ಹಾಸನ ಜಿಲ್ಲೆ | ಜೆಡಿಎಸ್ ಭದ್ರಕೋಟೆಯ ಒಳ ನುಗ್ಗಿದ ‘ಕೈ-ಕಮಲ’

Date:

  • ಭಾರೀ ಅಂತರದಲ್ಲಿ ಗೆಲ್ಲುವ ಸವಾಲು ಹಾಕಿದ್ದ ಪ್ರೀತಂಗೆ ಮುಖಭಂಗ
  • ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಸ್ವಕ್ಷೇತ್ರದಲ್ಲಿ ಪ್ರಯಾಸದ ಗೆಲುವು

ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು (ಮೇ 13) ಹೊರಬಿದ್ದಿದೆ. ಜೆಡಿಎಸ್‌ ಭದ್ರಕೋಟೆ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಜೆಡಿಎಸ್, ಎರಡು ಬಿಜೆಪಿ ಹಾಗೂ ಒಬ್ಬರು ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಶ್ರವಣಬೆಳಗೊಳ: ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್ ಬಾಲಕೃಷ್ಣ ಮೂರನೇ ಗೆಲುವು ಕಂಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಎಂ.ಎ ಗೋಪಾಲಸ್ವಾಮಿ ಪ್ರಬಲ ಸ್ಪರ್ಧೆ ನೀಡಿದರೂ, ಗೆಲ್ಲಲಾಗಿಲ್ಲ. ಬಿಜೆಪಿಯ ಚಿದಾನಂದ್‌ ಠೇವಣಿ ಕಳೆದುಕೊಂಡಿದ್ದಾರೆ.

ಜೆಡಿಎಸ್‌ ಅಭ್ಯರ್ಥಿ ಸಿ.ಎನ್‌ ಬಾಲಕೃಷ್ಣ 85,668 ಮತಗಳನ್ನು ಪಡೆದಿದ್ದು, ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ ಎ ಗೋಪಾಲಸ್ವಾಮಿ 79,023 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಚಿದಾನಂದ್‌ 5,648 ಮತಗಳನ್ನು ಪಡೆದಿದ್ದಾರೆ. ಬಾಲಕೃಷ್ಣ 6,645 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅರಸೀಕೆರೆ: ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ ಶಿವಲಿಂಗೇಗೌಡ ಮತ್ತು ಜೆಡಿಎಸ್‌ ಅಭ್ಯರ್ಥಿ ಎನ್‌.ಆರ್‌ ಸಂತೋಷ್‌ ಪಕ್ಷಾಂತರ ಅಭ್ಯರ್ಥಿಗಳಾಗಿದ್ದು, ಜೆಡಿಎಸ್‌-ಕಾಂಗ್ರೆಸ್‌ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿಯಿಂದ ಜಿವಿಟಿ ಬಸವರಾಜ್ ಕೂಡ ಸ್ಪರ್ಧೆ ಮಾಡಿದ್ದರು.

ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಂ ಶಿವಲಿಂಗೇಗೌಡ 97,099 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿ ಮೈತ್ರಿ ಸರ್ಕಾರ ಉರುಳಿಸಲು ಬಿಜೆಪಿಗೆ ನೆರವಾಗಿದ್ದ ಎನ್‌.ಆರ್‌ ಸಂತೋಷ್‌ ಈ ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಿ 77,006 ಮತಗಳನ್ನು ಸೋಲುಂಡಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಜಿವಿಟಿ ಬಸವರಾಜ್‌ 6,456 ಮತಗಳನ್ನು ಪಡೆದಿದ್ದಾರೆ. ಶಿವಲಿಂಗೇಗೌಡ 20,093 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬೇಲೂರು: ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಚ್.ಕೆ ಸುರೇಶ್‌, ಕಾಂಗ್ರೆಸ್‌ ಅಭ್ಯರ್ಥಿ ಬಿ ಶಿವರಾಂ ಮತ್ತು ಜೆಡಿಎಸ್‌ ಅಭ್ಯರ್ಥಿ ಕೆ.ಎಸ್‌ ಲಿಂಗೇಶ್‌ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ, ಬಿಜೆಪಿ ಅಭ್ಯರ್ಥಿ ಎಚ್‌.ಕೆ ಸುರೇಶ್‌  63,571 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ ಶಿವರಾಂ 55,835  ಮತಗಳನ್ನು ಪಡೆದಿದ್ದರೆ, ಜೆಡಿಎಸ್‌ ಅಭ್ಯರ್ಥಿ  ಎಚ್‌.ಕೆ ಲಿಂಗೇಶ್‌ 38,893 ಮತಗಳನ್ನು ಪಡೆದಿದ್ದಾರೆ. ಸುರೇಶ್ 7,736  ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಹಾಸನ: ಹೈ ವೋಲ್ಟೇಜ್‌ ವಿಧಾನಸಭಾ ಕ್ಷೇತ್ರ ಹಾಸನದಲ್ಲಿ ಜೆಡಿಎಸ್-ಬಿಜೆಪಿ ನಡುವೆ ಜಿದ್ದಾಜಿದ್ದಿನ ಪ್ರಬಲ ಪೈಪೋಟಿ ಏರ್ಪಟ್ಟಿತ್ತು. ಕಾಂಗ್ರೆಸ್‌ ಮತ್ತು ಆಮ್‌ ಆದ್ಮಿ ಪಕ್ಷ ಕೂಡ ಕಣಕ್ಕಿಳಿದಿದ್ದವು. ಬಿಜೆಪಿ ಅಭ್ಯರ್ಥಿ, ಶಾಸಕ ಪ್ರೀತಂ ಗೌಡರನ್ನು ಮಣಿಸಿ, ಜೆಡಿಎಸ್‌ನ ಸ್ವರೂಪ್‌ ಪ್ರಕಾಶ್ ಭರ್ಜರಿ ಗೆಲುವು ಸಾಧಿಸಿದ್ದರೆ.

ಸ್ವರೂಪ್ ಪ್ರಕಾಶ್‌ 85,176 ಮತಗಳನ್ನು ಪಡೆದರೆ, ಪ್ರೀತಂ ಗೌಡ 77,322 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಬನವಾಸೆ ರಂಗಸ್ವಾಮಿ 4,305 ಮತಗಳನ್ನು ಪಡೆದರೆ, ಎಎಪಿ ಅಭ್ಯರ್ಥಿ ಅಗಿಲೆ ಯೋಗೇಶ್ 1,301 ಮತಗಳನ್ನು ಪಡೆದಿದ್ದಾರೆ. ಸ್ವರೂಪ್ 7,854 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಹೊಳೆನರಸೀಪುರ: ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ನಡುವೆ ನೇರ ಪೈಪೋಟಿ ನಡೆದಿತ್ತು. ಕ್ಷೇತ್ರದ ಮತದಾರರು ಕೊಂಚ ಬದಲಾವಣೆ ಬಯಸಿದ್ದು, ಹೊಸ ಆಡಳಿತಕ್ಕೆ ಮಣೆ ಹಾಕಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಈ ನಡುವೆ ಕ್ಷೇತ್ರದಲ್ಲಿ ಬಿಜೆಪಿಯೂ ಕಣಕ್ಕಿಳಿದಿತ್ತು.

ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ ರೇವಣ್ಣ ಮತ್ತು ಕಾಂಗ್ರೆಸ್‌ನ ಯುವ ಅಭ್ಯರ್ಥಿ ಶ್ರೇಯಸ್‌ ಎಂ ಪಟೇಲ್‌ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿತ್ತು. ರೇವಣ್ಣ 86,401 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಶ್ರೇಯಸ್‌ ಎಂ ಪಟೇಲ್‌ 83,747 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ 4,666 ಮತಗಳನ್ನು ಪಡೆದಿದ್ದಾರೆ.

ಜೆಡಿಎಸ್‌-ಕಾಂಗ್ರೆಸ್‌ ನಡುವಿನ ಪ್ರಬಲ ಪೈಪೋಟಿಯಲ್ಲಿ ಎಚ್.ಡಿ ರೇವಣ್ಣ ತನ್ನ ತವರಿನಲ್ಲಿ ಕೇವಲ 2,654 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಹುಷಃ ಈ ಬಾರಿಯ ಮತಗಳು ರೇವಣ್ಣ ಅವರಿಗೆ ಮುಂದಿನ ಚುನಾವಣೆಯ ಎಚ್ಚರಿಕೆ ನೀಡಿವೆ.

 ಅರಕಲಗೂಡು: ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಶ್ರೀಧರ್‌ ಗೌಡ ಅವರಿಗೆ ಕೈ ಟಿಕೆಟ್‌ ನೀಡಿತ್ತು. ಎಂ.ಟಿ ಕೃಷ್ಣೇಗೌಡ ಬಂಡಾಯವೆದ್ದು, ಪಕ್ಷೇತ್ರರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಿಜೆಪಿ ಟಿಕೆಟ್‌ ಸಿಗದ ಕಾರಣ ಎ ಮಂಜು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಯೋಗಾ ರಮೇಶ್‌ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿಗಳ ನಡುವಿನ ಪೈಪೋಟಿಯಿಂದ ಮತಗಳು ಚದುರಿದ ಕಾರಣ ಜೆಡಿಎಸ್‌ಗೆ ಮುನ್ನಡೆಯಾಯಿತು ಎನ್ನಲಾಗಿದೆ. ಜೆಡಿಎಸ್‌ ಅಭ್ಯರ್ಥಿ ಎ ಮಂಜು 73,605 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಎಂ.ಟಿ ಕೃಷ್ಣೇಗೌಡ ಅವರು 54,160 ಮತಗಳನ್ನು ಪಡೆದರೆ, ಕಾಂಗ್ರೆಸ್‌ ಅಭ್ಯರ್ಥಿ ಶ್ರೀಧರ್ ಗೌಡ 33,084 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಯೋಗಾರಮೇಶ್ 18,477 ಮತಗಳನ್ನು ಪಡೆದಿದ್ದಾರೆ. ಎ ಮಂಜು 19,445  ಮತಗಳ ಅಂತರದಲ್ಲಿ ಸುಲಭವಾಗಿ ಜಯಗಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿಯವರ ಭ್ರಷ್ಟಾಚಾರಕ್ಕೆ ಜನರಿಂದ ಸರಿಯಾದ ಪಾಠ: ಸಿದ್ದರಾಮಯ್ಯ

ಸಕಲೇಶಪುರ: ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಮೂರು ಬಾರಿ ಗೆಲುವು ಸಾಧಿಸಿದ್ದ ಜೆಡಿಎಸ್‌ ಈ ಬಾರಿ ಹಿನ್ನಡೆ ಕಂಡಿದೆ. ಸಕಲೇಶಪುರ ಮೀಸಲು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಜೆಡಿಎಸ್‌ ಅಭ್ಯರ್ಥಿ ಎಚ್‌ ಕೆ ಕುಮಾರಸ್ವಾಮಿ, ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು, ಕಾಂಗ್ರೆಸ್‌ನಿಂದ ಹೊಸ ಅಭ್ಯರ್ಥಿ ಮುರಳಿ ಮೋಹನ್‌ ಕಣದಲ್ಲಿದ್ದರು.

ಬಿಜೆಪಿ ಅಭ್ಯರ್ಥಿ ಸಿಮೆಂಟ್‌ ಮಂಜು 58,604 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಹೆಚ್.ಕೆ ಕುಮಾರಸ್ವಾಮಿ 56,548 ಮತಗಳನ್ನು ಪಡೆದರೆ, ಕಾಂಗ್ರೆಸ್‌ ಅಭ್ಯರ್ಥಿ ಮುರಳಿ ಮೋಹನ್‌ 42,811 ಮತಗಳನ್ನು ಪಡೆದಿದ್ದಾರೆ. ಸಿಮೆಂಟ್ ಮಂಜು 2,056 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಯಡಿಯೂರಪ್ಪ ಕಾರಣದಿಂದ ನನ್ನ ಮಗನಿಗೆ ಟಿಕೆಟ್ ತಪ್ಪಿದೆ: ಶಾಸಕ ಚಂದ್ರಪ್ಪ

ರಘು ಚಂದನ್‌ಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ...

ಧಾರವಾಡ | ‘ದಿಂಗಾಲೇಶ್ವರ ಸ್ವಾಮೀಜಿ ನೀಡಿದ ಹೇಳಿಕೆಗೂ, ಮುರುಘಾಮಠಕ್ಕೂ ಯಾವುದೇ ಸಂಬಂಧವಿಲ್ಲ’

ಮಾರ್ಚ್ 27ರಂದು ಹುಬ್ಬಳ್ಳಿ ಮೂರುಸಾವಿರ ಮಠದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಬೆಂಗಳೂರು | ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ: ಜಲಮಂಡಳಿ ಅಧ್ಯಕ್ಷ

“ಬೆಂಗಳೂರಿನ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ...