ಕರ್ನಾಟಕ ಚುನಾವಣೆಗೆ ಗೋವಾದಿಂದ ವೇತನ ಸಹಿತ ರಜೆ; ವಿಪಕ್ಷಗಳ ಟೀಕೆ

Date:

ಗೋವಾ ಸರ್ಕಾರವು ಮೇ 10 ರಂದು ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಮತದಾನ ಮಾಡುವ ಕರ್ನಾಟಕ ಮೂಲದ ಸರ್ಕಾರಿ ನೌಕರರು ಮತ್ತು ಕೈಗಾರಿಕಾ ಕಾರ್ಮಿಕರು ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ವೇತನ ಸಹಿತ ರಜೆ ಘೋಷಿಸಿದೆ.

ಕರ್ನಾಟಕದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೇ 10 ರಂದು ವೇತನ ಸಹಿತ ರಜೆ ಎಂದು ಘೋಷಿಸಿ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. ಸರ್ಕಾರಿ ನೌಕರರು ಮತ್ತು ಕೈಗಾರಿಕಾ ಕಾರ್ಮಿಕರು ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ರಜೆಯನ್ನು ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸರ್ಕಾರದ ಈ ನಿರ್ಧಾರಕ್ಕೆ ವಿಪಕ್ಷಗಳು ಮತ್ತು ಉದ್ಯಮ ಸಂಸ್ಥೆಗಳಿಂದ ವಿರೋಧ ವ್ಯಕ್ತವಾಗಿದೆ. ಆಮ್ ಆದ್ಮಿ ಪಕ್ಷದ ಗೋವಾ ಘಟಕ, ಗೋವಾ ಫಾರ್ವರ್ಡ್ ಪಾರ್ಟಿ ಪಕ್ಷಗಳು ರಜೆ ನೀಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗೋವಾ ರಾಜ್ಯ ಕೈಗಾರಿಕೆಗಳ ಸಂಘದ ಅಧ್ಯಕ್ಷ ದಾಮೋದರ್ ಕೋಚ್ಕರ್, ರಾಜ್ಯ ಸರ್ಕಾರದ ಇಂತಹ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ನಾವು ಕಾನೂನು ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಗೋವಾ ಮುಖ್ಯಮಂತ್ರಿ ಕಚೇರಿ, ನೆರೆಯ ರಾಜ್ಯಗಳಲ್ಲಿ ಚುನಾವಣೆಗಳು ಇದ್ದಾಗ ರಜೆ ನೀಡುವುದು ವಾಡಿಕೆ. ಕಳೆದ ವರ್ಷ ಗೋವಾದಲ್ಲಿ ಚುನಾವಣೆ ನಡೆದಾಗ ಕರ್ನಾಟಕದಲ್ಲಿಯೂ ರಜೆ ಘೋಷಿಸಲಾಗಿತ್ತು. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮುಸ್ಲಿಮರು ಎಷ್ಟು ಸಂಪತ್ತು ಹೊಂದಿದ್ದಾರೆ? ಇಲ್ಲಿದೆ ಅಧ್ಯಯನದ ವರದಿ

ಪ್ರಧಾನಿ ನರೇಂದ್ರ ಮೋದಿ ಏ.21 ರಂದು ರಾಜಸ್ಥಾನದಲ್ಲಿ ಭಾಷಣ ಮಾಡುತ್ತಾ ಕಾಂಗ್ರೆಸ್...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೀದರ್‌ | ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ

ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್‌-ಬಿಜೆಪಿ...

2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ...