ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾದ ರಾಜ್ಯೋತ್ಸವ ಪ್ರಶಸ್ತಿ-2023 ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಇಲಾಖೆ ಸಚಿವ ಡಾ. ಜಿ.ಪರಮೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಉನ್ನತ ಶಿಕ್ಷಣ ಇಲಾಖೆ ಸಚಿವ ಸುಧಾಕರ್, ನಗರಾಭಿವೃದ್ಧಿ ಇಲಾಖೆಯ ಸಚಿವ ಸುರೇಶ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿ, ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದೆ. pic.twitter.com/czqAjLeXlh
— DK Shivakumar (@DKShivakumar) November 1, 2023
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ʻಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲʼ ಎಂದು ಸಿಎಂ ಯಾರನ್ನು ಹೆದರಿಸುತ್ತಿದ್ದಾರೆ?
13 ಮಹಿಳೆಯರು ಮತ್ತು 54 ಪುರುಷರು ಹಾಗೂ ಒಬ್ಬರು ಮಂಗಳ ಮುಖಿ ಸೇರಿದಂತೆ ವಯಕ್ತಿಕವಾಗಿ 68 ಸಾಧಕರಿಗೆ ಹಾಗೂ ಕರ್ನಾಟಕ ಸಂಭ್ರಮ-50 ರ ಪ್ರಯುಕ್ತ ವಿಶೇಷವಾಗಿ 10 ಸಂಘ-ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಯಿತು.
ಪ್ರಶಸ್ತಿ ಪಡೆದವರಿಗೆ ರೂ 5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನದ ಪದಕವನ್ನು ನೀಡಿ ಗೌರವಿಸಲಾಯಿತು.