ಒಡಿಶಾ ರೈಲು ದುರಂತ : ಜೋ ಬೈಡನ್‌ ಸೇರಿ ಜಗತ್ತಿನ ಹಲವು ಗಣ್ಯರಿಂದ ಸಂತಾಪ

Date:

ರೈಲು ದುರಂತಕ್ಕೆ 288 ಮಂದಿ ಪ್ರಯಾಣಿಕರು ಬಲಿ

ಸಾವಿರಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಒಡಿಶಾದ ಬಾಲಸೋರ್‌ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಕುಂಟುಂಬಕ್ಕೆ ಅಮೆರಿಕಾದ ಅಧ್ಯಕ್ಷ ಜೋ ಬೈಡನ್‌, ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌, ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಸೇರಿದಂತೆ ಜಗತ್ತಿನ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಾಲಸೋರ್‌ನಲ್ಲಿ ಶುಕ್ರವಾರ ತಡರಾತ್ರಿ ನಡೆದ ರೈಲು ದುರಂತದಲ್ಲಿ 288 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಸಾವಿರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚು ಸಾಧ್ಯತೆ ಇದೆ.

ಘಟನೆಗೆ ಸಂಬಂಧಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೈಡನ್‌, “ಭಾರತದಲ್ಲಿ ಜರುಗಿದ ರೈಲು ಅಪಘಾತದ ಬಗ್ಗೆ ತಿಳಿದು ನಾನು ಮತ್ತು ನನ್ನ ಪತ್ನಿ ಜಿಲ್‌ ಇಬ್ಬರೂ ಆಘಾತಕ್ಕೊಳಗಾಗಿದ್ದೇವೆ” ಎಂದಿದ್ದಾರೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಾಂತ್ವಾನ ಹೇಳಿರುವ ಬೈಡನ್‌, ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ್ದಾರೆ.

ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಟ್ವೀಟ್‌ ಮಾಡಿ, “ರೈಲು ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಬೇಗ ಗುಣಮುಖರಾಗಲಿ” ಎಂದು ಪ್ರಾರ್ಥಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾದವರನ್ನು ಶ್ಲಾಘಿಸಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಕೂಡ ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವಾನ ಹೇಳಿದ್ದಾರೆ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಫ್ರಾನ್ಸ್‌ನ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರನ್‌ ಕೂಡ ಟ್ವೀಟ್‌ ಮಾಡಿ, “ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಸಾವನ್ನಪಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಇಂತಹ ಸಮಯದಲ್ಲಿ ಫ್ರಾನ್ಸ್‌, ಭಾರತದ ಬೆಂಬಲಕ್ಕೆ ನಿಲ್ಲಲಿದೆ” ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

27ನೇ ವಯಸ್ಸಿಗೆ ಬದುಕು ಮುಗಿಸಿದ ‘ಆ್ಯಂಗ್ರಿ ರಾಂಟ್‌ಮ್ಯಾನ್’ ಖ್ಯಾತಿಯ ಯೂಟ್ಯೂಬರ್  ಅಬ್ರದೀಪ್ ಸಾಹ!

ಸೋಷಿಯಲ್ ಮೀಡಿಯಾದಲ್ಲಿ 'ಆ್ಯಂಗ್ರಿ ರಾಂಟ್‌ಮ್ಯಾನ್' ಎಂದೇ ಜನಪ್ರಿಯವಾಗಿದ್ದ ಹಿಂದಿ ಯೂಟ್ಯೂಬರ್ ಅಬ್ರದೀಪ್...

ಸುಪ್ರೀಂ ಕೋರ್ಟ್‌ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ರನ್ನು ಶ್ಲಾಘಿಸಿದ ಕೇಂದ್ರ ಸರ್ಕಾರ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು 1991ರಲ್ಲಿ ಆರ್ಥಿಕ ಉದಾರೀಕರಣ ಮತ್ತು ಭಾರತೀಯ...

ಸಲ್ಮಾನ್ ಖಾನ್ ಮನೆಗೆ ಗುಂಡಿನ ದಾಳಿ ಪ್ರಕರಣ: ಇನ್ನೋರ್ವ ಆರೋಪಿ ಬಂಧನ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ಮನೆಯ ಹೊರಗೆ ಗುಂಡಿನ...

ರಾಷ್ಟ್ರೀಯ ಭದ್ರತೆ ಹಿನ್ನೆಲೆ; ಟ್ವಿಟರ್ ಸ್ಥಗಿತಗೊಳಿಸಿದ ಪಾಕಿಸ್ತಾನ

ಪಾಕಿಸ್ತಾನ ಆಂತರಿಕ ಸಚಿವಾಲಯವು ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಸಾಮಾಜಿಕ ಮಾಧ್ಯಮ ಎಕ್ಸ್(ಹಳೆಯ...