ದೆಹಲಿ ರೈತರ ಪ್ರತಿಭಟನೆ | ತಲೆಗೆ ರಬ್ಬರ್ ಬುಲೆಟ್ ತಗುಲಿ ಯುವ ರೈತ ಸಾವು

Date:

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತ್ರಿ ಕಾನೂನು ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮುಂದುವರೆದಿದ್ದು, 23 ವರ್ಷದ ಶುಭಕರನ್ ಸಿಂಗ್ ಎಂಬ ಪ್ರತಿಭಟನಾಕಾರ ಖಾನೌರಿ ಗಡಿಯಲ್ಲಿ ಬುಧವಾರ ತಲೆಗೆ ಪೆಟ್ಟು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

“ಮಧ್ಯಾಹ್ನ 3 ಗಂಟೆಗೆ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಅವರು ಸಾವನ್ನಪ್ಪಿದ್ದರು. ಅವರ ತಲೆಗೆ ಬುಲೆಟ್ ಗಾಯಗಳಾಗಿವೆ” ಎಂದು ಪಟಿಯಾಲಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ರಾಜೇಂದ್ರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಹರ್ನಾಮ್ ಸಿಂಗ್ ತಿಳಿಸಿದ್ದಾರೆ.

ಹರ್ಯಾಣ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ. “ಇದುವರೆಗೆ ಬಂದಿರುವ ಮಾಹಿತಿಯ ಪ್ರಕಾರ ಇಂದು ರೈತರ ಪ್ರತಿಭಟನೆಯಲ್ಲಿ ಯಾವುದೇ ರೈತ ಸಾವನ್ನಪ್ಪಿಲ್ಲ. ಇದು ಕೇವಲ ವದಂತಿಯಾಗಿದೆ. ಖಾನೌರಿ ಗಡಿಯಲ್ಲಿ ಇಬ್ಬರು ಪೊಲೀಸರು ಮತ್ತು ಒಬ್ಬ ಪ್ರತಿಭಟನಾಕಾರ ಗಾಯಗೊಂಡಿರುವ ಬಗ್ಗೆ ಮಾಹಿತಿ ಇದೆ, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಯುವ ರೈತ ಮೃತಪಟ್ಟಿರುವ ವಿಡಿಯೋವನ್ನು ರೈತ ಮುಖಂಡರು ಹಂಚಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬುಧವಾರ ಹರ್ಯಾಣ ಪೊಲೀಸರು ಮತ್ತು ಪ್ರತಿಭಟನಾ ನಿರತ ರೈತರ ನಡುವಿನ ತೀವ್ರ ಮುಖಾಮುಖಿಯ ನಡುವೆ ಬಟಿಂಡಾದ ಬಲೋಹ್ ಗ್ರಾಮದ ನಿವಾಸಿ ಶುಭಕರನ್ ಅವರ ತಲೆಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ ಮಾಲ್ವಾ) ಉಪಾಧ್ಯಕ್ಷ ಗುರ್ವಿಂದರ್ ಸಿಂಗ್ ಬಲೋಹ್ ಘಟನೆಯನ್ನು ದೃಢಪಡಿಸಿದ್ದಾರೆ. “ನನ್ನ ಗ್ರಾಮದ ಬಲೋಹ್ ನಿವಾಸಿಯಾಗಿರುವ ಶುಭಕರನ್ ಸಿಂಗ್ ಅವರು ಶಂಭು ಗಡಿಯಲ್ಲಿ ಪೊಲೀಸರ ಗುಂಡಿಗೆ ಗಾಯಗೊಂಡು ಸಾವನ್ನಪ್ಪಿದ್ದಾರೆ. ಈ ದುಃಖದ ಕ್ಷಣದಲ್ಲಿ ನಾವು ಅವರ ಕುಟುಂಬದೊಂದಿಗೆ ಇದ್ದೇವೆ” ಎಂದು ಅವರು ಹೇಳಿದರು.

