ಬೀದರ್‌ | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ. ಧ್ಯಾನೇಶ್ವರ ನೀರಗುಡೆ ಅಧಿಕಾರ ಸ್ವೀಕಾರ

Date:

ಬೀದರ ಜಿಲ್ಲಾ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾಗಿ ಡಾ. ಧ್ಯಾನೇಶ್ವರ ನೀರಗುಡೆ ಅವರು ಶನಿವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. “ಆರೋಗ್ಯ ಇಲಖೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಜಿಲ್ಲೆಯ ಸಮಗ್ರ ಆರೋಗ್ಯ ಸೇವೆಗಳ ಅಭಿವೃದ್ಧಿಗೆ ಹಾಗೂ ಸುಗಮ ಆಡಳಿತಕ್ಕಾಗಿ ಇಲಾಖೆಯ ಎಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಹಕಾರ ನೀಡಬೇಕು” ಎಂದು ಕೋರಿದರು.

ಈ ಹಿಂದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಡಾ. ರತಿಕಾಂತ ಸ್ವಾಮಿ ಅವರನ್ನು ಔರಾದನ ತಾಲೂಕಿನ ಸಂತಪೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿಯಿರುವ ಮಕ್ಕಳ ತಜ್ಞರ ಹುದ್ದೆಗೆ ವರ್ಗಾಯಿಸಲಾಗಿದೆ. ಸದರಿ ಹುದ್ದೆಗೆ ಭಾಲ್ಕಿ ತಾಲೂಕು ಆರೋಗ್ಯಾಧಿಕಾರಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಧ್ಯಾನೇಶ್ವರ ನೀರಗುಡೆ ಅವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನೇಮಿಸಿ ವರ್ಗಾಯಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾರ್ಯಕ್ರಮದಲ್ಲಿ ಅನುಷ್ಠಾನಾಧಿಕಾರಿಗಳಾದ ಡಾ: ರಾಜಶೇಖರ ಪಾಟೀಲ , ಡಾ: ಕಿರಣ ಪಾಟೀಲ, ಡಾ: ಶರಣಯ್ಯಾ ಸ್ವಾಮಿ, ಡಾ: ಶೆಂಕ್ರೆಪ್ಪಾ ಬೊಮ್ಮಾ , ಡಾ:ದಿಲೀಪ ಡೊಂಗ್ರೆ, ಡಾ:ವಿ.ಜಿ. ರೆಡ್ಡಿ , ಡಾ: ನಿತೀನ ಬಿರಾದಾರ, ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ: ಶಿವಕುಮಾರ ಸಿದ್ದೇಶ್ವರ, ಡಾ: ಸಂಗಾರೆಡ್ಡಿ , ಡಾ:ಅಶೋಕ ಮೈಲಾರೆ, ಡಾ: ಗಾಯತ್ರಿ, ಮತ್ತು ವೈದ್ಯಾಧಿಕಾರಿಗಳು ಡಾ: ಅನೀಲ ರಾಯಪಳ್ಳಿ , ಡಾ: ರವಿ ಕಲಶೆಟ್ಟಿ,
ಡಾ: ಶರಣಪ್ಪದ ಮುಡುಬಿ, ಡಾ:ಭಗವಾನ, ಡಾ:ಗುರುರಾಜ ಗೌರಿ, ಮತ್ತು ಆರೋಗ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳಾದ ರಾಜುಕುಮಾರ ಬಿ. , ಎಂ.ಎ. ಸತ್ತಾರ, ಮೌನದಾಸ, ಪ್ರಶಾಂತ, ಕಾಶಿನಾತ ಡ್ಯಾಮ, ಉಮೇಶ ಬಿರಾದಾರ, ಜಾವೇದ್ ಕಲ್ಯಾಣಕರ , ಮಲ್ಲಿಕಾರ್ಜುನ ಗುಡ್ಡೆ, ವೀರಶೆಟ್ಟಿ, ಚನ್ನಶೆಟ್ಟಿ, ಶ್ಯಾಮರಾವ ಉಮೇಶ ಪ್ರದಸ, ಶಿವರಾಜ ತಡೋಳ್ಗೆ, ವಿಶಾಲ, ಕಿಶನ ರಾಠೋಡ್, ದೇವಿದಾಸ, ಸೂರ್ಯಕಾಂತ, ನಂದಕುಮಾರ, ಪವನಕುಮಾರ, ಲಾಲಯ್ಯಾ ಉಪಸ್ಥಿರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೀದರ್‌ | ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ

ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್‌-ಬಿಜೆಪಿ...