ಬಸ್​ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನ; ಗೃಹ ಇಲಾಖೆಯಿಂದ ತನಿಖೆ: ಡಾ. ಜಿ ಪರಮೇಶ್ವರ್‌

Date:

ಕೆಎಸ್‌ಆರ್‌ಟಿಸಿ ಬಸ್​ ಚಾಲಕ ಜಗದೀಶ್​​ ಆತ್ಮಹತ್ಯೆಗೆ‌ ಯತ್ನಿಸಿರುವ ಬಗ್ಗೆ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ಗೃಹ ಇಲಾಖೆ ಮೂಲಕ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಸದನಕ್ಕೆ ಭರವಸೆ ನೀಡಿದರು.

16ನೇ ವಿಧಾನಸಭೆಯ ನಾಲ್ಕನೇ ದಿನದ ಕಲಾಪದಲ್ಲಿ ಇಡೀ ದಿನದ ಚರ್ಚೆ ಬಹುತೇಕವಾಗಿ ಸಾರಿಗೆ ಇಲಾಖೆ ನೌಕರನ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಮೀಸಲಾಯಿತು.

ಪ್ರತಿಪಕ್ಷ ಮತ್ತು ಆಡಳಿತ ಪಕ್ಷದ ಸದಸ್ಯರ ನಡುವೆ ತೀವ್ರ ಮಾತಿನ ಜಟಾಪಟಿಗೂ ಇಂದಿನ ಸದನ ಸಾಕ್ಷಿಯಾಯಿತು. ಎರಡು ಬಾರಿ ಸಭಾಧ್ಯಕ್ಷರು ಈ ವಿಚಾರದಲ್ಲಿ ಸದನ ಮುಂದೂಡಿದ್ದು ನಡೆಯಿತು. ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಾರಿಗೆ ಇಲಾಖೆ ನೌಕರ ಆತ್ಮಹತ್ಯೆಗೆ ಪ್ರಯತ್ನಿಸಿರುವ ಪ್ರಕರಣ ಬಗ್ಗೆ ತನಿಖೆಯಾಗಿ ಸತ್ಯ ಹೊರಬರಬೇಕು ಅಷ್ಟೇ ನಮ್ಮದು ಆಗ್ರಹ ಎಂದು ಸದನದ ಮುಂದೆ ಬೇಡಿಕೆ ಇಟ್ಟರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗೃಹ ಸಚಿವರು ಪ್ರತಿಕ್ರಿಯಿಸಿ, “ಸಾರಿಗೆ ಇಲಾಖೆ ಸೇರಿದಂತೆ ಜಗದೀಶ್​​ ಆತ್ಮಹತ್ಯೆಗೆ‌ ಯತ್ನಿಸಿರುವ ಬಗ್ಗೆ ತನಿಖೆ ನಡೆಸುತ್ತೇವೆ” ಎಂದು ಸದನಕ್ಕೆ ಭರವಸೆ ನೀಡಿದರು.

ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹ

ಮಂಡ್ಯ ಜಿಲ್ಲೆಯ ನಾಗಮಂಗಲ ಕೆಎಸ್‌ಆರ್‌ಟಿಸಿ ಬಸ್ ಡಿಪೊ ಚಾಲಕ ಕಂ ನಿರ್ವಾಹಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರು ಧರಣಿ ಆರಂಭಿಸಿದ್ದರು. ಗದ್ದಲ ಹೆಚ್ಚಾಗಿದ್ದರಿಂದ ಸದನದ ಕಲಾಪವನ್ನು ಸಭಾಧ್ಯಕ್ಷರು ಮುಂದೂಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ನಟ ದ್ವಾರಕೀಶ್ ನಿಧನಕ್ಕೆ ಶಿವರಾಜ್‌ಕುಮಾರ್ ಸಂತಾಪ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು....

ದಾವಣಗೆರೆ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ ಘೋಷಣೆ

ದೇಶಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷವು ಇಂಡಿಯಾ ಒಕ್ಕೂಟದ...

ವಿಜಯೇಂದ್ರ, ಸಿಟಿ ರವಿ, ಪಿ.ರಾಜೀವ್‌ನಿಂದ ಬಿಜೆಪಿ ಹಾಳಾಗುತ್ತಿದೆ: ಮಾಲೀಕಯ್ಯ ಗುತ್ತೇದಾರ ಕಿಡಿ

ಸಹೋದರ ನಿತಿನ್ ಗುತ್ತೇದಾರ ಅವರನ್ನು ಬಿಜೆಪಿಗೆ ಸೇರಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ...