4 ವರ್ಷಗಳ ನಂತರ ಜಾರ್ಖಂಡ್ ವಿಧಾನಸಭೆಗೆ ಬಿಜೆಪಿಯಿಂದ ವಿರೋಧ ಪಕ್ಷದ ನಾಯಕನ ಆಯ್ಕೆ

Date:

ಕರ್ನಾಟಕದಲ್ಲಿ ಸರ್ಕಾರ ರಚನೆಯಾಗಿ 6 ತಿಂಗಳು ಕಳೆದರೂ ಬಿಜೆಪಿಯಿಂದ ವಿಪಕ್ಷ ನಾಯಕನ ಆಯ್ಕೆ ಮಾಡಲಾಗಿಲ್ಲ. ಇದೇ ರೀತಿಯ ಪರಿಸ್ಥಿತಿ ಜಾರ್ಖಂಡ್‌ ರಾಜ್ಯದಲ್ಲಿ ಉದ್ಭವಿಸಿದ್ದು, ನಾಲ್ಕು ವರ್ಷಗಳ ನಂತರ ಪ್ರತಿಪಕ್ಷ ಬಿಜೆಪಿಯಿಂದ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿದೆ.

ಬಿಜೆಪಿಯ ಮಾಜಿ ಸಚಿವ ಅಮರ್ ಬೌರಿ ಅವರನ್ನು ತನ್ನ ಹೊಸ ಶಾಸಕಾಂಗ ಪಕ್ಷದ ನಾಯಕ ಎಂದು ಹೆಸರಿಸಿರುವುದರಿಂದ ಜಾರ್ಖಂಡ್‌ ವಿಧಾನಸಭೆಯ ಮುಂದಿನ ಅಧಿವೇಶನವು ನಾಲ್ಕು ವರ್ಷಗಳ ನಂತರ ಪ್ರತಿಪಕ್ಷದ ನಾಯಕನೊಂದಿಗೆ ನಡೆಯಲಿದೆ.

ಚಂದಂಕಿಯಾರಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿರುವ ಬೌರಿ ಅವರು ಈ ಹಿಂದೆ ವಿಪಕ್ಷ ನಾಯಕರಾಗಿದ್ದ ಮಾಜಿ ಸಿಎಂ ಬಾಬುಲಾಲ್ ಮರಾಂಡಿ ಅವರ ಸ್ಥಾನವನ್ನು ತುಂಬಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2020ರ ಫೆಬ್ರವರಿ 24ರಂದು ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ ಅವರನ್ನು ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಪಕ್ಷಾಂತರ ವಿರೋಧಿ ಚಟುವಟಿಕೆಯಡಿ ಸ್ಪೀಕರ್ ರವೀಂದ್ರನಾಥ್ ಮಹ್ತೋ ಅವರು ಬಾಬುಲಾಲ್ ಮರಾಂಡಿ ವಿರುದ್ಧ ಕ್ರಮ ಕೈಗೊಂಡಿರುವ ಕಾರಣ ಕಳೆದ ನಾಲ್ಕು ವರ್ಷಗಳಿಂದ ವಿಪಕ್ಷ ನಾಯಕನ ಸ್ಥಾನಮಾನವನ್ನು ನೀಡಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಪ್ರಶ್ನೆಗೆ ಲಂಚ: ಸಿಬಿಐಗೆ ಸ್ವಾಗತ ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಜಾರ್ಖಂಡ್ 5ನೇ ವಿಧಾನಸಭೆ ಡಿಸೆಂಬರ್ 2019 ರಿಂದ ಹನ್ನೊಂದು ಅಧಿವೇಶನಗಳನ್ನು ವಿಪಕ್ಷ ನಾಯಕನಿಲ್ಲದೆ ಕಾರ್ಯನಿರ್ವಹಿಸಿದೆ. ಆದರೆ, ಬಿಜೆಪಿಯ ಹೊಸ ನಿರ್ಧಾರದಿಂದ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕನೊಂದಿಗೆ ಅಧಿವೇಶನ ನಡೆಯಲಿದೆ.

ಅಮರ್ ಬೌರಿ ಅವರನ್ನು ಶಾಸಕಾಂಗ ಪಕ್ಷದ ನಾಯಕ ಎಂದು ಹೆಸರಿಸುವುದರ ಜೊತೆಗೆ, ಪಕ್ಷವು ಜೆಪಿ ಪಟೇಲ್ ಅವರನ್ನು ಪಕ್ಷದ ವಿಪ್ ಎಂದು ಹೆಸರಿಸಿದೆ.

ಬಿಜೆಪಿಯ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರಾದ ಬೌರಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವುದರೊಂದಿಗೆ, ಆದಿವಾಸಿ-ದಲಿತರು-ಒಬಿಸಿಗಳ ಮತ ಪಡೆಯಲು ಪಕ್ಷವು ತನ್ನ ನೆಲೆಯನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸಿದೆ ಎಂದು ಬಿಜೆಪಿಯ ಆಪ್ತಮೂಲಗಳು ತಿಳಿಸಿವೆ.

ಜಾರ್ಖಂಡ್‌ನಲ್ಲಿ ಜೆಎಂಎಂ ಪಕ್ಷ ಆಡಳಿತ ನಡೆಸುತ್ತಿದ್ದು, ಹೇಮಂತ್ ಸೋರೇನ್‌ ಮುಖ್ಯಮಂತ್ರಿಯಾಗಿದ್ದಾರೆ. ಜೆಎಂಎಂ ಇಂಡಿಯಾ ಮೈತ್ರಿಕೂಟದ ಭಾಗವಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ ಟಿಕೆಟ್‌ | ಬಣ ಬಡಿದಾಟಕ್ಕೆ ಪೂರ್ಣವಿರಾಮವಿಟ್ಟ ಸಿಎಂ, ಡಿಸಿಎಂ; ಅಭ್ಯರ್ಥಿ ಯಾರು?

ಕೋಲಾರ ಟಿಕೆಟ್‌ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಉಂಟಾಗಿದ್ದ ಬಣಗಳ ಬಡಿದಾಟವನ್ನು...

ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...