ಹಾಕಿದ್ದಾರೆ ಎಂದು ವರದಿಯಾಗಿದೆ. ಇನ್ನು ಕಳೆದ ಬುಧವಾರ ರೈತರುಗಳು ದೆಹಲಿಗೆ ತಮ್ಮ ತಮ್ಮ ರಾಜ್ಯದಿಂದ ಆಗಮಿಸುವಂತೆ ರೈತ ಸಂಘಟನೆಗಳು ಕರೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಶುರು: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಲಿದ್ದು, ಕಾಂಗ್ರೆಸ್ ಅಧ್ಯಕ್ಷ...

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ...

ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಸಂಚು: ಎಎಪಿ ಗಂಭೀರ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು...