ಆಸ್ತಿ ಬರೆಸಿಕೊಂಡ ಆರೋಪದ ಹಿಂದೆ ರಾಜಕೀಯ ಕೈವಾಡ: ಮಾಜಿ ಸಚಿವ ಹೆಚ್​ಡಿ ರೇವಣ್ಣ

Date:

ಮಾಜಿ ಸಚಿವ ಎಚ್‌.ಡಿ. ರೇವಣ್ಣ‌ ಪತ್ನಿ ಭವಾನಿ ಹಾಗೂ ಮಗ, ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಗಂಭೀರ ಆರೋಪವೊಂದು ಕೆಲ ದಿನಗಳ ಹಿಂದೆ ಕೇಳಿಬಂದಿತ್ತು. 14 ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಅವರ ಜತೆಗೆ ಕಾರು ಚಾಲಕರಾಗಿದ್ದ ಕಾರ್ತಿಕ್‌ ಎಂಬುವವರಿಗೆ ಸೇರಿದ್ದ 13 ಎಕರೆ ಜಾಗವನ್ನು ರೇವಣ್ಣ ಕುಟುಂಬ ನುಂಗಿ ಹಾಕಿದೆ ಎಂದು ಆರೋಪಿಸಲಾಗಿದೆ.

ತನಗೆ ನ್ಯಾಯ ನೀಡುವಂತೆ ಚಾಲಕ ಕಾರ್ತಿಕ್ ದಕ್ಷಿಣ ವಲಯ ಐಜಿಪಿಗೆ ದೂರು ನೀಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ, “ಆಸ್ತಿ ಬರೆಸಿಕೊಂಡ ಆರೋಪದ ಹಿಂದೆ ರಾಜಕೀಯ ಕೈವಾಡವಿದೆ” ಎಂದು ತಿಳಿಸಿದ್ದಾರೆ.

ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಅವರು, “ಲೋಕಸಭಾ ಚುನಾವಣೆ ಹತ್ತಿರ ಇರುವುದರಿಂದ ಈ ರೀತಿ ಆರೋಪ ಮಾಡಲಾಗುತ್ತಿದೆ. ಇದರ ಹಿಂದೆ ರಾಜಕೀಯ ಇದೆ. ಘಟನೆ ನಡೆದು ಎಷ್ಟು ದಿನ ಆಗಿದೆ, ಈಗ ಯಾಕೆ ಆರೋಪ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ಇನ್ನು ಮೂರು ತಿಂಗಳು ಮಾತ್ರ ಇದೆ. ಇಂತಹ ಸಮಯದಲ್ಲಿ ಯಾಕೆ ಆರೋಪ ಬರುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಭವಾನಿ ರೇವಣ್ಣ ಹೊಡೆದಿದ್ದರಿಂದ ಗರ್ಭಪಾತ ಆಗಿದೆ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಅವರು, “ಭವಾನಿ ಹಲ್ಲೆ ಮಾಡುತ್ತಾರೆ ಎಂದರೆ ಏನು ಹೇಳೋದು. ಭವಾನಿ ಯಾರಿಗೆ ಸಹಾಯ ಮಾಡಿದ್ದಾರೆ ಅನ್ನುವುದು ದೇವರಿಗೇ ಗೊತ್ತು. ಆ ಹುಡುಗಿಯನ್ನ ಮನೆಯಲ್ಲಿ ಇಟ್ಟುಕೊಂಡು ಡಿಗ್ರಿ ಮಾಡಿಸಿದ್ದು ನಾವು. ನಮ್ಮ ಮನೆಯಲ್ಲಿ ಆಕೆಯನ್ನು ಕೆಲಸಕ್ಕೆ ಇಟ್ಟುಕೊಂಡಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಅಪಘಾತಕ್ಕೀಡಾದ ಕೋಳಿ ಸಾಗಾಟದ ವಾಹನ: ಚಾಲಕನ ರಕ್ಷಣೆ ಮಾಡುವ ಬದಲು ಮುಗಿಬಿದ್ದು ಕೋಳಿ ಕದ್ದೊಯ್ದ ಗ್ರಾಮಸ್ಥರು!

“ಚುನಾವಣೆ ಸಂದರ್ಭದಲ್ಲಿ ಇನ್ನೂ ಕೆಲವರು ಆರೋಪ ಮಾಡುತ್ತಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಯಾವ್ಯಾವ ಇಲಾಖೆಗೆ ಪತ್ರ ಬರೆದಿದ್ದಾರೆ ಎಂಬುದು ಎಲ್ಲವೂ ಗೊತ್ತು. ಪ್ರಜ್ವಲ್​ ಆಗಿರುವುದಕ್ಕೆ ಎಲ್ಲವನ್ನೂ ತಡೆದಿದ್ದಾನೆ” ಎಂದು ರೇವಣ್ಣ ಹೇಳಿಕೆ ನೀಡಿದ್ದಾರೆ.

ಇದೇ ವೇಳೆ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರವಾಗಿ ಕಾಂಗ್ರೆಸ್ ಆರೋಪಗಳಿಗೆ ಉತ್ತರಿಸಿದ ರೇವಣ್ಣ, “ಕಾಂಗ್ರೆಸ್ಸಿಗರು ಬೇಕಾದಾಗ ದೇವೇಗೌಡರ ಮನೆಯ ಬಳಿಗೆ ಬರುತ್ತಾರೆ. ಅಧಿಕಾರಕ್ಕೆ ನಮ್ಮನ್ನ ಬಂದಾಗ ದೂರ ಇಡುತ್ತಾರೆ. ಈ ಬಗ್ಗೆ ಅಂದೇ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದರು. ಕಾಂಗ್ರೆಸ್​ ನಂಬಬೇಡಿ ಎಂದು. ಕಾಂಗ್ರೆಸ್ ಜೊತೆ ಮೈತ್ರಿ ಬಿಟ್ಟು, ಬನ್ನಿ ನಾವು ಬೆಂಬಲಿಸುತ್ತೇವೆ ಎಂದು ಅಂದೇ ಕುಮಾರಸ್ವಾಮಿಯವರಿಗೆ ಮೋದಿಯವರು ಹೇಳಿದ್ದರು” ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...