ಮುಂಬೈ ಗೆದ್ದರೂ ನಾಯಕ ಹಾರ್ದಿಕ್ ಪಾಂಡ್ಯಗೆ ಬಿಸಿಸಿಐನಿಂದ ಭಾರಿ ದಂಡ

Date:

ನಿನ್ನೆ ಮುಲ್ಲನ್‌ಪುರ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024ನೇ ಆವೃತ್ತಿಯ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್‌ ಸೂಪರ್‌ ಕಿಂಗ್ಸ್‌ ಪಡೆಯನ್ನು 9 ರನ್‌ಗಳ ಅಂತರದಿಂದ ರೋಚಕವಾಗಿ ಸೋಲಿಸಿತು. ಈ ನಡುವೆ ಮುಂಬೈ ತಂಡ 20 ಓವರ್‌ಗಳನ್ನು ನಿಗದಿತ ಸಮಯದೊಳಗೆ ಮಾಡದ ಕಾರಣ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಗೆ 12 ಲಕ್ಷ ರೂ ದಂಡ ವಿಧಿಸಿದೆ.

ಮುಲ್ಲನ್‌ಪುರ್‌ ಕ್ರೀಡಾಂಗಣದಲ್ಲಿ ಪಂಜಾಬ್‌ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕರಾದ ಹಾರ್ದಿಕ್ ಪಾಂಡ್ಯ ಪಂದ್ಯದ ಓವರ್‌ ಸರಾಸರಿ ರೇಟ್‌ಅನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸದ ಕಾರಣ ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಿನ್ನೆ ಪಂಜಾಬ್‌ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 9 ರನ್‌ಗಳ ಅಂತರದಿಂದ ಗೆಲುವು ಪಡೆಯಿತು. ಮುಂಬೈ ನೀಡಿದ 193 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ 183 ರನ್‌ಗಳಾಗುವಷ್ಟರಲ್ಲೆ ತನ್ನ ಎಲ್ಲ ವಿಕೆಟ್‌ಗಳನ್ನು ಕಳೆದುಕೊಂಡು ಸೋಲು ಒಪ್ಪಿಕೊಂಡಿತು.

ಪಂಜಾಬ್‌ ಪರ ಅಶುತೋಷ್ ಶರ್ಮಾ(61) ಹಾಗೂ ಶಶಾಂಕ್‌ ಸಿಂಗ್‌ (41) ಉತ್ತಮ ಬ್ಯಾಟಿಂಗ್‌ ನಡೆಸಿದರೂ ಬೂಮ್ರಾ ಹಾಗೂ ಗೆರಾಲ್ಡ್‌ ಕೋಟ್ಜೆ ಅವರ ಮಾರಕ ಬೌಲಿಂಗ್‌ ದಾಳಿಗೆ ಉಳಿದ ಬ್ಯಾಟರ್‌ಗಳು ರನ್‌ ಗಳಿಸುವಲ್ಲಿ ವಿಫಲರಾದರು.

ಮುಂಬೈ ಇಂಡಿಯನ್ಸ್‌ ಪರ ಸೂರ್ಯ ಕುಮಾರ್ ಯಾದವ್ (78), ರೋಹಿತ್ ಶರ್ಮಾ (36) ಹಾಗೂ ತಿಲಕ್‌ ವರ್ಮಾ (34) ರನ್‌ ಗಳಿಸಿ ತಂಡವು 190 ದಾಟಲು ನೆರವಾದರು.

ಇದರೊಂದಿಗೆ ಈ ಟೂರ್ನಿಯಲ್ಲಿ ಮೂರನೇ ಗೆಲುವು ದಾಖಲಿಸಿದೆ. ಪಂಜಾಬ್ ಕೇವಲ 2 ಪಂದ್ಯಗಳನ್ನು ಮಾತ್ರ ಜಯಿಸಿದ್ದು, 5 ಪಂದ್ಯಗಳಲ್ಲಿ ಸೋತಿದೆ. ಇಂದು ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಲಖನೌ ಸೂಪರ್‌ ಜೈಂಟ್ಸ್‌ ತಂಡಗಳ ನಡುವೆ ಆಟ ನೆಡೆಯಲಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...

ಐಪಿಎಲ್ | ‘ಪವರ್ ಪ್ಲೇ’ಯಲ್ಲಿ 125 ರನ್ ಚಚ್ಚಿದ ಹೈದರಾಬಾದ್: T20 ಇತಿಹಾಸದಲ್ಲೇ ಹೊಸ ದಾಖಲೆ

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌)ನ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿಕೊಂಡ ವಿನೇಶ್ ಫೋಗಟ್

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದ ಬಿಜೆಪಿ ಸಂಸದ...