ವೋಟ್‌ ಬ್ಯಾಂಕ್‌ಗಾಗಿ ಕಾಂಗ್ರೆಸ್‌ನಿಂದ ಸಿಎಎಗೆ ವಿರೋಧ: ಗೃಹ ಸಚಿವ ಅಮಿತ್ ಶಾ

Date:

ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವೋಟ್ ಬ್ಯಾಂಕ್ ಮತ್ತು ತುಷ್ಟೀಕರಣದ ರಾಜಕಾರಣಕ್ಕಾಗಿ ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ನಾವು ಸಿಎಎ ಜಾರಿ ಮಾಡುವುದಾಗಿ ಹೇಳಿದೆವು. ಆದರೆ ಕಾಂಗ್ರೆಸ್ ಅದನ್ನು ವಿರೋಧಿಸಿತು. ಭಾರತಕ್ಕೆ ವಲಸೆ ಬಂದವರಿಗೆ ಧರ್ಮಾಧರಿತವಾಗಿ ಪೌರತ್ವ ನೀಡಬೇಕು ಎಂಬುದು ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್‌ ಹಾಗೂ ಸಂವಿಧಾನ ಕತೃಗಳ ವಾಗ್ದಾನವಾಗಿತ್ತು. ಆದರೆ ಈಗ ವೋಟ್‌ಬ್ಯಾಂಕ್‌ಗಾಗಿ ಕಾಂಗ್ರೆಸ್ ಇದನ್ನು ವಿರೋಧಿಸುತ್ತಿದೆ” ಎಂದು ಅವರು ಆರೋಪಿಸಿದರು.

ಸಿಎಎ ಜಾರಿ ಮಾಡಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ ಅಮಿತ್ ಶಾ, “ದೇಶಕ್ಕೆ ವಲಸೆ ಬಂದಿರುವವರಿಗೆ ಪೌರತ್ವ ನೀಡದಿದ್ದರೆ ಅವರನ್ನು ಅವಮಾನಿಸಿದಂತಾಗುತ್ತದೆ. ಸಿಎಎ ಜಾರಿ ಮಾಡುವ ಮೂಲಕ ಪ್ರಧಾನಿ ಮೋದಿ ಅವರು ಹಿಂದೂ, ಬೌದ್ಧ, ಸಿಖ್ ಮತ್ತು ಜೈನ ಸಮುದಾಯದವರನ್ನು ಮೋದಿ ಗೌರವಿಸಿದ್ದಾರೆ. ಸಿಎಎ ಜಾರಿಯಿಂದ ಅಲ್ಪಸಂಖ್ಯಾತ ಸಮುದಾಯದ ಪ್ರಜೆಗಳು ಯಾವುದೇ ಕಾರಣಕ್ಕೂ ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ” ಎಂದು ಅಮಿತ್ ಶಾ ಹೇಳಿಕೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ಸಿಎಎ ಜಾರಿ | ಪಾಕಿಸ್ತಾನದವ ನಿಮ್ಮ ಮನೆ ಬಳಿ ಬಂದು ಮೊಕ್ಕಾಂ ಹೂಡಿದರೆ ಸುಮ್ಮನಿರ್ತೀರಾ? ಕೇಜ್ರಿವಾಲ್

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುವುದಾಗಿ ನೀಡಿದ್ದ ಭರವಸೆಯನ್ನು ಮೋದಿ ಸರಕಾರವು ನಿನ್ನೆ ಜಾರಿಗೊಳಿಸಿದೆ ಎಂದು ಅಮಿತ್ ಶಾ ತಿಳಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ...

ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಸಂಚು: ಎಎಪಿ ಗಂಭೀರ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು...

ಮೋದಿ ವೈಫಲ್ಯ-6 | ಎಲ್ಲಿವೆ ಸಂಸದರ ಆದರ್ಶ ಗ್ರಾಮಗಳು; ಮೋದಿ ದತ್ತು ಪಡೆದ ಹಳ್ಳಿಗಳು?

ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಏನೆಲ್ಲಾ ಸೌಲಭ್ಯಗಳಿದ್ದವೂ ಆ ಯಾವುದೇ ಸೌಕರ್ಯಗಳೂ...

ಅನಾರೋಗ್ಯದಡಿ ಜಾಮೀನು ಪಡೆಯಲು ಕೇಜ್ರಿವಾಲ್ ಮಾವು ಸೇವನೆ: ಇ.ಡಿ

ಅಸ್ತಮ ಕಾಯಿಲೆಯಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ಆಧಾರದ...