ಜಲ ಜೀವನ್ ಮಿಷನ್ ಯೋಜನೆ | ಅಕ್ರಮದಲ್ಲಿ ನಾನೂ ಕೂಡ ಭಾಗಿ ಎಂದ ಬಿಜೆಪಿ ಸಂಸದ ಸಂಗಣ್ಣ ಕರಡಿ

Date:

  • ಕಾಮಗಾರಿಯಲ್ಲಿ ಅನೇಕ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ಭಾಗಿ
  • ಯೋಜನೆಗೆ ಮತ್ತೆ 123 ಕೋಟಿ ರೂ. ಪುನಃ ಅನುದಾನ ಕೇಳಲಾಗಿದೆ

ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಯಲ್ಲಿ ಹಣದ ಲೂಟಿಯೇ ನಡೆಯುತ್ತಿದೆ. ಕಾಮಗಾರಿಯಲ್ಲಿ ನಾನೂ ಸೇರಿ ಅನೇಕ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಅವರು ತಮ್ಮ ಭ್ರಷ್ಟಾಚಾರವನ್ನು ಬಹಿರಂಗವಾಗಿ ಒಪ್ಪಿಕೊಂಡು ಹೇಳಿಕೆ ನೀಡಿದ್ದಾರೆ.

ಯಾವೊಬ್ಬ ರಾಜಕಾರಣಿಯೂ ತಾನು ಎಷ್ಟೇ ಹಣ ಲೂಟಿ ಹೊಡೆದರೂ, ಎಲ್ಲಿಯೂ ಈ ಬಗ್ಗೆ ಹೇಳಿಕೊಳ್ಳುವುದಿಲ್ಲ. ನಿಷ್ಠಾವಂತ, ಪ್ರಾಮಾಣಿಕ, ಜನರಿಗಾಗಿ ದುಡಿಯುವ ರಾಜಕಾರಣಿಗಳನ್ನು ಇತ್ತೀಚಿನ ದಿನಗಳಲ್ಲಿ ನೋಡುವುದೇ ಅಪರೂಪ. ಆದರೂ ತಾವೊಬ್ಬ ಪ್ರಾಮಾಣಿಕ ರಾಜಕಾರಣಿ ಎಂಬಂತೆ ಮುಖವಾಡ ಪ್ರದರ್ಶಿಸುವ ರಾಜಕಾರಣಿಗಳ ನಡುವೆ ನಾನೊಬ್ಬ ಭ್ರಷ್ಟ ಎಂಬುದನ್ನು ಸಂಗಣ್ಣ ಕರಡಿ ಒಪ್ಪಿಕೊಂಡಿದ್ದಾರೆ.

ಕಾರಟಗಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ನಾನು ಭಾಗಿಯಾಗಿದ್ದೇನೆ” ಎಂದಿದ್ದಾರೆ.‌

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜೆಜೆಎಂ ಕಾಮಗಾರಿಯಲ್ಲಿ ಹಣವನ್ನು ಲೂಟಿ ಹೊಡೆಯಲಾಗುತ್ತಿದೆ. ಜೆಜೆಎಂ ಯೋಜನೆಯ ಕಾಮಗಾರಿಯಲ್ಲಿ ರಿವೈಸ್ ಎಸ್ಟಿಮೇಟ್​​​​ನಿಂದ ಹೊಸ ಡಿಪಿಆರ್ ಮಾಡಿಸುವವರೆಗೂ ಹಣ ಲೂಟಿ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 123 ಕೋಟಿ ರೂ. ಯೋಜನೆಗೆ ಮತ್ತೆ 6 ತಿಂಗಳಲ್ಲಿ 123 ಕೋಟಿ ರೂ. ಪುನಃ ಅನುದಾನ ಕೇಳಲಾಗಿದೆ. ಅಕ್ರಮದಲ್ಲಿ ಸಂಸದರಿಂದ ಹಿಡಿದು ಎಲ್ಲರೂ ಹಣ ದೋಚಿದ್ದಾರೆ. ಇದರಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ” ಎಂದರು.

“ನಾವೇನೂ ಹರಿಶ್ಚಂದ್ರನಲ್ಲ, ನ್ಯಾಯ ಅನ್ಯಾಯವನ್ನು ನೋಡಬೇಕು. ಅನ್ಯಾಯದಿಂದ ಹಣ ಗಳಿಸಿದವರು ನೆಮ್ಮದಿಯಿಂದ ನಿದ್ದೆ ಮಾಡಲ್ಲ. ದುಡಿದು ತಿನ್ನೋರು ನೆಮ್ಮದಿಯಿಂದ ನಿದ್ದೆ ಮಾಡುತ್ತಾರೆ. ನಾನು ಮಾಡಿದ ತಪ್ಪಿನ ಅರಿವು ನನಗಿದೆ” ಎಂದು ಹೇಳಿಕೊಂಡಿದ್ದಾರೆ.

 

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ, ಎನ್‌ಸಿಬಿಸಿ ಅಧ್ಯಕ್ಷರಿಂದ ಹಿಂದುಳಿದ ವರ್ಗಗಳನ್ನು ದಿಕ್ಕು ತಪ್ಪಿಸುವ ಕೆಲಸ: ದ್ವಾರಕಾನಾಥ್

ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ...

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ʼಈ ದಿನʼ ಸಮೀಕ್ಷೆ | ನಂಬಿಕೆ ಉಳಿಸಿಕೊಂಡ ಕಾಂಗ್ರೆಸ್‌; ʼಗ್ಯಾರಂಟಿʼ ಎದುರು ಮಂಕಾದ ಮೋದಿ ಯೋಜನೆಗಳು

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ...