ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ | ಚೊಚ್ಚಲ ಪ್ರಶಸ್ತಿ ಗೆದ್ದ ಸಾತ್ವಿಕ್ – ಚಿರಾಗ್ ಜೋಡಿ

Date:

ಭಾರತದ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ, ಇಂಡೋನೇಷ್ಯಾ ಓಪನ್ ವರ್ಲ್ಡ್ ಟೂರ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಹೊಸ ಇತಿಹಾಸ ರಚಿಸಿದ್ದಾರೆ.

ಭಾನುವಾರ ಜಕಾರ್ತದಲ್ಲಿ ನಡೆದ ಪುರುಷರ ಡಬಲ್ಸ್‌ ವಿಭಾಗದ ಫೈನಲ್‌ ಪಂದ್ಯದಲ್ಲಿ ಭಾರತೀಯ ಜೋಡಿ,  ಹಾಲಿ ವಿಶ್ವ ಚಾಂಪಿಯನ್ ಆರೋನ್ ಚಿಯಾ ಮತ್ತು ಮಲೇಷ್ಯಾದ ಸೊಹ್ ವೂಯಿ ಯಿಕ್ ವಿರುದ್ಧ 21-17, 21-18 ಅಂತರದಲ್ಲಿ ನೇರ ಸೆಟ್‌ಗಳಿಂದ ಗೆಲುವು ಸಾಧಿಸಿತು.

43 ನಿಮಿಷಗಳಲ್ಲೇ ಎದುರಾಳಿಗಳ ಸವಾಲನ್ನು ಮೆಟ್ಟಿನಿಂತ ಸಾತ್ವಿಕ್ – ಚಿರಾಗ್, ಆ ಮೂಲಕ ʻಇಂಡೋನೇಷ್ಯಾ ಓಪನ್ ವರ್ಲ್ಡ್ ಟೂರ್ ಸೂಪರ್ 1000ʼ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಜೋಡಿ ಎಂಬ ದಾಖಲೆ ಬರೆದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಆ್ಯಶಸ್​ ಟೆಸ್ಟ್ |‌ ʻಕ್ರಿಕೆಟ್‌ನ ಹೊಸ ಯುಗʼ ಎಂದ ತೆಲುಗು ಸೂಪರ್‌ಸ್ಟಾರ್‌ ಮಹೇಶ್ ಬಾಬು

ಶನಿವಾರ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ, ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪ್ರಶಸ್ತಿ ವಿಜೇತ, ಪ್ರಸ್ತುತ ವಿಶ್ವ  6ನೇ ಶ್ರೇಯಾಂಕಿತ ಭಾರತೀಯ ಜೋಡಿ, ಕೊರಿಯಾದ ಕಾಂಗ್ ಮಿನ್ ಹ್ಯುಕ್-ಸಿಯೊ ಸೆಯುಂಗ್ ಜೇ ವಿರುದ್ಧ 17-21, 21-19, 21-18 ಸೆಟ್‌ಗಳ ಅಂತರದಿಂದ ಗೆಲುವು ಸಾಧಿಸಿ ಪ್ರಶಸ್ತಿ ಸುತ್ತು ಪ್ರವೇಶಿಸಿದ್ದರು. ಆ ಮೂಲಕ ʻಸೂಪರ್ 1000 ಬ್ಯಾಡ್ಮಿಂಟನ್‌ ಪಂದ್ಯಾವಳಿʼಯಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಎಚ್‌ಎಸ್‌ ಪ್ರಣೋಯ್‌ಗೆ ನಿರಾಸೆ

ಮಲೇಷ್ಯಾ ಮಾಸ್ಟರ್ಸ್ ಚಾಂಪಿಯನ್ ಎಚ್‌ಎಸ್ ಪ್ರಣೋಯ್ ಅವರು ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ್ದಾರೆ.

ಅಗ್ರ ಶ್ರೇಯಾಂಕದ ಡೆನ್ಮಾರ್ಕ್‌ನ ವಿಕ್ಟರ್ ಅಕ್ಸೆಲ್ಸೆನ್ ವಿರುದ್ಧ, 15-21, 15-21 ಅಂತರದಲ್ಲಿ ನೇಟರ್‌ ಸೆಟ್‌ಗಳಿಂದ ಮಣಿದು ನಿರಾಸೆ ಅನುಭವಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ 2024 | ಕೆಕೆಆರ್‌ಗೆ ಸಾಧಾರಣ ಗುರಿ ನೀಡಿದ ಲಖನೌ

ಸ್ಫೋಟಕ ಆಟಗಾರ ನಿಕಲೋಸ್‌ ಪೂರನ್‌ ಹಾಗೂ ನಾಯಕ ಕೆ ಎಲ್‌ ರಾಹುಲ್‌...

ಐಪಿಎಲ್ | ಹೆಟ್ಮಾಯರ್ ಸ್ಫೋಟಕ ಬ್ಯಾಟಿಂಗ್: ರೋಚಕ ಹಣಾಹಣಿಯಲ್ಲಿ ಪಂಜಾಬ್‌ಗೆ ಸೋಲುಣಿಸಿದ ರಾಜಸ್ಥಾನ

ಚಂಡೀಗಢದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು...

ಐಪಿಎಲ್ 2024 | ತಲಾ 5 ಬಾರಿ ಕಪ್‌ ಗೆದ್ದಿರುವ ಮುಂಬೈ – ಚನ್ನೈ ನಡುವೆ ಹಣಾಹಣಿ; ಎಲ್ಲರ ಚಿತ್ತ ವಾಂಖೆಡೆಯತ್ತ!

ಐಪಿಎಲ್‌ನ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ (ಸಿಎಸ್‌ಕೆ) ಮತ್ತು ಮುಂಬೈ...

ಐಪಿಎಲ್ | ಕೆ ಎಲ್ ರಾಹುಲ್ ನೇತೃತ್ವದ ಲಕ್ನೋಗೆ ಸೋಲುಣಿಸಿದ ಡೆಲ್ಲಿ ಕ್ಯಾಪಿಟಲ್ಸ್‌

ಲಕ್ನೋ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಶುಕ್ರವಾರ ನಡೆದ ಐಪಿಎಲ್‌ನ 26ನೇ...