ಜನ್ಮದಿನಕ್ಕೆ ಆನ್‌ಲೈನ್‌ ಮೂಲಕ ಆರ್ಡರ್‌ ಮಾಡಿದ್ದ ಕೇಕ್ ತಿಂದು 10 ವರ್ಷದ ಬಾಲಕಿ ಸಾವು!

Date:

ತನ್ನ ಜನ್ಮದಿನದಂದು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದ ಕೇಕ್ ತಿಂದ ಬಳಿಕ 10 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಪಂಜಾಬ್‌ನಿಂದ ವರದಿಯಾಗಿದೆ.

ಪಟಿಯಾಲದಲ್ಲಿ ನೆಲೆಸಿರುವ ಕುಟುಂಬ 10 ವರ್ಷದ ಮಗಳು ಮಾನ್ವಿ ಹುಟ್ಟುಹಬ್ಬಕ್ಕೆ ಮಾರ್ಚ್ 24ರಂದು ಕುಟುಂಬದ ಸದಸ್ಯರು ಆನ್‌ಲೈನ್ ಮೂಲಕ ಕೇಕ್ ಆರ್ಡರ್ ಮಾಡಿದ್ದರು. ಹುಡುಗಿಯ ತಂಗಿ ಸೇರಿದಂತೆ ಇಡೀ ಕುಟುಂಬ ಕೇಕ್ ತಿಂದ ನಂತರ ಅಸ್ವಸ್ಥಗೊಂಡಿದ್ದರು ಎಂದು ಮೃತ ಬಾಲಕಿಯ ಅಜ್ಜ ಹೇಳಿಕೆ ನೀಡಿದ್ದು, ಪಟಿಯಾಲದ ಬೇಕರಿಯೊಂದರಿಂದ ಈ ಕೇಕ್ ಅನ್ನು ಆನ್‌ಲೈನ್‌ ಮೂಲಕ ಆರ್ಡರ್ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.

10ರ ಹರೆಯದ ಬಾಲಕಿ ಮಾನ್ವಿ, ತನ್ನ ಸಾವಿಗೆ ಕೆಲವೇ ಗಂಟೆಗಳ ಮೊದಲು ತನ್ನ ಕುಟುಂಬದೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಾರ್ಚ್ 24ರಂದು ರಾತ್ರಿ 7 ಗಂಟೆ ಸುಮಾರಿಗೆ ಅವರು ಕೇಕ್ ಅನ್ನು ಕತ್ತರಿಸಿ, ಎಲ್ಲರಿಗೂ ಹಂಚಲಾಗಿತ್ತು. ಅದೇ ದಿನ ರಾತ್ರಿ 10 ಗಂಟೆಗೆ ಇಡೀ ಕುಟುಂಬವು ಅಸ್ವಸ್ಥಗೊಂಡಿತ್ತು. ಮರುದಿನ ಬೆಳಗ್ಗೆ ಬಾಲಕಿ ಮಾನ್ವಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ಎಂದು ಆಕೆಯ ಅಜ್ಜ ಹರ್ಬನ್ ಲಾಲ್ ಹೇಳಿಕೆ ನೀಡಿದ್ದಾರೆ.

ಮನೆಗೆ ತರಿಸಲಾಗಿದ್ದ ಕೇಕ್ ಅನ್ನು ‘ಕೇಕ್ ಕನ್ಹಾ’ ಎಂಬ ಬೇಕರಿಯಿಂದ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್ ಝೊಮ್ಯಾಟೋ ಮೂಲಕ ಆರ್ಡರ್ ಮಾಡಲಾಗಿತ್ತು ಎಂದು ತಿಳಿದುಬಂದಿದ್ದು, ಚಾಕೊಲೇಟ್ ಕೇಕ್‌ನಲ್ಲಿ ವಿಷಕಾರಿ ಅಂಶವಿತ್ತು. ಇದರಿಂದಾಗಿ ಕುಟುಂಬ ಸದಸ್ಯೆಯನ್ನು ಕಳೆದುಕೊಂಡೆವು ಎಂದು ಕುಟುಂಬದವರು ಆರೋಪಿಸಿದ್ದಾರೆ.

ತಮ್ಮ ಮಗಳ ಸಾವಿಗೆ ಕೇಕ್ ಕಾರಣ ಎಂದು ಹೇಳಿರುವ ಕುಟುಂಬವು ಬೇಕರಿ ಮತ್ತು ಅದು ಮಾರಾಟ ಮಾಡುವ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದೆ.

ಬೇಕರಿ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. “ದೇಹದ ಮರಣೋತ್ತರ ಪರೀಕ್ಷೆಯನ್ನು ಮಾಡಲಾಗಿದೆ. ಕೇಕ್‌ನ ಮಾದರಿಯನ್ನು ಸಹ ಪರೀಕ್ಷೆಗೆ ಕಳುಹಿಸಲಾಗಿದೆ, ನಾವು ವರದಿಗಳಿಗಾಗಿ ಕಾಯುತ್ತಿದ್ದೇವೆ” ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಫುಡ್​ ಪಾಯ್ಸನ್‌ ನಿಂದಾಗಿ ಈ ದಾರುಣ ಘಟನೆ ಸಂಭವಿಸಿದೆ ಎನ್ನಲಾಗಿದೆ. ಬೇಕರಿ ಅಂಗಡಿ ಮಾಲೀಕರ ವಿರುದ್ಧ ಐಪಿಸಿ ಸೆಕ್ಷನ್​ 273, 304ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಡವಾಗಿ ತಲುಪಿದ ವಿಮಾನ; ಒಲಿಂಪಿಕ್ ಅರ್ಹತಾ ಪಂದ್ಯದಿಂದ ಹೊರಗುಳಿದ ಕುಸ್ತಿಪಟು ದೀಪಕ್ ಪೂನಿಯಾ ಮತ್ತು ಸುಜೀತ್ ಕಲ್ಕಲ್‌

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಡೆ ಕ್ಷಣದಲ್ಲಿ ಪದಕ ಕಳೆದುಕೊಂಡ ಕುಪ್ತಿಪಟು ದೀಪಕ್ ಪೂನಿಯಾ...

ಡಿಡಿ ನ್ಯೂಸ್ ಲೋಗೊ ಬಣ್ಣ ಕೇಸರೀಕರಣ: ವ್ಯಾಪಕ ಆಕ್ರೋಶ

ಕೇಂದ್ರ ಸರ್ಕಾರ ಅಧೀನದ ವಿದ್ಯುನ್ಮಾನ ಮಾಧ್ಯಮ ಸಂಸ್ಥೆ ಡಿಡಿ ನ್ಯೂಸ್‌ ಲೋಗೊ...

ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಶುರು: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಲಿದ್ದು, ಕಾಂಗ್ರೆಸ್ ಅಧ್ಯಕ್ಷ...

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...