ರಾಜ್ಯವನ್ನು ಕಾಂಗ್ರೆಸ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಲಿದೆ; ಬಿಜೆಪಿ ಆರೋಪ

Date:

ಹಿಂದೆಂದೂ ಕಂಡು, ಕೇಳರಿಯದಂತಹ ಆರ್ಥಿಕ ಸಂಕಷ್ಟಕ್ಕೆ ಕಾಂಗ್ರೆಸ್ ನಮ್ಮ ರಾಜ್ಯವನ್ನು ಸಿಲುಕಿಸಲಿದೆ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, “ಈ ಹಿಂದಿನ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರವು ಕೋವಿಡ್‌ನಂತಹ ಆರ್ಥಿಕ ಬಿಕ್ಕಟ್ಟಿನ ಸಂಕಷ್ಟದ ನಡುವೆಯೂ, ಸಂಪನ್ಮೂಲವನ್ನು ಕ್ರೋಡೀಕರಿಸಿ, ಬಜೆಟ್ ಗಾತ್ರವನ್ನು ಹೆಚ್ಚಿಸಿ, ಉಳಿತಾಯ ಬಜೆಟ್ ಅನ್ನು ಮಂಡಿಸಿತ್ತು” ಎಂದು ಹೇಳಿದೆ.

“ಬಿಜೆಪಿಯ ಉಳಿತಾಯ ಬಜೆಟ್ ರಾಜ್ಯದ ಆರ್ಥಿಕ ಸ್ಥಿತಿಯನ್ನು ಪುನಶ್ಚೇತನಗೊಳಿಸಿ, ನಾವೀನ್ಯತೆಯ ಸೂಚ್ಯಂಕದಲ್ಲಿ ರಾಜ್ಯ ನಂಬರ್ 1 ಸ್ಥಾನ ಪಡೆದಿತ್ತು. ಆದರೆ, ಕುರ್ಚಿ ಹಿಡಿಯಬೇಕು ಎಂಬ ಏಕೈಕ ಕಾರಣಕ್ಕೆ, ಅವಾಸ್ತವಿಕ ಗ್ಯಾರಂಟಿಗಳನ್ನು ಘೋಷಿಸಿ, ಅವುಗಳನ್ನು ಈಡೇರಿಸಲು ಕರ್ನಾಟಕದ ಆರ್ಥಿಕತೆಯನ್ನು ವಿನಾಶಗೊಳಿಸುತ್ತಿದೆ” ಎಂದು ಕಿಡಿಕಾರಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಿದ್ದರಾಮಯ್ಯ ಅವರ ಅವಧಿಯಲ್ಲಿ, ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಅನುದಾನಕ್ಕೂ ಸಹ ಕಡಿತ ಬೀಳಲಿದ್ದು, ರಾಜ್ಯದ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಲಿದೆ. ಹಿಂದೆಂದೂ ಕಂಡು, ಕೇಳರಿಯದಂತಹ ಆರ್ಥಿಕ ಸಂಕಷ್ಟಕ್ಕೆ ಕಾಂಗ್ರೆಸ್ ನಮ್ಮ ರಾಜ್ಯವನ್ನು ಸಿಲುಕಿಸಲಿದೆ” ಎಂದು ಆರೋಪಿಸಿದೆ.

ಈ ಸುದ್ದಿ ಓದಿದ್ದೀರಾ? ಗೃಹಲಕ್ಷ್ಮಿ ಅರ್ಜಿಗೆ ಯಾರೂ ಹಣ ಕೊಡಬೇಡಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೇಹಾ ಕೊಲೆ | ನಿರಂಜನ್ ಮನೆಗೆ ಸಚಿವ ಎಚ್‌ ಕೆ ಪಾಟೀಲ್ ಭೇಟಿ, ನಿರಂಜನ್‌ ಜೊತೆ ಸಿಎಂ ಮಾತು

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

ಚುನಾವಣಾ ಅಖಾಡದಲ್ಲಿ ಒಂದಿಷ್ಟು ಮಾತು – ದೇವನೂರ ಮಹಾದೇವ

ನಾನೀಗ ಹಿಂದಿನದು ಮಾತಾಡಲೋ ಅಥವಾ ಈಗಲದು ಮಾತಾಡಲೋ ಗೊಂದಲದಲ್ಲಿದ್ದೇನೆ. ಹಿಂದಿನದನ್ನು ಹೇಳದಿದ್ದರೆ...

’70 ಕೋಟಿ ಭಾರತೀಯರಿಗಿಂತ ಅಧಿಕ ಸಂಪತ್ತು 21 ಬಿಲಿಯನೇರ್‌ಗಳಲ್ಲಿದೆ ಅನ್ನೋದನ್ನ ಮೋದಿ ಹೇಳಲ್ಲ’

ದ್ವೇ‍ಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ...

ಲೋಕಸಭಾ ಚುನಾವಣೆ | ಕಲಬುರಗಿಯಲ್ಲಿ ಅಳಿಯನ ಸ್ಪರ್ಧೆ – ಮಾವನಿಗೆ ಪ್ರತಿಷ್ಠೆ

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ತವರು ರಾಜ್ಯ ಕರ್ನಾಟಕದಲ್ಲಿ...