ರೇಷ್ಮೆ ಭವನ ನಿರ್ಮಾಣಕ್ಕೆ ರಾಜ್ಯ ಗಣಿಗಾರಿಕೆ ಅಭಿವೃದ್ಧಿ ನಿಗಮದ ಹೂಡಿಕೆ; ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲು ಸಿಎಂ ಸೂಚನೆ

Date:

ಬೆಂಗಳೂರಿನ ಓಕುಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ರೇಷ್ಮೆ ಭವನ ನಿರ್ಮಾಣಕ್ಕೆ ಹೂಡಿಕೆ ಮಾಡಲು ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹೂಡಿಕೆ ಮಾಡಲು ಮುಂದೆ ಬಂದಿದ್ದು, ಈ ಕುರಿತು ಸವಿವರವಾದ ಪ್ರಸ್ತಾವನೆಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಈ ಯೋಜನೆಯ ರೂಪುರೇಷೆಗಳ ಕುರಿತ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು, ಇದು ನಗರದ ಕೇಂದ್ರ ಭಾಗದಲ್ಲಿರುವುದರಿಂದ ಇದರ ಸದುಪಯೋಗ ಮಾಡಿಕೊಳ್ಳುವ ಕುರಿತು ಸವಿವರ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

“ಇದರಲ್ಲಿ ವ್ಯಾಪಾರಿ ಮಳಿಗೆಗಳು, ಕಚೇರಿಗಳನ್ನು ನಿರ್ಮಿಸಿ, ಬಾಡಿಗೆಗೆ ನೀಡುವ ಮೂಲಕ ಬರುವ ಆದಾಯವನ್ನು ರೇಷ್ಮೆ ಇಲಾಖೆ ಹಾಗೂ ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹಂಚಿಕೆ ಮಾಡಿಕೊಳ್ಳುವ ಕುರಿತೂ ಸಹ ಮಾಹಿತಿ ಒದಗಿಸಬೇಕು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕೆಎ‌ನ್‌ ರಾಜಣ್ಣ ಮತ್ತು ಪರಮೇಶ್ವರ್‌ ಅವರೇ, ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ: ಕುಮಾರಸ್ವಾಮಿ ಕಿಡಿ

ಸಭೆಯಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್‌, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ| ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಪುನರುಜ್ಜೀವನ; ನಿರ್ಮಲಾ ಸೀತಾರಾಮನ್

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಧ್ಯಸ್ಥಗಾರರೊಂದಿಗೆ ಸರಿಯಾದ ಸಮಾಲೋಚನೆಯ ನಂತರ...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...