ಕಡಬ | ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ; ಕಿಡಗೇಡಿ ಬಂಧನ

Date:

ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಮುಸುಕುದಾರಿ ಯುವಕನೊಬ್ಬ ಆ್ಯಸಿಡ್ ಎರಚಿದ್ದು, ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿವೆ.

ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿಯರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗುತ್ತಿದೆ. ಆ್ಯಸಿಡ್ ಎರಚಿದ ಯುವಕನನ್ನು ವಿದ್ಯಾರ್ಥಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಅಬಿನ್ ಎಂದು ತಿಳಿದುಬಂದಿದೆ.

ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆರೋಪಿ ಅಬಿನ್​ ಆ್ಯಸಿಡ್ ದಾಳಿ ನಡೆಸಿದ್ದಾನೆ. ಆರೋಪಿ ಕೇರಳದ ಮಲ್ಲಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂಬಿಎ ವಿದ್ಯಾರ್ಥಿ ಎಂಬುದಾಗಿ ಪ್ರಾಥಮಿಕ ಮಾಹಿತಿಯಲ್ಲಿ ಗೊತ್ತಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಸ್ಪ್ಯಾನಿಷ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್- ಮೂವರಿಗೆ ನ್ಯಾಯಾಂಗ ಬಂಧನ

ಆರೋಪಿ ಮಾಸ್ಕ್, ಹ್ಯಾಟ್ ಹಾಕಿಕೊಂಡು ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಸದ್ಯ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಹೆ. ಹಾಗೂ ಆರೋಪಿ ಅಬಿನ್​ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಲು ಕಾರಣವೇನು? ಆ್ಯಸಿಡ್ ಹೇಗೆ ಸಿಕ್ಕಿದೆ? ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

 

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...