ಕಲಬುರಗಿ| ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ: ಪ್ರಾಂಶುಪಾಲ, ವಾರ್ಡನ್ ಅಮಾನತು

Date:

ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಚಲನವಲನ ಮತ್ತು ಆಯೋಗ್ಯ ಬದಲಾವಣೆಯ ಬಗ್ಗೆ ಗಮನ ಹರಿಸಿದೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ವಸತಿ ಶಾಲೆಯ ಪ್ರಾಂಶುಪಾಲ ಮಲಕಪ್ಪ ಬಿರಾದಾರ್ ಮತ್ತು ವಸತಿ ನಿಲಯದ ವಾರ್ಡನ್‌ ಜಾವೇದ್ ಪಟೇಲ್ ಅವನ್ನು ಅಮಾನತು ಮಾಡಲಾಗಿದೆ.

ಜಿಲ್ಲೆಯ ಗ್ರಾಮವೊಂದರ ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಕಳೆದ ತಿಂಗಳು ಸೊಲ್ಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿನ ಜನ್ಮ ನೀಡಿದ್ದರು. ಆಕೆ ಗರ್ಭಿಣಿಯಾಗಿ ಹೆರಿಗೆ ಆಗುವವರೆಗೂ ಆಕೆಯ ಬಗ್ಗೆ ಯಾರು ಗಮನಹರಿಸಿಲ್ಲ. ವಿದ್ಯಾರ್ಥಿಗಳನ್ನು ನೋಡಿಕೊಳ್ಳುವ ವಿಚಾರದಲ್ಲಿ ಪ್ರಾಂಶುಪಾಲರು ಮತ್ತು ವಾರ್ಡನ್‌ ನಿರ್ಲಕ್ಷ್ಯತನದಿಂದಾಗಿ ಘಟನೆ ನಡೆದಿದೆ ಎಂದು ಅವರಿಬ್ಬರನ್ನು ಕಾರ್ಯನಿರ್ವಾಹಕ ನಿರ್ದೇಶಕ ನವೀನಕುಮಾರ್ ರಾಜು ಅವರು ಅಮಾನತು ಮಾಡಿ ಆದೇಶಿಸಿದ್ದಾರೆ .

ಅವರಿಬ್ಬರ ಅಮಾನತನ್ನು ಖಂಡಿಸಿ ವಿದ್ಯಾರ್ಥಿಗಳು ಶಾಲೆಯ ಬಳಿ ಪ್ರತಿಭಟನೆ ನಡೆಸಿದ್ದಾರೆ. ಅಮಾನತನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಸಂಜೀವ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ್ ನಾಯಕ್ ಭೇಟಿ ನೀಡಿದ್ದಾರೆ. ವಿದ್ಯಾರ್ಥಿಗಳನ್ನು ಸಮಾಧಾನಿಸಿ, ತರಗತಿಗೆ ಕಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...