ಖಾನೌರಿಯಲ್ಲಿ ಶಾಂತಿಯುತವಾಗಿ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ರಬ್ಬರ್ ಗುಂಡು ಹಾರಿಸಿರುವುದನ್ನು ಅಖಿಲ ಭಾರತ ಕಿಸಾನ್ ಮಜ್ದೂರ್ ಸಭಾ ಖಂಡಿಸಿದೆ. 23 ವರ್ಷ ವಯಸ್ಸಿನ ಶುಭಕರನ್ ಸಿಂಗ್ ಎಂಬ ಯುವಕ ರಬ್ಬರ್ ಗುಂಡುಗಳಿಂದ ಕೊಲ್ಲಲ್ಪಟ್ಟಿದ್ದಾರೆ. ಹಲವರಿಗೆ ಗಾಯವಾಗಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಪ್ರತಿಭಟನಾ ನಿರತ ಯುವಕರು ಮತ್ತು ರೈತರನ್ನು ದೇಶದ ಶತ್ರುಗಳಂತೆ ಪರಿಗಣಿಸುತ್ತಿರುವ ಮೋದಿ ಸರ್ಕಾರವನ್ನು ಎಐಕೆಎಂಎಸ್ ಖಂಡಿಸಿದೆ.

“ಇದು ಆರ್‌ಎಸ್‌ಎಸ್ ಮತ್ತು ಮೋದಿಯವರ ಜನವಿರೋಧಿ ಮತ್ತು ರಾಷ್ಟ್ರವಿರೋಧಿ ಗುಣವನ್ನು ಮತ್ತೊಮ್ಮೆ ಬಹಿರಂಗಪಡಿಸುತ್ತದೆ. ಗುಂಡು ಹಾರಿಸಲು ಆದೇಶಿಸಿದ ಪೊಲೀಸ್ ಮುಖ್ಯಸ್ಥ ಮತ್ತು ಅಧಿಕಾರಿಯನ್ನು ತಕ್ಷಣ ಬಂಧಿಸಬೇಕು” ಎಂದು ಎಐಕೆಎಂಎಸ್ ಒತ್ತಾಯಿಸಿದೆ.

ಇದಕ್ಕೂ ಮೊದಲು, ಫೆಬ್ರವರಿ 16 ರಂದು ಶಂಭು ಗಡಿಯಲ್ಲಿ 79 ವರ್ಷದ ರೈತ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ನಡೆಯುತ್ತಿರುವ ಪ್ರತಿಭಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ | ದೇಶದ ಹಿರಿಯ ಎಸ್‌ಪಿ ಸಂಸದ ಶಫೀಕುರ್ ರೆಹಮಾನ್ ಬರ್ಕ್ ನಿಧನ

ದೇಶದ ಹಿರಿಯ ಸಂಸದರಾಗಿದ್ದ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ಶಫೀಕುರ್...

ಬಾಬಾ ರಾಮ್‌ದೇವ್‌ ಮಾಲೀಕತ್ವದ ಪತಂಜಲಿಯ ಜಾಹೀರಾತಿಗೆ ನಿಷೇಧ ಹೇರಿದ ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆಯೇ? ಸುಪ್ರೀಂ ಕೋರ್ಟ್‌ ಗರಂ ಸುಪ್ರೀಂ...

ಮಧ್ಯ ಪ್ರದೇಶ | ಕೆಲಸ ಕಳೆದುಕೊಳ್ಳುವ ಭಯ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ...

ಮಾಲೆಗಾಂವ್‌ ಪ್ರಕರಣ | ವಿಚಾರಣೆಗೆ ಬಾರದಿದ್ದರೆ ಕ್ರಮ; ಪ್ರಮುಖ ಆರೋಪಿ ಪ್ರಜ್ಞಾ ಸಿಂಗ್‌ಗೆ ಕೋರ್ಟ್‌ ಎಚ್ಚರಿಕೆ

"ಒಂದೋ ವಿಚಾರಣೆಗೆ ಹಾಜರಾಗಿ, ಇಲ್ಲವೇ ಸೂಕ್ತ ಕ್ರಮ ಎದುರಿಸಲು ಸಿದ್ಧರಾಗಿ"...ಹೀಗಂತ ಹೇಳಿದ್ದು...