ತೇಜಸ್ವಿ ಸೂರ್ಯ ನಾಮಪತ್ರ: ಮೆರವಣಿಗೆಯಲ್ಲಿ ಕಡ್ಡಾಯ ಭಾಗವಹಿಸಲು ಜೈನ್ ಕಾಲೇಜಿನಿಂದ ವಿದ್ಯಾರ್ಥಿಗಳಿಗೆ ಸೂಚನೆ!

Date:

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ನಾಳೆ(ಏಪ್ರಿಲ್ 4) ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಡೆಯುವ ಮೆರವಣಿಗೆಯಲ್ಲಿ ಜೈನ್ ಕಾಲೇಜಿನ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ‘ಫರ್ಮಾನು’ ಹೊರಡಿಸಿರುವುದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಬೆಂಗಳೂರಿನ ವಿವಿ ಪುರಂನಲ್ಲಿರುವ ಜೈನ್ ಕಾಲೇಜಿನ ವಾಟ್ಸಪ್ ಗ್ರೂಪಿನಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಇದು ಈಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಈ ಸೂಚನೆಯಲ್ಲಿ, “ನಾಳೆ(ಏಪ್ರಿಲ್ 4) ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಮೆರವಣಿಗೆ ನಡೆಯಲಿದೆ. ವಿದ್ಯಾರ್ಥಿ ಪರಿಷತ್ತಿನ ಎಲ್ಲಾ ಸದಸ್ಯರು ಸೇರಿ ಎಲ್ಲ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಗೆ ಜಯನಗರದ ಮೈಯ್ಯಾಸ್ ಹೋಟೆಲ್ ಬಳಿ ಸೇರಬೇಕು. ಅಲ್ಲಿ ನಿಮಗೆ ಟಿ-ಶರ್ಟ್ ನೀಡಲಾಗುವುದು. ಆದ್ದರಿಂದ ತಡ ಮಾಡಬಾರದು. ಕಡ್ಡಾಯವಾಗಿ ಇದರಲ್ಲಿ ಭಾಗವಹಿಸಬೇಕು. ಇದರಿಂದ ಯಾವುದೇ ವಿನಾಯಿತಿಯನ್ನು ನೀಡಲಾಗುವುದಿಲ್ಲ. ಇದಕ್ಕಾಗಿ ನೀವು ಹಾಜರಾತಿ ಪಡೆಯುತ್ತೀರಿ” ಎಂದು ಸೂಚನೆ ನೀಡಲಾಗಿದೆ ಎಂದು ಈ ದಿನ.ಕಾಮ್‌ಗೆ ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಕಡ್ಡಾಯ ಭಾಗವಹಿಸುವಂತೆ ಕಳುಹಿಸಲಾಗಿರುವ ಸಂದೇಶ

ಇಂದು ಕಾಲೇಜಿನ ಪ್ರತಿಯೊಂದು ತರಗತಿಯ ವಾಟ್ಸಪ್ ಗ್ರೂಪ್‌ನಲ್ಲೂ ಕೂಡ ಈ ಸಂದೇಶ ರವಾನಿಸಲಾಗಿದೆ. ಅಲ್ಲದೇ, ಕಾಲೇಜಿನ ಆಡಳಿತ ಮಂಡಳಿಯ ಸೂಚನೆಯ ಹಿನ್ನೆಲೆಯಲ್ಲಿ ಪ್ರತಿಯೊಂದು ವಿಭಾಗದ ತರಗತಿಗಳಿಗೆ ತೆರಳಿಯೂ ಕೂಡ ಸೂಚನೆ ನೀಡಿರುವುದಾಗಿ ಕೆಲವು ವಿದ್ಯಾರ್ಥಿಗಳು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಹಲವು ವಿದ್ಯಾರ್ಥಿಗಳು ಈ ಬಗ್ಗೆ ಸೋಷಿಯಲ್ ಮೀಡಿಯಾದ ಮೂಲಕ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದು, ಕಡ್ಡಾಯ ಯಾಕೆ ಮಾಡಿದ್ದೀರಾ ಎಂದು ಕಾಲೇಜಿನ ಪ್ರಾಂಶುಪಾಲರಲ್ಲಿ ಪ್ರಶ್ನಿಸಿದಾಗ, ‘ಉತ್ತರ ನೀಡಿಲ್ಲ’ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಈ ದಿನ.ಕಾಮ್ ಬೆಂಗಳೂರಿನ ವಿವಿ ಪುರಂನಲ್ಲಿರುವ ಜೈನ್ ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ್ ಅವರನ್ನು ಸಂಪರ್ಕಿಸಿತು. ಈ ವೇಳೆ ಪ್ರತಿಕ್ರಿಯಿಸಿದ ಅವರು, “ತೇಜಸ್ವಿ ಸೂರ್ಯ ಮೆರವಣಿಗೆಯಲ್ಲಿ ಭಾಗವಹಿಸಲು ನಾವು ಯಾವುದೇ ಸೂಚನೆ ಕೊಟ್ಟಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

 

ಒಂದು ವಾರದ ಹಿಂದೆ ಕಾಲೇಜಿಗೆ ತೆರಳಿದ್ದ ಸಂಸದ ತೇಜಸ್ವಿ ಸೂರ್ಯ, 2 ವರ್ಷದ ಹಿಂದೆ ನಾನು ನಿಮ್ಮ ಕಾಲೇಜಿನ ಫೆಸ್ಟ್‌ನಲ್ಲಿ ಬಂದು ಭಾಗವಹಿಸಿದ್ದೆ. ಹಾಗಾಗಿ, ನಾನು ಏಪ್ರಿಲ್ 4ರಂದು ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳನ್ನು ಭಾಗವಹಿಸಲು ಕಳುಹಿಸಿಕೊಡುವಂತೆ ಕಾಲೇಜಿನ ಆಡಳಿತ ಮಂಡಳಿಯೊಂದಿಗೆ ಬೇಡಿಕೆ ಇರಿಸಿದ್ದರು. ಹೀಗಾಗಿ, ಕಾಲೇಜು ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯು ಏಪ್ರಿಲ್ 3ರಂದು ಸೂಚನೆ ನೀಡಿರುವ ಆರೋಪ ಕೂಡ ಕೇಳಿಬಂದಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಸ್ಲಿಮರನ್ನು ಒಬಿಸಿಗೆ ಸೇರಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌: ಮೋದಿಗೆ ದ್ವಾರಕಾನಾಥ್ ಇತಿಹಾಸ ಪಾಠ

"ಒಬಿಸಿಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಸಂಚನ್ನು ಮೋದಿ ರೂಪಿಸಿದ್ದಾರೆ, ಮಂಡಲ್‌ ಆಯೋಗ...

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...