ಸರ್ಕಾರ, ಕೃಷಿ ವಿಜ್ಞಾನಿಗಳು ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ; ರೈತ ಸಂಘ ಕಿಡಿ

Date:

ರಾಯಚೂರು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಹತ್ತಿ ಬೆಳೆಗೆ ರೋಗ ತಗುಲಿದ್ದು, ಸಾವಿರಾರು ಎಕರೆ ಬೆಳೆ ನಷ್ಟವಾಗಿದೆ. ನಷ್ಟ ಅನುಭಿವಿಸಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.

ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಜಿಲ್ಲೆಯಲ್ಲಿ ಬಹುತೇಕ ರೈತರು ಬೆಳೆದಿದ್ದು ಬಿ.ಟಿ ತಳಿಯ ಹತ್ತಿ ಬೆಳೆ ಕೆಂಪು-ಹಳದಿ ಬಣ್ಣಕ್ಕೆ ತಿರುಗಿ, ಒಣಗಿ ಹೋಗಿವೆ. ಬಹಳಷ್ಟು ರೈತರು ನಷ್ಟ ಅನುಭವಿಸಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ರೋಗಕ್ಕೆ ತುತ್ತಾಗಿದ್ದ ಬೆಳೆಗೆ ಕೃಷಿ ವಿಶ್ವವಿದ್ಯಾಲಯದ ತಜ್ಞರು ಸೂಚಿಸಿದರ ಕ್ರಿಮಿನಾಶಕ ಸಿಂಪಡಿಸಲಾಗಿದೆ. ಆದರೂ ರೋಗ ಹತೋಟಿಗೆ ಬಂದಿಲ್ಲ. ಸಾವಿರಾರು ರೈತರು ಹತ್ತಿ ಬೆಳೆಯನ್ನು ಕಿತ್ತುಹಾಕಿ, ಪರ್ಯಾಯ ಬೆಳೆಯತ್ತ ಮುಖ ಮಾಡಿದ್ದಾರೆ” ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿ.ಟಿ ತಳಿಯ ಹತ್ತಿ ಬೆಳೆದು, ನಷ್ಟ ಅನುಭವಿಸಿದ ರೈತರಿಗೆ ನಷ್ಟ ಪರಿಹಾರ ನೀಡಬೇಕು. ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆಯೆಂದು ಘೋಷಿಸಬೇಕು. ರೈತರ ಸಹಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು” ಎಂದು ಒತ್ಥಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ, ಗೌರವಾಧ್ಯಕ್ಷ ಮಾಜೀದ್ ಸಾಬ್, ಉಪಾಧ್ಯಕ್ಷ ವೀರೇಶ್ ಗೌಡ, ಹುಲಿಗೆಪ್ಪ ಜಾಲಬೆಂಚಿ, ನರಸರೆಡ್ಡಿ, ಮಲ್ಲಿಕಾರ್ಜುನ ರಮೇಶ ಶ್ರೀಧರ ತಿಮ್ಮಪ್ಪ ಸೇರಿದಂತೆ ರೈತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...