ಬಿಟ್‌ ಕಾಯಿನ್‌ ಹಗರಣ | ಮರು ತನಿಖೆಗೆ ರಾಜ್ಯ ಸರ್ಕಾರ ಆದೇಶ

Date:

  • ಬಿಟ್‌ ಕಾಯಿನ್‌ ಹಗರಣವನ್ನು ಸಿಸಿಬಿಯಿಂದ ಸಿಐಡಿಗೆ ವರ್ಗಾವಣೆ ಮಾಡಿದ ಸರ್ಕಾರ
  • ಹಗರಣದಲ್ಲಿ ಬಿಜೆಪಿಯ ಹಲವು ನಾಯಕರ ಕೈವಾಡವಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌

ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್‌ ಕಾಯಿನ್‌ ಹಗರಣಕ್ಕೆ ಮರುಜೀವ ನೀಡಿದ್ದು, ಪ್ರಕರಣವನ್ನು ಮರು ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆದೇಶ ನೀಡಿದೆ.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ಈ ಬಿಟ್‌ ಕಾಯಿನ್‌ ಹಗರಣ ನಡೆದಿತ್ತು. 2020ರಲ್ಲಿ ಬಿಟ್ ಕಾಯಿನ್ ಹಗರಣ ಸಂಬಂಧ ಬೆಂಗಳೂರಿನ ಕಾಟನ್​ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ವಿಶೇಷ ತಂಡ ರಚಿಸಿ ಹೆಚ್ಚಿನ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರು ಸಿಐಡಿ ಡಿಜಿಪಿ ಎಂ ಎ ಸಲೀಂ ಅವರಿಗೆ ಪತ್ರ ಬರೆದಿದ್ದರು. ಬಳಿಕ ಅಲೋಕ್ ಮೋಹನ್ ಪತ್ರದ ಮೂಲಕ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಸರ್ಕಾರ ಮರು ತನಿಖೆಗೆ ಆದೇಶಿಸಿದೆ.

ಹಗರಣವನ್ನು ಮರುತನಿಖೆಗೆ ವಹಿಸುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್, “ನಾವು ಹಿಂದೆ ಬಿಜೆಪಿ ಸರ್ಕಾರದ ಬಿಟ್ ಕಾಯಿನ್ ವಿಚಾರದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಬಗ್ಗೆ ಮಾತನಾಡಿದ್ದೆವು. ಈಗ ಬಿಟ್‌ ಕಾಯಿನ್ ಪ್ರಕರಣ ಮರು ತನಿಖೆಗೆ ಅದೇಶಿಸಿದ್ದೇವೆ. ಸಿಐಡಿ ಅಡಿಯಲ್ಲಿ ಎಸ್‌ಐಟಿ ರಚನೆ ಮಾಡಿದ್ದೇನೆ. ಸಂಬಂಧಿಸಿದ ಆದೇಶಗಳನ್ನು ಮಾಡುತ್ತೇವೆ. ತಾಂತ್ರಿಕ, ಅಂತರ್ ರಾಜ್ಯ, ಅಂತಾರಾಷ್ಟ್ರ ಇರುವುದಿರಂದ ನಿಗದಿತ ಸಮಯದಲ್ಲಿ ಮುಗಿಯಲಿದೆ ಎಂದು ಹೇಳಲು ಬರುವುದಿಲ್ಲ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಎಸ್‌ಐಟಿ ತಂಡದಲ್ಲಿ ಯಾರು ಯಾರು ಇದ್ದಾರೆ?

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಚಲನ ಸೃಷ್ಟಿಸಿದ್ದ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ನಿಟ್ಟಿನಲ್ಲಿ ಎಸ್‌ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಆರ್ಥಿಕ ಅಪರಾಧ ಘಟಕದ ಎಡಿಜಿಪಿ ಮನೀಶ್ ಕರ್ಭಿಕರ್ ನೇತೃತ್ವದಲ್ಲಿ ಎಸ್‌ಐ ಟಿ ರಚನೆ ಮಾಡಲಾಗಿದ್ದು, ನಾಲ್ವರು ಇತರ ಅಧಿಕಾರಿಗಳು ಈ ತಂಡದಲ್ಲಿ ಇದ್ದಾರೆ. ಆರ್ಥಿಕ ಅಪರಾಧ ವಿಭಾಗದ ಡಿಜಿಪಿ ಡಾ. ಕೆ ವಂಶಿ ಕೃಷ್ಣ, ಡಿಸಿಪಿ ಡಾ. ಅನೂಪ್ ಎ ಶೆಟ್ಟಿ, ಆರ್ಥಿಕ ಅಪರಾಧಗಳು ಮತ್ತು‌ ಸೈಬರ್ ಅಪರಾಧ ವಿಭಾಗದ ಅಧೀಕ್ಷಕ ಶರತ್ ಈ ತಂಡದಲ್ಲಿದ್ದಾರೆ.

ಪ್ರಕರಣದ ಹಿನ್ನೆಲೆ

ಸಿಸಿಬಿ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ (26) ಎಂಬಾತನನ್ನು ಬಂಧಿಸಿದ್ದರು. ಆರೋಪಿ ರಾಜ್ಯ ಸರ್ಕಾರದ ಇ-ಸಂಗ್ರಹಣಾ ಪೋರ್ಟಲ್‌ ಜಾಲತಾಣ ಹ್ಯಾಕ್ ಮಾಡಿ 46 ಕೋಟಿ ರೂ. ದೋಚಿದ್ದ ಸಂಗತಿ ಪತ್ತೆ ಮಾಡಿದ್ದರು. ಜೊತೆಗೆ, ಹ್ಯಾಕರ್ ಶ್ರೀಕೃಷ್ಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಸಿದ್ದ ಬಿಟ್ ಕಾಯಿನ್ ಪ್ರಕರಣಗಳು ಹೊರಬಂದಿದ್ದವು. ಆದರೆ, ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಿರಲಿಲ್ಲ. ಸಿಸಿಬಿ ಪೊಲೀಸರು ತರಾತುರಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ನಡೆ ಹಲವು ಅನುಮಾನಕ್ಕೆ ಕಾರಣವಾಗಿತ್ತು. ಇದೀಗ, ಪೊಲೀಸ್ ಕಮಿಷನರ್ ತನಿಖೆ ಮುಂದುವರಿಸಲು ಆಸಕ್ತಿ ತೋರಿಸಿದ್ದು, ಗೃಹ ಸಚಿವರ ಸೂಚನೆ ಮೇರೆಗೆ ತನಿಖೆ ನಡೆಸಲು ಪತ್ರ ಬರೆದಿದ್ದರು.

ಈ ಸುದ್ದಿ ಓದಿದ್ದೀರಾ? ರಾಜ್ಯದ ಇತಿಹಾಸದಲ್ಲಿ ವಿಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು: ಕಾಂಗ್ರೆಸ್‌ ಟೀಕೆ

ಬಿಟ್‌ ಕಾಯಿನ್‌ ಹಗರಣವನ್ನು ಈ ಹಿಂದೆ ಸಿಸಿಬಿ ತನಿಖೆ ಮಾಡಿತ್ತು. ಸಿಸಿಬಿ ತನಿಖೆಯಲ್ಲಿ ಹಗರಣ ನಡೆದಿದೆ, ರಾಜಕಾರಣಿಗಳು ಹಣ ಮಾಡಿದ್ದಾರೆಂಬ ಆರೋಪ ಕೇಳಿಬಂದಿದ್ದವು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮೇಲೆ ಆರೋಪ ಕೇಳಿಬಂದಿತ್ತು. ಹೀಗಾಗಿ ಮರು ತನಿಖೆಗೆ ಕಾಂಗ್ರೆಸ್ ಆಗ್ರಹ ಮಾಡಿತ್ತು. ಅದರಂತೆ ಸರ್ಕಾರ ಈಗ ಸಿಐಡಿಗೆ ಪ್ರಕರಣವನ್ನು ವರ್ಗಾವಣೆ ಮಾಡಿದೆ.

ಬಿಟ್‌ ಕಾಯಿನ್‌ ಹಗರಣದಲ್ಲಿ ಹಲವು ಬಿಜೆಪಿ ನಾಯಕರ ಕೈವಾಡವಿದೆ ಎಂದು ಆರೋಪ ಮಾಡಿದ್ದ ಕಾಂಗ್ರೆಸ್‌ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿತ್ತು. ಆರೋಪಿಗಳು ರಾಜ್ಯ ಸರ್ಕಾರದ ಇ-ಪೋರ್ಟಲ್ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡುವ ಮೂಲಕ 11.5 ಕೋಟಿ ರೂ.ಗಳನ್ನು ಬೇರೊಬ್ಬರ ಖಾತೆಗೆ ವರ್ಗಾಯಿಸಿದ್ದರು. ಆರೋಪಿಗಳಲ್ಲಿ ಒಬ್ಬನಾದ ಶ್ರೀಕೃಷ್ಣ ರಮೇಶ್ ಬಂಧನವಾಗಿತ್ತು. ಬಳಿಕ ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ವೈಫಲ್ಯ-6 | ಎಲ್ಲಿವೆ ಸಂಸದರ ಆದರ್ಶ ಗ್ರಾಮಗಳು; ಮೋದಿ ದತ್ತು ಪಡೆದ ಹಳ್ಳಿಗಳು?

ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಏನೆಲ್ಲಾ ಸೌಲಭ್ಯಗಳಿದ್ದವೂ ಆ ಯಾವುದೇ ಸೌಕರ್ಯಗಳೂ...

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಬೆಂಗಳೂರು |ತಲಾ ₹1 ಲಕ್ಷ ದಂಡ ಬಾಕಿ ಉಳಿಸಿಕೊಂಡಿವೆ 123 ವಾಹನಗಳು

ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿ, ಹೆಚ್ಚು ದಂಡಕ್ಕೆ ಗುರಿಯಾಗಿರುವ ವಾಹನಗಳನ್ನು...

ಚಿಕ್ಕಮಗಳೂರು | ಜಯಪ್ರಕಾಶ್ ಹೆಗ್ಡೆ ಮಲೆನಾಡಿನ ಅಡಿಕೆ ಬೆಳೆಗಾರರ ಆಶಾಕಿರಣ: ಬಿ ಎ ರಮೇಶ್ ಹೆಗ್ಡೆ

"ಜಯಪ್ರಕಾಶ್ ಹೆಗ್ಡೆ ಅವರು ಅಡಿಕೆ ಬೆಳೆಗಾರರ ಆಶಾಕಿರಣ. ಕೇವಲ ಎರಡು ವರ್ಷಗಳಲ್ಲಿ...