ಹಿಂದೂ ಧಾರ್ಮಿಕ ದತ್ತಿ ಮಸೂದೆ: ವಿಧಾನ ಪರಿಷತ್​ನಲ್ಲಿ ತಿರಸ್ಕೃತ; ‘ಜೈಶ್ರೀರಾಮ್’ ಘೋಷಣೆ ಕೂಗಿದ ಬಿಜೆಪಿ

Date:

ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಅನ್ನು ವಿಧಾನ ಪರಿಷತ್​ನಲ್ಲಿ ಶುಕ್ರವಾರ ತಿರಸ್ಕರಿಸಲಾಗಿದೆ. ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಪ್ರತಿಪಕ್ಷ ಬಿಜೆಪಿ ಜೈ ಶ್ರೀರಾಮ್ ಘೋಷಣೆ ಕೂಗಿ ಸಂಭ್ರಮಿಸಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು ವಿಧಾನ ಇಂದು ಬೆಳಗ್ಗೆ ಪರಿಷತ್‌ನಲ್ಲಿ ಮಂಡಿಸಿದ್ದರು.

ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದ್ದ ರಾಮಲಿಂಗಾರೆಡ್ಡಿ ಅವರು, 2003ರಿಂದ ವಿಧೇಯಕ ಜಾರಿಯಲ್ಲಿದೆ. 2003ರ ಮೇ 1 ರಿಂದ ದೇವಸ್ಥಾನಗಳಿಂದ ನಿಧಿ ಸಂಗ್ರಹಿಸಲಾಗುತ್ತಿದೆ. ಈಗಿರುವ ನಿಯಮದಂತೆ ಸರ್ಕಾರಕ್ಕೆ 8 ಕೋಟಿ ರೂ. ಸಲ್ಲಿಕೆ ಆಗುತ್ತಿದೆ ಎಂದರು. ಈಗಿನ‌ ಸಾಮಾನ್ಯ ಸಂಗ್ರಹಣ ನಿಧಿಯಿಂದ ಧಾರ್ಮಿಕ ಕೆಲಸ ಮಾಡಲಾಗಲ್ಲ. ಹೊಸ ನಿಯಮದಿಂದ 60 ಕೋಟಿ ರೂಪಾಯಿ ಹಣ ಸಂಗ್ರಹ ಆಗುತ್ತದೆ. ಸಿ ದರ್ಜೆಯ ದೇಗುಲಗಳನ್ನು ನಿರ್ವಹಿಸಲು ಇದರಿಂದ ಸಾಧ್ಯವಾಗುತ್ತದೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಧೇಯಕದಲ್ಲಿದ್ದ ತಿದ್ದುಪಡಿ ಅಂಶಗಳಿಗೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ತೀವ್ರ ಆಕ್ಷೇಪ ಮತ್ತು ವಿರೋಧವನ್ನು ವ್ಯಕ್ತಪಡಿಸಿದರು. ಒಂದು ಕೋಟಿಗಿಂತಲೂ ಹೆಚ್ಚು ಆದಾಯ ಇರುವ ದೇವಸ್ಥಾನಗಳ ಒಟ್ಟು ಆದಾಯದಿಂದ ಶೇಕಡ 10% ರಷ್ಟು ನಿಧಿ ಸಂಗ್ರಹಣೆ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.

ಪರ-ವಿರೋಧದ ಚರ್ಚೆಯ ಬಳಿಕ ಉಪ ಸಭಾಪತಿ ಎಂ ಕೆ ಪ್ರಾಣೇಶ್ ಅವರು ತಿದ್ದುಪಡಿ ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದರು. ವಿಧೇಯಕದ ಪರವಾಗಿ ಏಳು ಮತಗಳು ಚಲಾವಣೆಯಾದರೆ, ವಿಧೇಯಕದ ವಿರುದ್ಧವಾಗಿ 18 ಮತಗಳು ಚಲಾವಣೆಯಾದವು. ಇದರೊಂದಿಗೆ ಸರ್ಕಾರ ಮಂಡಿಸಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ಪರಿಷತ್‌ನಲ್ಲಿ ತಿರಸ್ಕೃತಗೊಂಡಿದೆ.

ಇದನ್ನು ಓದಿದ್ದೀರಾ? ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯದ ವಿರುದ್ಧ ನಿರ್ಣಯ: ಬಿಜೆಪಿ ಬೆಂಬಲ ನೀಡಲಿ; ಡಿ ಕೆ ಶಿವಕುಮಾರ್

ಹಿಂದೂ ಧಾರ್ಮಿಕ ದತ್ತಿ ಮಸೂದೆ ತಿರಸ್ಕಾರಗೊಂಡ ನಂತರ ಪ್ರತಿಪಕ್ಷ ಬಿಜೆಪಿ ಸದಸ್ಯರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಸದಸ್ಯರು ಭಾರತ್ ಮಾತಾ ಕಿ ಜೈ ಹಾಗೂ ಜೈ ಭೀಮ್ ಎಂದು ಘೋಷಣೆ ಕೂಗಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...