ಚಿರತೆಯ ಬೆನ್ನಟ್ಟಿ ಮಗಳನ್ನು ರಕ್ಷಿಸಿದ ತಂದೆ

Date:

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿದೆ. ಬಾಲಕಿ ಚೀರಿಕೊಂಡ ಕೂಡಲೇ ಸ್ಥಳಕ್ಕೆ ಧಾವಿಸಿದ ಆಕೆಯ ತಂದೆ, ಚಿರತೆಯನ್ನು ಓಡಿಸಿ, ಮಗಳನ್ನು ರಕ್ಷಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ.

ಕೊಳ್ಳೇಗಾಲ ವನ್ಯಜೀವಿ ವಿಭಾಗದಲ್ಲಿರುವ ಕಗ್ಗಲಿಗುಂಡಿ ಪೊಡುವಿನಲ್ಲಿ ಘಟನೆ ನಡೆದಿದೆ. ಆರು ವರ್ಷದ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿದ್ದು, ಆಕೆಯನ್ನು ಎಳೆದೊಯ್ಯಲು ಯತ್ನಿಸಿದೆ. ಈ ವೇಳೆ, ಬಾಲಕಿ ಚೀರಿಕೊಂಡಿದ್ದು, ಬಾಲಕಿಯ ತಂದೆ ಮತ್ತು ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದಾರೆ. ಬಾಲಕಿಯ ತಂದೆ ಚಿರತೆಯ ಬಳಿ ಕೂಗಿಕೊಂಡು ಅಡ್ಡಾಡಿದ್ದು, ಗಾಬರಿಗೊಂಡ ಚಿರತೆ ಬಾಲಕಿಯನ್ನು ಬಿಟ್ಟು ಓಡಿಹೋಗಿದೆ.

ಅರಣ್ಯದ ಅಂಚಿನಲ್ಲಿ ಗ್ರಾಮವಿದ್ದು, ಅಲ್ಲಿ 45 ಕುಟುಂಬಗಳು ವಾಸುತ್ತಿವೆ. ಕಾಡು ಪ್ರಾಣಿಗಳಾದ ಆನೆ, ಚಿರತೆಗಳು ಗ್ರಾಮದ ಮೇಲೆ ದಾಳಿ ಮಾಡದಂತೆ ತಡೆಯಲು ಸುತ್ತಲೂ ದೊಡ್ಡ ಕಂದಕವನ್ನು ತೆಗೆಯಲಾಗಿದೆ. ಆದರೂ, ಚಿರತೆ ದಾಳಿ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಾಲಕಿಯನ್ನು ರಕ್ಷಿಸಲಾಗಿದ್ದರೂ ಬಾಲಕಿಯ ತಂದೆ ರಾಮು, ಆತನ ಪತ್ನಿ ಲಲಿತಾ ಹಾಗೂ ಗ್ರಾಮಸ್ಥರು ಆಘಾತಗೊಂಡಿದ್ದಾರೆ. ಬಾಲಕಿಯ ಕೆಳ ದವಡೆಗೆ ಮುರಿದಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಬೋನುಗಳನ್ನು ಅಳವಡಿಸಿದ್ದಾರೆ. ಚಿರತೆಗಳ ಮೇಲೆ ಕಣ್ಣಿಡಲು ಅನೇಕ ಕಡೆಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ ಎಂದು ಮೈಸೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

ಬೀದರ್‌ ಜಿಲ್ಲೆಯಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಹೊಲದಲ್ಲಿ ಕೃಷಿ...

ವಿಜಯಪುರ | ಬಿಜೆಪಿ ಸೋಲಿಸಿ ಜಾತ್ಯಾತೀತ ಅಭ್ಯರ್ಥಿ ಗೆಲ್ಲಿಸಿ: ಡಿವೈಎಫ್‌ಐ ಕರೆ

ಬಿಜೆಪಿಯನ್ನು ಸೋಲಿಸಿ ಜಾತ್ಯಾತೀತ ಅಭ್ಯರ್ಥಿಯನ್ನು ಗೆಲ್ಲಿಸಲು ಡಿವೈಎಫ್‌ಐ ಕರೆ ನೀಡಿದ್ದಾರೆ. ಈ...

ಚಿತ್ರದುರ್ಗ | ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ: ಮಾಜಿ ಸಚಿವ ಎಚ್. ಆಂಜನೇಯ

ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ, ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು...