ದಕ್ಷಿಣ ಕನ್ನಡ | ಸರ್ಕಾರಿ ಶಾಲೆ ಭೂಹಗರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿಲ್ಲ; ಹೋರಾಟ ಸಮಿತಿ ಆರೋಪ

Date:

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ ಬಳಿಯ ಕಾನ – ಕಟ್ಲ ಜನತಾಕಾಲನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ 1.60 ಎಕ್ರೆ ಭೂ ಕಬಳಿಕೆ ಹಗರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿಲ್ಲ. ಹಗರಣದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಆದ ಬಳಿಕವೂ ಜಿಲ್ಲಾಡಳಿತ ಮತ್ತು ಉನ್ನತ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿಲ್ಲಎಂದು ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಸಂಚಾಲಕ, ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಜ್ ಆರೋಪಿಸಿದ್ದಾರೆ

ಮಂಗಳೂರಿನಲ್ಲಿ ನ.27ರಂದು ನಡೆಯಲಿರುವ ಬೃಹತ್ ಹೋರಾಟದ ಕರಪತ್ರ ಬಿಡುಗಡೆ ಮಾಡಿ ಅವರು ಮಾನತಾಡಿದರು. ಸರ್ಕಾರಿ ಶಾಲೆಯ ಭೂಮಿಯನ್ನು ಕಬಳಿಸಿರುವ ಭೂ ಹಗರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿಲ್ಲ. ಇದು ಸರ್ಕಾರಿ ಶಾಲೆಗಳ ಸಂರಕ್ಷಣೆ ಬಗ್ಗೆ ಜಿಲ್ಲಾಡಳಿತಕ್ಕೆ ಇಚ್ಛಾಶಕ್ತಿ ಇಲ್ಲ ಎಂಬುದನ್ನು ಸೂಚಿಸುತ್ತದೆ” ಎಂದು ಹೇಳಿದ್ದಾರೆ.

ಸರ್ಕಾರಿ ಶಾಲೆಯ ಉಳಿವಿಗಾಗಿ ನಡೆಯುವ ಹೋರಾಟವನ್ನು ನಾಗರಿಕ ಸಮಾಜ ಬೆಂಬಲಿಸಬೇಕೆಂದು ಕರೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕರಪತ್ರ ಬಿಡುಗಡೆ ವೇಳೆ, ಮಾಜಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಾರಿಜ ಅಧ್ಯಕ್ಷತೆ ವಹಿಸಿದ್ದರು ಹೋರಾಟ ಸಮಿತಿ ಪ್ರಮುಖರಾದ ಶರೀಫ್, ಫಾರೂಕ್ ಜನತಾಕಾಲನಿ, ಶ್ರೀನಾಥ್ ಕುಲಾಲ್, ಬಿಕೆ ಮಕ್ಸೂದ್, ಆಸೀಫ್, ಅಶ್ರಫ್, ಶಬನಾ, ಸಿಸಿಲಿ ಡಿಸೋಜಾ, ಶೈಫರ್ ಆಲಿ, ಅಸ್ಕಾಫ್, ಐ ಮೊಹಮ್ಮದ್, ಸಾದಿಕ್ ಕಿಲ್ಪಾಡಿ, ಹನೀಫ್ ಇಡ್ಯಾ, ಮುಂತಾದವರು ಉಪಸ್ಥಿತರಿದ್ದರು

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ | ಏ. 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಏ.19 ರಿಂದ ದೇಶದಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಿದೆ. ಕರ್ನಾಟಕದಲ್ಲಿ ಎರಡು...

ಬೆಂಗಳೂರು | ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಒಂದೆಡೆ ಲೋಕಸಭಾ ಚುನಾವಣೆಯ ಕಾವು ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ...

ಬೆಂ.ಗ್ರಾಮಾಂತರ | ಕಾರ್ಮಿಕರ ಸುಲಿಗೆ ಮಾಡುತ್ತಿದ್ದ ಮೂವರ ಬಂಧನ

ರಾತ್ರಿ ವೇಳೆ ಕಾರ್ಮಿಕರನ್ನು ಬೆದರಿಸಿ ಹಣ ಮತ್ತು ಮೊಬೈಲ್‌ ಫೋನ್‌ ಸುಲಿಗೆ...

ವಿಜಯಪುರ | ಉಪಹಾರ ಸೇವಿಸುತ್ತಾ ಜನರೊಂದಿಗೆ ಬೆರೆತು ಚರ್ಚಿಸಿದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ

ತಮ್ಮ ಸರಳತೆ, ಸಜ್ಜನಿಕೆಯಿಂದಲೇ ಮತದಾರರ ಮನಸ್ಸು ಗೆಲ್ಲುತ್ತಿರುವ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ...