ಪಾಕ್ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಜಾಮೀನು ನೀಡಿದ ಇಸ್ಲಾಮಾಬಾದ್ ಹೈಕೋರ್ಟ್

Date:

ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್‌ಸಿ) ಮಂಗಳವಾರ ತೋಷಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿಯ ಅಪರಾಧ ಮತ್ತು ಮೂರು ವರ್ಷಗಳ ಶಿಕ್ಷೆಯನ್ನು ಅಮಾನತುಗೊಳಿಸಿರುವುದರಿಂದ ಇಮ್ರಾನ್ ಖಾನ್ ಜಾಮೀನಿನ ಮೇಲೆ ಬಿಡುಗಡೆಯಾಗಲಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಅಮರ್ ಫಾರೂಕ್ ಮತ್ತು ನ್ಯಾಯಮೂರ್ತಿ ತಾರಿಕ್ ಮೆಹಮೂದ್ ಜಹಾಂಗಿರಿ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

ಆಗಸ್ಟ್‌ನಲ್ಲಿ ಇಸ್ಲಾಮಾಬಾದ್ ನ್ಯಾಯಾಲಯವು ಇಮ್ರಾನ್ ಖಾನ್‌ಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಸದ್ಯ ಮಾಜಿ ಪ್ರಧಾನಿ ಪ್ರಸ್ತುತ ರಾವಲ್ಪಿಂಡಿಯ ಅಟಾಕ್ ಜೈಲಿನಲ್ಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬಿಡುಗಡೆ ಆದೇಶವು ಹೊರಬರುತ್ತಿದ್ದಂತೆಯೇ ನ್ಯಾಯಾಲಯದ ಆವರಣದಲ್ಲಿ ಇಮ್ರಾನ್ ಪರ ವಕೀಲರು ಜಯಘೋಷ ಕೂಗುತ್ತಿರುವುದು ಕಂಡುಬಂದಿದೆ.

ತೋಷಖಾನಾ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ತೀರ್ಪು ನೀಡಿ ಕಳೆದ ಆಗಸ್ಟ್‌ನಲ್ಲಿ ಇಸ್ಲಾಮಾಬಾದ್‌ನ ನ್ಯಾಯಾಲಯವು ಇಮ್ರಾನ್ ಖಾನ್‌ಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಆ ಬಳಿಕ ಆಗಸ್ಟ್ 5ರಂದು ಅವರನ್ನು ಬಂಧಿಸಲಾಗಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡ ಸೇರಿ 5 ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರೊಪಗ್ಯಾಂಡಗಳ ವಿರುದ್ಧ ಟೊಂಕಕಟ್ಟಿ ನಿಂತಿರುವ ದೇಶದ...

ಪಶ್ಚಿಮ ಬಂಗಾಳ| ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಪೂರ್ವ ಯೋಜಿತ ಎಂದ ಮಮತಾ

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪೋರ್ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು...

ಸಿದ್ದರಾಮಯ್ಯ ಸರ್ಕಾರ ನೋಡಿದ್ರೆ ನಾವೀಗ ಪಾಕಿಸ್ತಾನದಲ್ಲಿ ಇದ್ದೀವಾ ಎಂಬ ಅನುಮಾನ ಬರುತ್ತಿದೆ: ಆರ್‌ ಅಶೋಕ್‌

ಬೆಂಗಳೂರಿನಲ್ಲಿ ಜೈಶ್ರೀರಾಮ್‌ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ...

ಭ್ರಷ್ಟ ಸುಧಾಕರ್ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ: ಸಿಎಂ ಸಿದ್ದರಾಮಯ್ಯ

ನೀವೇ ತಿರಸ್ಕರಿಸಿದ ಎನ್‌ಡಿಎ ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ...