ಜನವರಿ ಕೊನೆಯ ವಾರದಲ್ಲಿ ಉದ್ಯೋಗ ಮೇಳ; ಸಚಿವರ ತಂಡ ರಚಿಸಿದ ಸಿದ್ದರಾಮಯ್ಯ

Date:

ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಸಿದರು. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನೊಳಗೊಂಡ ಸಚಿವರ ತಂಡ ರಚಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಚಿವರ ಈ ತಂಡವು ಉದ್ಯೋಗದಾತರೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುವುದು. ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಶಿಫಾರಸುಗಳನ್ನು ಮಾಡಬೇಕು. ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತೂ ಸಹ ಪರಿಶೀಲಿಸಬೇಕು” ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

“ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿಯನ್ನು ಹೊಂದುವ ಅಗತ್ಯವಿದೆ. ಈ ನೀತಿಯನ್ನು ರೂಪಿಸಲು ಸಿದ್ಧತೆ ನಡೆಸಬೇಕು” ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಡಾ. ಜಿ. ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...