ಇ.ಡಿ. ಅಧಿಕಾರಿಗಳ ವಿರುದ್ಧ ಎಸ್ಸಿಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಹೇಮಂತ್ ಸೊರೇನ್

Date:

ಇ.ಡಿ. ಅಧಿಕಾರಿಗಳ ವಿರುದ್ಧ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ(ದೌರ್ಜನ್ಯ ತಡೆ) ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಬೇಕೆಂದು ಪೊಲೀಸ್ ದೂರು ಸಲ್ಲಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸೊರೇನ್ ಅವರ ರಾಂಚಿ ನಿವಾಸಕ್ಕೆ ಇ.ಡಿ. ಅಧಿಕಾರಿಗಳು ವಿಚಾರಣೆಗೊಳಪಡಿಸಲು ಆಗಮಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ಕಳೆದ 10 ದಿನಗಳಲ್ಲಿ ಜಾರಿ ನಿರ್ದೇಶನಾಲಯದಿಂದ ಹೇಮಂತ್ ಸೊರೇನ್ ಅವರು ಎರಡನೇ ಬಾರಿ ವಿಚಾರಣೆಗೊಳಪಡುತ್ತಿದ್ದಾರೆ. ಜನವರಿ 20 ರಂದು ಈ ಮೊದಲು ಜಾರ್ಖಂಡ್ ಮುಖ್ಯಮಂತ್ರಿಯವರನ್ನು ವಿಚಾರಣೆಗೊಳಪಡಿಸಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶೂದ್ರ ಸ್ವಾಮಿ ಕೇಸರಿ ಸ್ವಾಮಿಯಾಗುವುದು ತಪ್ಪೇ?

ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ರಾಂಜಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ತನಿಖೆಯ ಸಮಯದಲ್ಲಿ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕೆಂದು ತನಿಖಾ ಸಂಸ್ಥೆಗಳು ಮನವಿ ಮಾಡಿವೆ.

ಇ.ಡಿ ತನಿಖೆ ನಡೆಸುವ ಹಿನ್ನೆಲೆಯಲ್ಲಿ ಹೇಮಂತ್ ಸೊರೇನ್ ನಿವಾಸದಲ್ಲಿ ಜೆಎಂಎಂ ನೇತೃತ್ವದ ಶಾಸಕರು ಹೇಮಂತ್ ಸೊರೇನ್ ನಿವಾಸದಲ್ಲಿ ಸಭೆ ಸೇರಿದ್ದರು.

ನಿನ್ನೆ (ಜನವರಿ 30) ಇ.ಡಿ ಅಧಿಕಾರಿಗಳು ಹೇಮಂತ್ ಸೊರೇನ್ ದೆಹಲಿ ನಿವಾಸದಲ್ಲಿ ಎರಡು ಐಷರಾಮಿ ಕಾರುಗಳು ಹಾಗೂ 36 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದರು.

ತಮ್ಮ ಪ್ರಜಾಸತ್ತಾತ್ಮಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ ಕೇಂದ್ರ ಸರ್ಕಾರವು ರಾಜಕೀಯ ಪಿತೂರಿ ನಡೆಸುತ್ತಿದೆ ಎಂದು ಹೇಮಂತ್ ಸೊರೇನ್ ಆರೋಪಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ; ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಮೋದಿ ಮತಬೇಟೆ

ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ...

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ...

ಮೋದಿ ಭಾಷಣ | ರಾಮಮಂದಿರದ ಉಲ್ಲೇಖ, ಸಿಖ್ಖರ ಓಲೈಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚು. ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ...