ಸಿಇಟಿ : ದಾಖಲಾತಿ ತಿದ್ದುಪಡಿಗೆ ಮೇ 24ರವರೆಗೂ ಅವಕಾಶ

Date:

2023–24ನೇ ಸಾಲಿನ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ‘ಸಾಮಾನ್ಯ ಪ್ರವೇಶ ಪರೀಕ್ಷೆ’ಗೆ (ಸಿಇಟಿ) ಅರ್ಜಿ ಹಾಕಿರುವವರು ಸಲ್ಲಿಸಿರುವ ದಾಖಲೆಗಳ ತಿದ್ದುಪಡಿಗೆ ಮೇ 24ರವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ಹೇಳಿದ್ದಾರೆ.

ಪ್ರಸಕ್ತ ವರ್ಷ, ಸಿಇಟಿಗೆ ದಾಖಲೆ ಮಟ್ಟದಲ್ಲಿ 2.5 ಲಕ್ಷ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಪುನರಾವರ್ತಿತರೂ ಸೇರಿದಂತೆ ಈ ಬಾರಿ ಅತಿಹೆಚ್ಚು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಮೇ 20 ರಿಂದ 22ರವರೆಗೆ ಸಿಇಟಿ ನಡೆಯಲಿದೆ ಎಂದು ಕೆಇಎ ಹೇಳಿದೆ.

ವಿದ್ಯಾರ್ಥಿಗಳು ತಮ್ಮ ಮೀಸಲಾತಿ, ವಾರ್ಷಿಕ ಆದಾಯ, ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿ, ವಿಶೇಷ ವರ್ಗ ಮತ್ತಿತರ ಮಾಹಿತಿಗಳಲ್ಲಿ ತಪ್ಪುಗಳಿದ್ದರೆ ಸರಿಪಡಿಸಬಹುದು. ತಿದ್ದುಪಡಿ ಮಾಡಿದ ಅರ್ಜಿಯ ಮುದ್ರಿತ ಪ್ರತಿಯನ್ನು ವಿದ್ಯಾರ್ಥಿಗಳು ತಮ್ಮ ಸುರಕ್ಷತೆಗಾಗಿ ಇಟ್ಟಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌ ರಮ್ಯಾ ಸಲಹೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಭ್ಯರ್ಥಿಯ ಹೆಸರು, ತಂದೆ- ತಾಯಿಯ ಹೆಸರು, ಜನ್ಮ ದಿನಾಂಕ ಇತ್ಯಾದಿಗಳ ಬದಲಾವಣೆಗೆ ಅವಕಾಶ ಇಲ್ಲ. ಇದರಲ್ಲೇನಾದರೂ ಬದಲಾವಣೆಗಳಿದ್ದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಂಪರ್ಕಿಸಬೇಕು. ಆದರೆ, ಸಿಬಿಎಸ್‌ಇ, ಸಿಐಎಸ್‌ಸಿಇ ಪಠ್ಯಕ್ರಮಗಳಲ್ಲಿ ಎಸ್ಸೆಸ್ಸೆಲ್ಸಿ ಓದಿರುವವರು ಈ ವಿವರಗಳನ್ನು ತಮ್ಮ ಅರ್ಜಿಯಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದು ಎಂದು ವಿವರ ನೀಡಿದ್ದಾರೆ.

ರಾಷ್ಟ್ರೀಯತೆಯನ್ನು ತಿದ್ದುಪಡಿ ಮಾಡಿಕೊಳ್ಳಲು ಬಯಸುವ ಸಾಗರೋತ್ತರ ಭಾರತೀಯ ಪ್ರಜೆ(ಒಸಿಐ) ಅಭ್ಯರ್ಥಿಗಳು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಹೆಸರಿನಲ್ಲಿ ನಿಗದಿತ ಮೊತ್ತದ ಡಿಮ್ಯಾಂಡ್‌ ಡ್ರಾಫ್ಟ್‌ ಪಡೆದುಕೊಂಡು, ಏ.13 ಮತ್ತು 15ರಂದು ನೇರವಾಗಿ ಪ್ರಾಧಿಕಾರದ ಕಚೇರಿಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ‘ಕಲಿಕಾ ಚೇತರಿಕಾ’ ಕ್ರಮ; ಶೈಕ್ಷಣಿಕ ಕೌಶಲ್ಯಗಳಲ್ಲಿ ಸುಧಾರಣೆ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ...

2024-25ರ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಮೇ 29ರಿಂದ ಶಾಲೆಗಳು ಆರಂಭ

2024-25ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು,...

ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ...