ಯಾರೊಂದಿಗೂ ಮೈತ್ರಿ ಇಲ್ಲ, ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಸಮರ: ಎಚ್ ಡಿ ದೇವೇಗೌಡ

Date:

ನಾವು ಅತ್ತ ಎನ್‌ಡಿಎ ಕೂಟವನ್ನೂ ಸೇರುವುದಿಲ್ಲ, ಇತ್ತ ಇಂಡಿಯಾ ಒಕ್ಕೂಟವನ್ನು ಸೇರುವುದಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದ ಮೇಲೆ ಸ್ವತಂತ್ರ ನಿಲುವಿನಿಂದ ಮುಂದುವರಿಯಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರೊಂದಿಗೆ ಸೇರಿ ಪ್ರತಿಭಟನೆ ಮಾಡಿದ ಮಾತ್ರಕ್ಕೆ ಕಥೆ ಹೆಣೆಯುವುದು ಬೇಡ. ಯಾವುದೇ ಪಕ್ಷದ ಕೂಟವನ್ನು ಸೇರದೆ ಜೆಡಿಎಸ್ ಜನರ ಬಳಿ ತೆರಳಲಿದೆ. ಪಕ್ಷಕ್ಕಾಗಿರುವ ಅನ್ಯಾಯವನ್ನು ಮನವರಿಕೆ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ವಿಪಕ್ಷ ನಾಯಕನ ಸ್ಥಾನ ಪಡೆಯುತ್ತಾರೆ ಎಂಬ ಚರ್ಚೆ ಜೋರಾಗಿತ್ತು. ಆದರೆ, ಪಕ್ಷದ ವರೀಷ್ಠ ದೇವೇಗೌಡರೇ ಹೇಳಿಕೆ ನೀಡಿ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಜ್ಯಪಾಲರಿಗೆ ದೂರು : ಬಿಜೆಪಿ ಲೆಟರ್‌ಹೆಡ್‌ಗೆ ಕುಮಾರಸ್ವಾಮಿ ಸಹಿ, ಕುತೂಹಲ ಕೆರಳಿಸಿದ ನಡೆ

ಜೆಡಿಎಸ್‌ ಶಾಸಕರ ಜೊತೆ ಸಭೆ

ಜೆಡಿಎಸ್‌ ಶಾಸಕರ ಜತೆ ಗುರುವಾರ ರಾತ್ರಿ ಸಭೆ ನಡೆಸಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌ ಡಿ ದೇವೇಗೌಡ, ಒಗ್ಗಟ್ಟು ಕಾಯ್ದುಕೊಳ್ಳುವುದು, ಲೋಕಸಭಾ ಚುನಾವಣೆಯಲ್ಲಿ ಪಕ್ಷ ತಳೆಯಬೇಕಿರುವ ನಿಲುವು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು. ಎಲ್ಲರ ಜತೆ ಸುದೀರ್ಘವಾಗಿ ಮಾತುಕತೆ ನಡೆಸಿದ ಪಕ್ಷದ ವರಿಷ್ಠರು, ವಿಧಾನಸಭಾ ಚುನಾವಣೆಯ ನಂತರದ ಬೆಳವಣಿಗೆಗಳ ಕುರಿತು ವಿಚಾರ ವಿನಿಮಯ ನಡೆಸಿದ್ದಾರೆ.

ಎಲ್ಲ ಶಾಸಕರು ಒಗ್ಗಟ್ಟಿನಿಂದ ಇರುವಂತೆ ದೇವೇಗೌಡರು ಸಭೆಯಲ್ಲಿ ಸಲಹೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಸೇರಬೇಕೆ? ಅಥವಾ ಸ್ವತಂತ್ರವಾಗಿ ಸ್ಪರ್ಧಿಸಬೇಕೆ? ಎಂಬುದರ ಕುರಿತು ಎಲ್ಲ ಶಾಸಕರಿಂದಲೂ ವೈಯಕ್ತಿಕವಾಗಿ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ರಾಜ್ಯದಲ್ಲಿ ಒಡೆದ ಮನೆಯಾದ ಬಿಜೆಪಿ; ಕಾಂಗ್ರೆಸ್‌ಗೆ ಅಚ್ಚರಿಯ ಲಾಭ?

ಕಳೆದ ವರ್ಷ ಮೇನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹೀನಾಯವಾಗಿ...

ಬೆಂಗಳೂರು | ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ: ಜಲಮಂಡಳಿ ಅಧ್ಯಕ್ಷ

“ಬೆಂಗಳೂರಿನ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ...

ಜೆಡಿಎಸ್‌ ಟಿಕೆಟ್‌ ಫೈನಲ್ | ಮಂಡ್ಯಕ್ಕೆ ಎಚ್‌ಡಿಕೆ, ಹಾಸನಕ್ಕೆ ಪ್ರಜ್ವಲ್‌, ಕೋಲಾರಕ್ಕೆ ಮಲ್ಲೇಶ್‌ ಬಾಬು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ಗೆ 28...