ಹಾಸನ | ಹಾಸನಾಂಬ ದೇವಾಲಯ; 9 ದಿನದಲ್ಲಿ 5.5 ಕೋಟಿ ರೂ. ಸಂಗ್ರಹ

Date:

ವರ್ಷದಲ್ಲಿ ಒಮ್ಮೆ ಮಾತ್ರವೇ ತೆರೆಯುವ ಹಾಸನಾಂಬ ದೇವಾಲಯವನ್ನು ದೀಪಾವಳಿ ಸಮಯದಲ್ಲಿ ತೆರೆಯಲಾಗಿದೆ. 9 ದಿನಗಳಿಂದ ತೆರೆದಿರುವ ದೇವಾಲಯದಲ್ಲಿ ಬರೋಬ್ಬರಿ 5.52 ಕೋಟಿ ರೂ. ಹಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.

ಹಣ ಸಂಗ್ರಹದ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ. ದೇವಸ್ಥಾನಕ್ಕೆ ಭೇಟಿ ನೀರುವವರಿಗೆ ವಿಶೇಷ ಪಾಸ್‌ ವ್ಯವಸ್ಥೆಯಿತ್ತು. 1,000 ರೂ. ಮತ್ತು 400 ರೂ.ಗಳ ಪಾಸ್‌ಗಳನ್ನು ವಿತರಿಸಲಾಗುತ್ತಿತ್ತು. ಪಾಸ್‌ ಮತ್ತು ಲಡ್ಡು ಮಾರಾಟ ಹಾಗೂ ಹುಂಡಿಯಿಂದ ಒಂಬತ್ತು ದಿನಗಳಲ್ಲಿ 5.52 ಕೋಟಿ ರೂ. ಸಂಗ್ರಹವಾಗಿದೆ ಎಂದು ಹೇಳಿದೆ.

ಮಂಗಳವಾರವೂ ಸಂಜೆ ದೇವಾಲಯದ ಬಾಗಿಲು ಮುಚ್ಚುವ ಹಿನ್ನೆಲೆಯಲ್ಲಿ ಇಂದು ಹೆಚ್ಚಿನ ಭಕ್ತರು ಭೇಟಿ ನೀಡುವ ಸಾಧ್ಯತೆ ಇದೆ. ಹೀಗಾಗಿ, ಸಂಜೆಯ ವೇಳೆಗೆ ಸಂಗ್ರಹದ ಒಟ್ಟು ಮೊತ್ತ ಸುಮಾರು 6.50 ಕೋಟಿ ರೂ. ದಾಟುವ ಸಾಧ್ಯತೆ ಇದೆ ಎಂದು ಮಂಡಳಿ ಅಂದಾಜಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದೇವಾಲಯವು ವರ್ಷದಲ್ಲಿ ಒಮ್ಮೆ ಮಾತ್ರ 10 ದಿನಗಳ ಕಾಲ ದೇವಾಲಯ ತೆರೆದಿರುತ್ತದೆ. ಹೀಗಾಗಿ, ಭಕ್ತರು ನೂಕುನುಗ್ಗಲಿನಲ್ಲಿ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಈ ಬಾರಿ 1,000 ರೂ. ಮೊತ್ತದ ವಿಶೇಷ ಟಿಕೆಟ್‌ಅನ್ನು 28,052 ಮಂದಿ ಖರೀಸಿದ್ದಾರೆ. 400 ರೂ. ಮೊತ್ತದ ಟಿಕೆಟ್‌ಅನ್ನು 71,885 ಮಂದಿ ಖರೀದಿಸಿದ್ದಾರೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ಮಾರುತಿ ಗೌಡ ತಿಳಿಸಿದ್ದಾರೆ.

ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಭಕ್ತರಿಗೆ ವಿದ್ಯುತ್‌ ಶಾಕ್ ತಗುಲಿತ್ತು. ಸುಮಾರು 17 ಮಂದಿ ಗಾಯಗೊಂಡಿದ್ದರು. ಜನರು ಭಯದಿಂದ ಚೆಲ್ಲಾಪಿಲ್ಲಿಯಾಗಿ ಓಡಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಸಂವಿಧಾನ, ಪ್ರಜಾಪ್ರಭುತ್ವವನ್ನು ನಾಶ ಮಾಡಲು ಹೊರಟಿರುವ ಮೋದಿ: ರಾಹುಲ್ ಗಾಂಧಿ

ಇತಿಹಾಸದಲ್ಲಿಯೇ ಮೊದಲ ಬಾರಿಗೆ ಭಾರತದ ಸಂವಿಧಾನ ಹಾಗೂ ಪ್ರಜಾಭುತ್ವವನ್ನು ನಾಶ ಮಾಡಲು...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...