ಮಾಜಿ ಪ್ರಧಾನಿ ದೇವೇಗೌಡ, ಇಸ್ರೋ ಅಧ್ಯಕ್ಷ ಸೋಮನಾಥ್‌ಗೆ ಗೌರವ ಡಾಕ್ಟರೇಟ್

Date:

  • ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಂದ ಗೌರವ ಡಾಕ್ಟರೇಟ್ ಪ್ರದಾನ
  • ಗೌರವ ಡಾಕ್ಟರೇಟ್‌ಅನ್ನು ಗೌರವದಿಂದ ಸ್ವೀಕರಿಸುತ್ತಿದ್ದೇನೆ: ಎಚ್‌ ಡಿ ದೇವೇಗೌಡ

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪಡೆದು ಮಾತನಾಡಿದ ದೇವೇಗೌಡರು, “ಉನ್ನತ ಶಿಕ್ಷಣದಲ್ಲಿ ಉತ್ಕೃಷ್ಟತೆಯನ್ನು ಸಾಧಿಸುತ್ತಿರುವ ವಿಶ್ವವಿದ್ಯಾಲಯದ ಬಗ್ಗೆ ನನಗೆ ಅಪಾರ ಗೌರವವಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಇಸ್ರೋದ ಅಧ್ಯಕ್ಷ ಎಸ್ ಸೋಮನಾಥ್ ಅವರಿಗೂ ಗೌರವ ಡಾಕ್ಟರೇಟ್ ನೀಡುತ್ತಿರುವು ಸಂತಸ ತಂದಿದೆ. ಯಶಸ್ವಿ ಚಂದ್ರಯಾನ 3 ರೂವಾರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಗೌರವ ಡಾಕ್ಟರೇಟ್ ಅನ್ನು ಅತ್ಯಂತ ಗೌರವದಿಂದ ಸ್ವೀಕರಿಸುತ್ತಿದ್ದೇನೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ವ್ಯಾಖ್ಯಾನ ಬದಲಿಸಿದ ಕಾಂಚಾಣ

“ವಿದ್ಯೆ ಕೇವಲ ಕಾಗದದ ಸರ್ಟಿಫೀಕಟ್ ಆಗಿರಬಾರದು, ಅದು ಸಂಸ್ಕಾರವನ್ನು ಒಳಗೊಂಡಿರಬೇಕು. ವಿದ್ಯೆ ಮತ್ತು ಸಂಸ್ಕಾರ ಬದುಕಿನ ಬೇರುಗಳಿದ್ದಂತೆ. ಈ ಎರಡೂ ಒಟ್ಟಿಗೆ ಬೆಳೆದಾಗ ಮಾತ್ರ ಬದುಕಿಗೊಂದು ಸಾರ್ಥಕತೆ ಸಿಗುತ್ತದೆ” ಎಂದು ಹೇಳಿದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವಿವಿ ಕುಲಪತಿ ಜಯಕರ್ ಸೇರಿದಂತೆ ಇತರರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುತ್ತೂರು | ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋದ ಯುವಕ: ಪ್ರಕರಣ ದಾಖಲು

ಮತದಾನ ಮಾಡಲು ಮತಗಟ್ಟೆಗೆ ತೆರಳಿದಾಗ ಮತದಾರರು ಮೊಬೈಲ್‌ ತೆಗೆದುಕೊಂಡು ಹೋಗದಂತೆ ಚುನಾವಣಾ...

ಮುಸ್ಲಿಂ ಮೀಸಲಾತಿ ರದ್ದು ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ: ಮಾಜಿ ಸಿಎಂ ಬೊಮ್ಮಾಯಿ

ಮುಸ್ಲಿಮರಿಗೆ ನೀಡಿರುವ ಮೀಸಲಾತಿ ರದ್ದು ಮಾಡಿರುವ ವಿಚಾರದಲ್ಲಿ ನಾವು ತೆಗೆದುಕೊಂಡ ನಿರ್ಧಾರಕ್ಕೆ...

ಚಿಕ್ಕಬಳ್ಳಾಪುರ | ಏಕಕಾಲದಲ್ಲಿ ಒಂದೇ ಕುಟುಂಬದ 85 ಮಂದಿ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಪ್ರಕ್ರಿಯೆ ಬಿರುಸಿನಿಂದ...

ಹಿಂದಿಗಿಂತ ಈಗ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನನಗಿದೆ: ಡಿ ಕೆ ಸುರೇಶ್

ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ...