ಗುಜರಾತ್ ಚುನಾವಣೆ | ಬಿಜೆಪಿ ₹209 ಕೋಟಿ, ಕಾಂಗ್ರೆಸ್ ₹103 ಕೋಟಿ ಖರ್ಚು ಮಾಡಿವೆ

Date:

2022ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 209 ಕೋಟಿ ರೂಪಾಯಿ ಖರ್ಚು ಮಾಡಿದೆ. ಈ ಮೊತ್ತವು ಕಾಂಗ್ರೆಸ್ ಖರ್ಚು ಮಾಡಿದ್ದಕ್ಕಿಂತ ದುಪ್ಪಟ್ಟಿದೆ ಎಂದು ಚುನಾವಣಾ ಆಯೋಗಕ್ಕೆ ಪಕ್ಷಗಳು ಸಲ್ಲಿಸಿದ ವೆಚ್ಚದ ವರದಿಯಲ್ಲಿ ತಿಳಿದುಬಂದಿದೆ.

ಚುನಾವಣಾ ಆಯೋಗವು ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ ಎಲ್ಲ ಪಕ್ಷಗಳ ಚುನಾವಣಾ ವೆಚ್ಚದ ಮಾಹಿತಿಯನ್ನು ಪ್ರಕಟಿಸಿದೆ. ಬಿಜೆಪಿಯು ಒಟ್ಟು 209.97 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿರುವುದಾಗಿ ಹೇಳಿದೆ. ಅದರಲ್ಲಿ 163.77 ಕೋಟಿ ರೂಪಾಯಿಗಳನ್ನು ‘ಪಕ್ಷದ ಪ್ರಚಾರ’ಕ್ಕಾಗಿಯೇ ವೆಚ್ಚ ಮಾಡಿದ್ದಾಗಿ ಹೇಳಿಕೊಂಡಿದೆ.

ಪಕ್ಷವು ತನ್ನ ಅಭ್ಯರ್ಥಿಗಳ ಅಪರಾಧಗಳಿಗೆ ಸಂಬಂಧಿಸಿದ ಪೂರ್ವಾಪರಗಳ ಪ್ರಚಾರಕ್ಕಾಗಿ 5.15 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. (ಅಭ್ಯರ್ಥಿಗಳ ವಿರುದ್ಧದ ಪ್ರಕರಣಗಳನ್ನು ಪ್ರಚಾರ ಪಡಿಸುವುದು ಸುಪ್ರೀಂ ಕೋರ್ಟ್ ಆದೇಶಗಳು ಮತ್ತು ಇಸಿ ನಿರ್ದೇಶನಗಳ ಪ್ರಕಾರ ಕಡ್ಡಾಯವಾಗಿದೆ)

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನು ಕಾಂಗ್ರೆಸ್‌ 103.26 ಕೋಟಿ ರೂಪಾಯಿಯನ್ನು ಚುನಾವಣೆಗೆ ಖರ್ಚು ಮಾಡಿರುವುದಾಗಿ ಹೇಳಿಕೊಂಡಿದೆ. ಅಲ್ಲದೆ, ರಾಜ್ಯದಲ್ಲಿ ಮೂರನೇ ಪಕ್ಷವಾಗಿ ಹೊರಹೊಮ್ಮಿದ್ದ ಎಎಪಿಯು 33.8 ಕೋಟಿ ರೂಪಾಯಿಯನ್ನು ಖರ್ಚು ಮಾಡಿದ್ದಾಗಿ ಹೇಳಿದೆ.

ಗುಜರಾತ್ ವಿಧಾನಸಭೆಯ ಒಟ್ಟು 182 ಸ್ಥಾನಗಳ ಪೈಕಿ ಬಿಜೆಪಿ 156 ಸ್ಥಾನಗಳನ್ನು ಗೆದ್ದು, ಬಾರೀ ಬಹುಮತದ ಸರ್ಕಾರ ರಚಿಸಿದೆ. ಉಳಿದಂತೆ ಕಾಂಗ್ರೆಸ್‌ ಕೇವಲ17 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಎಎಪಿ 5 ಮತ್ತು ಇತರರು 4 ಸ್ಥಾನಗಳಲ್ಲಿ ಗೆದ್ದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ,...

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ.ಕೆ. ಸುರೇಶ್

"ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ...

ಸಿಜೆಐಗೆ ವಕೀಲರ ಪತ್ರ: ಪ್ರಧಾನಿಯದು ಬರೀ ʼಬೂಟಾಟಿಕೆʼ ಎಂದು ಕಾಂಗ್ರೆಸ್ ತಿರುಗೇಟು

ಪಟ್ಟಭದ್ರ ಹಿತಾಸಕ್ತಿ ಗುಂಪಿನ ವಿರುದ್ಧ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿಗೆ ಬರೆದ...