ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಅಧಿಕಾರಾವಧಿಯಲ್ಲಿ ಸತತ 6ನೇ ಬಾರಿಗೆ ಬಜೆಟ್ ಮಂಡಿಸಿದರು.
ಸಂಸತ್ನ ನೂತನ ಕಟ್ಟಡಲ್ಲಿ ಮೊದಲ ಬಾರಿಗೆ ಬಜೆಟ್ ಮಂಡಿಸಲಾಯಿತು. ಮಧ್ಯಂತರ ಆಯವ್ಯಯಗಳ ಪಟ್ಟಿ ಇದಾಗಿದ್ದು, ಸಾರ್ವತ್ರಿಕ ಚುನಾವಣೆ ನಂತರ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಆಗಲಿದೆ. ಚುನಾವಣಾ ವರ್ಷದ ಹಿನ್ನೆಲೆಯಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹೊಂದಲಾಗಿತ್ತು.
ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನ ಪ್ರಮುಖ ಅಂಶಗಳು:
ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
- 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ, ಕಳೆದ 10 ವರ್ಷದಲ್ಲಿ ದೇಶದ ಆರ್ಥಿಕ ಸ್ಥಿತಿ ಬದಲಾಗಿದೆ.
- ಆಶಾ ಕಾರ್ಯಕರ್ತರಿಗೆ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ
- 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ, ಕಳೆದ 10 ವರ್ಷದಲ್ಲಿ ದೇಶದ ಆರ್ಥಿಕ ಸ್ಥಿತಿ ಬದಲಾಗಿದೆ.
- ಫಸಲ್ ಬಿಮಾ ಯೋಜನೆಯಿಂದ ನಾಲ್ಕು ಕೋಟಿ ರೈತರಿಗೆ ಲಾಭ
- ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ.
- 2047ರೊಳಗೆ ವಿಕಸಿತ ಭಾರತದ ಗುರಿ
- ಮೀನುಗಾರಿಕೆಗೆ ಹೊಸ ಸಚಿವಾಲಯ ಆರಂಭ
- ಮೇಲ್ಛಾವಣಿ ಸೋಲಾರ್‌ನಿಂದ 1 ಕೋಟಿ ಮನೆಗಳಿಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್
- ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಹೆಚ್ಚಿನ ಆದ್ಯತೆ
- ಸಿಲ್ಕ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ
- ದೇಶದ ಜನರ ಸರಾಸರಿ ಆದಾಯ ಶೇ 50ರಷ್ಟು ಏರಿದೆ
- 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ
- ಏಳು ಲಕ್ಷದವರೆಗೆ ಆದಾಯ ಇರುವವರಿಗೆ ಆದಾಯ ತೆರಿಗೆ ಇಲ್ಲ