ಭರ್ಜರಿ ಆರಂಭ ಪಡೆದ ʼಗೃಹ ಜ್ಯೋತಿʼ; ಮೊದಲ ದಿನವೇ 55,000 ಗ್ರಾಹಕರ ನೋಂದಣಿ

Date:

  • ಕ್ರಾಂಗ್ರೆಸ್‌ನ ʼಗೃಹ ಜ್ಯೋತಿʼ ಗ್ಯಾರಂಟಿ ಯೋಜನೆಗಳಿಗೆ ಭರ್ಜರಿ ಜನಬೆಂಬಲ
  • ʼಗೃಹ ಜ್ಯೋತಿʼ ನೋಂದಣಿಗೆ ಸರತಿ ಸಾಲು,ರಜೆ ದಿನವೂ ತೆರೆದ ನಾಡ ಕಚೇರಿ

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಗೃಹ ಜ್ಯೋತಿʼ ಯೋಜನೆಗೆ ಭರಪೂರ ಜನ ಸ್ಪಂದನೆ ದೊರೆತಿದ್ದು, ಯೋಜನೆ ಜಾರಿಯ ಮೊದಲ ದಿನವೇ ಐವತ್ತೈದು ಸಾವಿರ ಗ್ರಾಹಕರ ನೋಂದಣಿ ಯಾಗಿದೆ. ಸರ್ಕಾರ ಈ ಸಂಬಂಧ ಮಾಹಿತಿ ಬಿಡುಗಡೆ ಮಾಡಿ, ಜನ ಯೋಜನೆ ಲಾಭ ಪಡೆದುಕೊಳ್ಳುವಂತೆ ತಿಳಿಸಿದೆ.

ರಾಜ್ಯದ ಗೃಹ ಬಳಕೆ ಗ್ರಾಹಕರಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲು ಜಾರಿಯಾಗಿರುವ ‘ಗೃಹ ಜ್ಯೋತಿʼ ಯೋಜನೆಗೆ ಜೂನ್ 18ರ ಭಾನುವಾರ ಚಾಲನೆ ನೀಡಲಾಗಿದೆ.

ಅಂದು ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಯೋಜನೆಗೆ ಒಟ್ಟು 55,000 ಗ್ರಾಹಕರ ನೋಂದಣಿ ಕಾರ್ಯ ಪೂರ್ಣಗೊಂಡಿದೆ ಎಂದು ಸರ್ಕಾರ ತಿಳಿಸಿದೆ. ನೋಂದಣಿ ಪ್ರಕ್ರಿಯೆಯು ರಾಜ್ಯದ ಎಲ್ಲ ಕರ್ನಾಟಕ ಒನ್, ಗ್ರಾಮ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆರಂಭಗೊಂಡಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಯೋಜನೆಗೆ ನೋಂದಣಿಯನ್ನು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ಮಾಡಲಾಯಿತು. ಗ್ರಾಹಕರು ವಿದ್ಯುತ್ ಬಿಲ್ ನಲ್ಲಿರುವ ಖಾತೆ ಸಂಖ್ಯೆ, ತಮ್ಮ ಆಧಾರ್ ಸಂಖ್ಯೆ ಹಾಗು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದು.

ಈ ಸುದ್ದಿ ಓದಿದ್ದೀರಾ? :ಬೆಲೆ ಏರಿಕೆಯಿಂದ ತತ್ತರಿಸಿದ ಜನರ ನೆರವಿಗಾಗಿ ಗ್ಯಾರಂಟಿಗಳನ್ನು ತರಬೇಕಾಯ್ತು: ದಿನೇಶ್ ಗುಂಡೂರಾವ್

ರಜಾ ದಿನವಾದ ಭಾನುವಾರವೂ ಎಲ್ಲ ಎಸ್ಕಾಂಗಳ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿ ಯೋಜನೆ ನೋಂದಣಿಯ ಮೇಲುಸ್ತುವಾರಿವಹಿಸಿ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಂಡರು. ಯೋಜನೆ ನೋಂದಣಿಗೆ ಯಾವುದೇ ದಾಖಲೆಗಳನ್ನು ಗ್ರಾಹಕರು ಸಲ್ಲಿಸಬೇಕಾಗಿಲ್ಲ ಎಂದು ಇಂಧನ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ಗ್ರಾಹಕರು ಮೊಬೈಲ್, ಲ್ಯಾಪ್ ಟಾಪ್ ಅಥವಾ ಸೈಬರ್ ಸೆಂಟರ್ ಗಳಿಗೆ ಹೋಗಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಯೋಜನೆ ಕುರಿತು ಹೆಚ್ಚಿನ ಮಾಹಿತಿಗಾಗಿ ಸಮೀಪದ ವಿದ್ಯುತ್ ಕಚೇರಿಯನ್ನು ಸಂರ್ಕಿಗಸಿ, ಇಲ್ಲವೆ 24×7 ಸಹಾಯವಾಣಿ ಸಂಖ್ಯೆ 1912ಕ್ಕೆ ಕರೆಮಾಡಲು ಇಂಧನ ಇಲಾಖೆ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ʼಈ ದಿನʼ ಸಮೀಕ್ಷೆ | ನಂಬಿಕೆ ಉಳಿಸಿಕೊಂಡ ಕಾಂಗ್ರೆಸ್‌; ʼಗ್ಯಾರಂಟಿʼ ಎದುರು ಮಂಕಾದ ಮೋದಿ ಯೋಜನೆಗಳು

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....