ನರೇಂದ್ರ ಮೋದಿಗೆ ಖಡಕ್ ಸವಾಲೆಸೆದ ಜಗದೀಶ್ ಶೆಟ್ಟರ್

Date:

  • ಪಕ್ಷದಲ್ಲಿ ಬದಲಾವಣೆ ಬಯಸುವ ಮೋದಿ ತಾವೂ ಅದಕ್ಕೆ ಒಳಪಡುತ್ತಾರಾ?
  • ಜನಮನ್ನಣೆ ಇರುವವರೆಗೂ ರಾಜಕೀಯದಲ್ಲಿರಬೇಕು ಎಂದ ಜಗದೀಶ್ ಶೆಟ್ಟರ್

ಇನ್ನೊಬ್ಬರನ್ನು ಅಧಿಕಾರದ ಆಸೆಯಿಂದ ಬೇರೆ ಕಡೆ ಹೋದರು ಎನ್ನುವ ನರೇಂದ್ರ ಮೋದಿ ಅವರು, ತಾವೂ ಅಧಿಕಾರದಿಂದ ದೂರ ಸರಿಯುತ್ತಾರಾ? ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಶ್ನಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ನರೇಂದ್ರ ಮೋದಿ ಅವರು ನಾಲ್ಕು ಬಾರಿ ಸಿಎಂ ಎರಡು ಬಾರಿ ಪ್ರಧಾನಿಯಾಗಿದ್ದಾರೆ. ಅವರು ಈಗ ರಾಜಕೀಯ ಬಿಡ್ತಾರಾ..? ಅದು ಸಾಧ್ಯವಿಲ್ಲ ಇನ್ನೊಮ್ಮೆ ಪ್ರಧಾನಿಯಾಗಲು ಪ್ರಯತ್ನ ಮಾಡುತ್ತಾರೆ. ಆದರೆ ಬೇರೆಯವರು ಅಧಿಕಾರಕ್ಕಾಗಿ ಅನ್ಯ ಪಕ್ಷಕ್ಕೆ ಹೋಗುತ್ತಾರೆಂದು ಪಕ್ಷ ಬಿಟ್ಟವರ ಬಗ್ಗೆ ಮೋದಿ ಹೇಳುತ್ತಾರೆ ಎಂದು ಶೆಟ್ಟರ್ ಪ್ರಧಾನಿಗಳನ್ನು ಕುಟುಕಿದರು.

ನಾನು ಏನೋ ಆಗಬೇಕೆಂಬ ಆಸೆಯಿಂದ ಕಾಂಗ್ರೆಸ್ ಸೇರಿಲ್ಲ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಬಿಜೆಪಿಯವರು ಮಾಡಿದ ಮೋಸದಿಂದ ಕಾಂಗ್ರೆಸ್ ಸೇರಿದೆ. ಶಾಸಕನಾದರೆ ಮನಸ್ಸಿಗೆ ಸಮಾಧಾನ ಆಗುತ್ತದೆ ಎಂದು ಪಕ್ಷ ಬದಲಾಯಿಸಿದೆ. ಇದೇ ವಿಚಾರವನ್ನು ಬಿಜೆಪಿಯವರಿಗೆ ಹೇಳಿದ್ದೆ. ಆದರೆ ಅವರಾರೂ ಇದಕ್ಕೆ ಗಮನ ಕೊಡದೆ ಅಪಮಾನಿಸಿದರು ಎಂದು ಶೆಟ್ಟರ್ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜಕೀಯ ಎನ್ನುವುದು ಜನರು ನೀಡುವ ಆಶೀರ್ವಾದ. ಹೀಗಾಗಿ ಜನಾಶೀರ್ವಾದ ಇರುವವರೆಗೂ ರಾಜಕೀಯದಲ್ಲಿ ಇರಬೇಕು ಎಂದು ಜಗದೀಶ್ ಶೆಟ್ಟರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?:ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ; ಈ ಮಾತಿಗೆ ನಾನು ಈಗಲೂ ಬದ್ಧ : ಸಿಎಂ ಬೊಮ್ಮಾಯಿ

ಬಿಜೆಪಿ ಹಾಗೂ ಸಿಎಂ ಬೊಮ್ಮಾಯಿ ವಿರುದ್ದ ವಾಗ್ದಾಳಿ ನಡೆಸಿದ ಶೆಟ್ಟರ್, ಉತ್ತರ ಕರ್ನಾಟಕದವರೇ ಸಿಎಂ ಆದರೂ ಅಭಿವೃದ್ಧಿ ಮಾಡಿಲ್ಲ. ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಜನರಿಗೆ ಬೇಸರ ಮೂಡಿಸಿದೆ. ಸರ್ಕಾರದ ಯೋಜನೆಗಳು ಜನರಿಗೆ ತಲುಪಲಿಲ್ಲ. ಮೀಸಲಾತಿಯನ್ನೂ ಸಮರ್ಪಕವಾಗಿ ಅನುಷ್ಠಾನ ಮಾಡಲಿಲ್ಲ, ಈ ಎಲ್ಲ ಕಾರಣಗಳಿಂದ ಜನ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದರು ಎಂದು ಶೆಟ್ಟರ್ ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ ಜನ್ಮಭೂಮಿ, ಬೆಳಗಾವಿ ಕರ್ಮಭೂಮಿ; ‌ನನ್ನ ಪ್ರಶ್ನಿಸುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ: ಜಗದೀಶ್‌ ಶೆಟ್ಟರ್

ನನ್ನನ್ನು ಹೊರಗಿನವನು ಎಂದು ಕರೆಯುವ ನೈತಿಕ ಹಕ್ಕು ಕಾಂಗ್ರೆಸ್ಸಿಗರಿಗಿಲ್ಲ. ರಾಹುಲ್‌ ಗಾಂಧಿ...

ಪುರೋಹಿತ ಕೂಡಾ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದೆಂದ ಸರ್ಕಾರಿ ಸಹಾಯವಾಣಿ!

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಭಾರತದ ಪೌರತ್ವ ಪಡೆಯುವವರಿಗೆ ಸ್ಥಳೀಯ...

ಮಮತಾ ಕುರಿತು ಅವಹೇಳನ; ಬಿಜೆಪಿ ಸಂಸದ ದಿಲೀಪ್ ಘೋಷ್ ವಿರುದ್ಧ ಎಫ್‌ಐಆರ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ್ದ...