ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆ ನಿರಾಕರಿಸದಂತೆ ಆರೋಗ್ಯ ಇಲಾಖೆ ಸುತ್ತೋಲೆ

Date:

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದುವರೆಗೂ 26 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್‌ನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಹಾಗೂ ರುದ್ರಭೂಮಿಯಲ್ಲಿ ನಡೆಸಬೇಕು. ಸ್ಮಶಾನದ ಸಿಬ್ಬಂದಿ ಮೃತದೇಹದ ಅಂತ್ಯಕ್ರಿಯೆ ನಡೆಸಲು ನಿರಾಕರಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅಂತ್ಯಕ್ರಿಯೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಆರೋಗ್ಯ ಇಲಾಖೆ, “ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ, ಸ್ಮಶಾನ ಹಾಗೂ ರುದ್ರಭೂಮಿಯಲ್ಲಿ ನಡೆಸಬೇಕು” ಎಂದು ಸೂಚಿಸಿದೆ.

“ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ನಡೆಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ ಹಾಗೂ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಚಿತಾಗಾರ, ಸ್ಮಶಾನ ಹಾಗೂ ರುದ್ರಭೂಮಿಗಳಲ್ಲಿ ಅಂತ್ಯಕ್ರಿಯೆಗೆ ತರುವ ಮೃತದೇಹಗಳನ್ನು ಚಿತಾಗಾರ, ಸ್ಮಶಾನದ ಸಿಬ್ಬಂದಿ ನಿರಾಕರಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಎನ್‌-95 ಮಾಸ್ಕ್, ಗ್ಲೌವ್ಸ್‌ ಹಾಗೂ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನಡೆಸಿದ ನಂತರ ಅವುಗಳನ್ನು ಮಾರ್ಗಸೂಚಿಯಂತೆ ವಿಲೇವಾರಿ ಮಾಡಬೇಕು” ಎಂದು ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜುಲೈ ವೇಳೆಗೆ ನಾಗಸಂದ್ರದಿಂದ ಮಾದಾವರದವರೆಗೆ ಮೆಟ್ರೋ ಸಂಚಾರ ಸಾಧ್ಯತೆ

ಈ ನಿಟ್ಟಿನಲ್ಲಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಡಳಿತಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಸಂವಿಧಾನ, ಪ್ರಜಾಪ್ರಭುತ್ವವನ್ನು ನಾಶ ಮಾಡಲು ಹೊರಟಿರುವ ಮೋದಿ: ರಾಹುಲ್ ಗಾಂಧಿ

ಇತಿಹಾಸದಲ್ಲಿಯೇ ಮೊದಲ ಬಾರಿಗೆ ಭಾರತದ ಸಂವಿಧಾನ ಹಾಗೂ ಪ್ರಜಾಭುತ್ವವನ್ನು ನಾಶ ಮಾಡಲು...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್...