ಬೆಂಗಳೂರು | ಅಪಾರ್ಟ್‌ಮೆಂಟ್‌ನ ಲಿಫ್ಟ್‌ನಲ್ಲಿ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಫುಡ್‌ ಡೆಲಿವರಿ ಬಾಯ್

Date:

  • ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು
  • ಫುಡ್‌ ಡೆಲಿವರಿ ಮಾಡಲು ಅಪಾರ್ಟ್‌ಮೆಂಟ್‌ಗೆ ತೆರಳಿದ್ದ ಆರೋಪಿ

ರಾಜ್ಯ ರಾಜಧಾನಿ ಬೆಂಗಳೂರಿನ ಅಪಾರ್ಟ್‌ಮೆಂಟ್‌ವೊಂದಕ್ಕೆ ಫುಡ್‌ ಡೆಲಿವರಿ ಮಾಡಲು ತೆರಳಿದ್ದ ಡೆಲಿವರಿ ಬಾಯ್ ಲಿಫ್ಟ್‌ನಲ್ಲಿ ತೆರಳುವಾಗ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಜೂನ್‌ 23 ರಂದು ಬೆಂಗಳೂರಿನ ತಲ್ಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ನಲ್ಲಿ ಒಬ್ಬರು ಆನ್‌ಲೈನ್ ಮುಖಾಂತರ ಫುಡ್‌ ಆರ್ಡರ್ ಮಾಡಿದ್ದಾರೆ. ಆರ್ಡರ್ ಮಾಡಿದ್ದ ಫುಡ್ ಅನ್ನು ಡೆಲಿವರಿ ಮಾಡಲು ಅಪಾರ್ಟ್‌ಮೆಂಟ್‌ಗೆ 30 ವರ್ಷದ ಚೇತನ್ ಎಂಬ ಫುಡ್ ಡೆಲಿವರಿ ಬಾಯ್ ಬಂದಿದ್ದನು. ಈ ವೇಳೆ, ಅಪಾರ್ಟ್‌ಮೆಂಟ್‌ನ 10 ವರ್ಷದ ಬಾಲಕಿ 13 ನೇ ಮಹಡಿಯಲ್ಲಿರುವ ತನ್ನ ಮನೆಗೆ ತೆರಳಲು ಲಿಫ್ಟ್‌ನಲ್ಲಿ ತೆರಳುತ್ತಿದ್ದಳು. ಇದೇ ಸಮಯದಲ್ಲಿ ಲಿಫ್ಟ್‌ನಲ್ಲಿ ಬಂದ ಈತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ಬಾಲಕಿಯ ಪೋಷಕರು ತಕ್ಷಣವೇ ಅಪಾರ್ಟ್‌ಮೆಂಟ್‌ನ ಸೆಕ್ಯೂರಿಟಿ ಗಾರ್ಡ್‌ಗೆ ಮಾಹಿತಿ ನೀಡಿ, ಡೆಲಿವರಿ ಬಾಯ್ ಅನ್ನು ತಡೆಹಿಡಿಯಲು ಹೇಳಿದ್ದಾರೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಲಿಫ್ಟ್‌ನಲ್ಲಿ ಬಾಲಕಿ ಒಬ್ಬಳೆ ಇದ್ದ ಕಾರಣ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಕಾಮುಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ದೃಶ್ಯ ಲಿಫ್ಟ್‌ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಹಿಳೆಯರ ಸುರಕ್ಷತೆಗಾಗಿ ‘ಸುರಕ್ಷಾ ದ್ವೀಪ’ ಆರಂಭ

ಸದ್ಯ ತಲ್ಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆ | ಬಿಯರ್ ಮೊರೆ ಹೋದ ಮದ್ಯಪ್ರಿಯರು: 11 ದಿನದಲ್ಲಿ 27 ಲಕ್ಷ ಲೀ. ಬಿಯರ್ ಮಾರಾಟ

ತಾಪಮಾನ ಹೆಚ್ಚಳದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ಬಿಸಿಯಾದ ಪಾನೀಯಗಳಿಗಿಂತ ತಂಪಾದ...

ಕಾವೇರಿ 5ನೇ ಹಂತದ ನೀರು ಬಳಕೆಗೆ ಜಲಮಂಡಳಿ ಚಿಂತನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜಲಮಂಡಳಿ ನೀರಿನ...

ಏ.18 ರಿಂದ ಸಿಇಟಿ ಪರೀಕ್ಷೆ ಆರಂಭ : ಮಾರ್ಗಸೂಚಿಗಳೇನು?

ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಮಾನ್ಯ ಪ್ರವೇಶ...

ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ...